ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

| Updated By: ವಿವೇಕ ಬಿರಾದಾರ

Updated on: Jan 09, 2024 | 8:31 AM

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಮಾಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ. ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಆರಂಭಿಸಿದ್ದಾರೆ.

ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
ಲೋಕಾಯುಕ್ತ
Follow us on

ಬೆಂಗಳೂರು, ಜನವರಿ 09: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಹಲವು ಸರ್ಕಾರಿ ಅಧಿಕಾರಿಗಳ (Government Officers) ಮನೆ ಮೇಲೆ ಮಾಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಒಟ್ಟು ಏಳು ಕಡೆ ದಾಳಿ ಮಾಡಿದ್ದಾರೆ.  ಬಳ್ಳಾರಿಯ ಐದು ಹಾಗೂ ಬೆಂಗಳೂರಿನ ಎರಡು ಕಡೆ ಶೋಧ ನಡೆಸಿದ್ದಾರೆ.  ಕುಂದಣ ಪಿಡಿಒ ಪದ್ಮನಾಬ್ ಅವರಿ​ಗೆ ಸೇರಿದ​​​​ ಮೂರು ಮನೆ ಮೆನಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದರೆ. ಜೊತೆಗೆ ದಾಬಸ್​ಪೇಟೆ ಹಾಗೂ ತುಮಕೂರಿನಲ್ಲಿ ಸಹ ಪದ್ಮನಾಬ್​ಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನಾಗರಾಜ್ ಅವರು ಕೂಡ್ಲಿಗಿ ಪಟ್ಟಣ, ಗುಡೇಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್, ಮನೆ, ಜಮೀನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ತುಮಕೂರು: ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆ‌ಯಿಟ್ಟಿದ್ದ ಸರ್ಕಾರಿ ವೈದ್ಯ ಲೋಕಾಯುಕ್ತ ಬಲೆಗೆ

ಕೆಲ ದಿನಗಳ‌ ಹಿಂದೆ ನಾಗರಾಜ್ 7.50 ಲಕ್ಷ ಹಣ ಪಡೆಯುವಾಗ  ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದನು. ಇನ್ನು ಮಂಡ್ಯ ಜಿಲ್ಲೆಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿ ಮಂಜೇಶ್ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ‌‌ ರೇಡ್ ಮಾಡಲಾಗಿದೆ. ಮಂಜೇಶ್ ಸಂಬಂಧಿ ಸುರೇಂದ್ರಗೆ ಸೇರಿದ ​​ಮಳವಳ್ಳಿ ತಾಲೂಕಿನ ಹಲಗೂರು, ಗುಂಡಾಪುರ ಗ್ರಾಮದ ಮನೆಗಳ ಮೇಲೆ ಮತ್ತು ಮಂಜೇಶ್ ಅಜ್ಜಿ ವಾಸಿಸುವ ಮದ್ದೂರು ತಾಲೂಕಿನ ಎಸ್.ಐ.ಕೋಡಿಹಳ್ಳಿಯಲ್ಲಿ‌ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:25 am, Tue, 9 January 24