ವಿಜಯಪುರ, ಕಲಬುರಗಿಯಲ್ಲಿ ಲೋಕಾಯುಕ್ತ ದಾಳಿ: ಇಬ್ಬರು ಅಧಿಕಾರಿಗಳ ಬಂಧನ

ಲೋಕಾಯುಕ್ತ ಅಧಿಕಾರಿಗಳು ಇಂದು (ಮೇ 18) ಏಕಕಾಲಕ್ಕೆ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ದಾಳಿ ಮಾಡಿದ್ದು, ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರದ ಸರ್ವೆಯರ್ ಮತ್ತು ಕಲಬುರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಜಯಪುರ, ಕಲಬುರಗಿಯಲ್ಲಿ ಲೋಕಾಯುಕ್ತ ದಾಳಿ: ಇಬ್ಬರು ಅಧಿಕಾರಿಗಳ ಬಂಧನ
ಕರ್ನಾಟಕ ಲೋಕಾಯುಕ್ತ
Edited By: ವಿವೇಕ ಬಿರಾದಾರ

Updated on: May 18, 2024 | 3:04 PM

ವಿಜಯಪುರ/ಕಲಬುರಗಿ, ಮೇ 18: ಲೋಕಾಯುಕ್ತ (Lokayukta) ಅಧಿಕಾರಿಗಳು ಇಂದು (ಮೇ 18) ಏಕಕಾಲಕ್ಕೆ ಕಲಬುರಗಿ (Kalaburagi) ಮತ್ತು ವಿಜಯಪುರ (Vijayapura) ಜಿಲ್ಲೆಯಲ್ಲಿ ದಾಳಿ ಮಾಡಿದ್ದು, ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರದ ಸರ್ವೆಯರ್ ಮಲ್ಲಪ್ಪ ಜಂಬಗಿ ಮತ್ತು ಕಲಬುರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್​​ಡಿಎ ಶಿವಶಂಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಜಯಪುರದ ಸರ್ವೆಯರ್ ಮಲ್ಲಪ್ಪ ಜಂಬಗಿ ಮತ್ತು ಸಹಾಯಕ ಗುರುದತ್ತ ಬಿರಾದಾರ‌ ಜಮೀನಿನ ತಾತ್ಕಾಲಿಕ ಪೋಡಿ ಮಾಡಲು ಪ್ರಕಾಶ್ ಸಿಂಗೆ ಎಂಬುವರಿಂದ 47,500 ರೂ. ಲಂಚ ಪಡೆಯುತ್ತಿದ್ದರು. ಈ ವಿಚಾರ ತಿಳಿದ ಲೋಕಾಯುಕ್ತ ಎಸ್ಪಿ ಮಲ್ಲೇಶ, ಡಿಎಸ್​ಪಿ ಸುರೇಶ್ ರೆಡ್ಡಿ, ಸಿಪಿಐ ಆನಂದ ಟಕ್ಕನವರ್ ಮತ್ತು ಆನಂದ ದೋಣಿ ನೇತೃತ್ವದ ತಂಡ ಧಿಡೀರನೆ ದಾಳಿ ಮಾಡಿ, ಇಬ್ಬರನ್ನೂ ರೆಡ್​ ಹ್ಯಾಂಡ್​ ಆಗಿ ಬಂಧಿಸಿದ್ದಾರೆ.

ಇನ್ನು ಕಲಬುರಗಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್​ಡಿಎ ಶಿವಶಂಕರ ಎಸ್​ಎಸ್​ಎಲ್​ಸಿ ಅಂಕಪಟ್ಟಿ ನಕಲು ಪತ್ರಿ ನೀಡಲು ಅರುಣ್ ಖತೀಬ್ ಎಂಬುವರಿಂದ ಐದು ಸಾವಿರ ಹಣ ಪಡೆಯುತ್ತಿದ್ದರು. ಈ ವಿಚಾರ ತಿಳಿದು ಲೋಕಾಯುಕ್ತ ಎಸ್​ಪಿ ಜಾನ್ ಆಂಟೋನಿ ಮತ್ತು ಡಿವೈಎಸ್​ಪಿ ಗೀತಾ ಬೇನಾಳ್ ನೇತೃತ್ವದ ತಂಡ ದಾಳಿ ಮಾಡಿ ಅಧಿಕಾರಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಚುನಾವಣೆ ಹೊತ್ತಲ್ಲೇ ಡಿಕೆ ಶಿವಕುಮಾರ್​ಗೆ ಶಾಕ್, ಲೋಕಾಯುಕ್ತದಿಂದ ಬಂತು ನೋಟಿಸ್

ಪಿಡಿಒ ಲೋಕಾಯುಕ್ತ ಬಲೆಗೆ

ದೇವನಹಳ್ಳಿ: 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ಅರೆಸ್ಟ್ ಆಗಿದ್ದರು. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು. ಅದ್ರಲ್ಲಿ 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿ ಕಚೇರಿ ಆವರಣದಲ್ಲಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us