AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್; ರಾಜ್ಯದ ಹಲವೆಡೆ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ.​​

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್; ರಾಜ್ಯದ ಹಲವೆಡೆ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ‌
TV9 Web
| Edited By: |

Updated on: Jan 31, 2024 | 8:17 AM

Share

ಬೆಂಗಳೂರು, ಜ.31: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ (Government Officials) ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಮಂಡ್ಯದ PWD ಅಧಿಕಾರಿ ಹರ್ಷ ಮನೆ ಮೇಲೆ ಲೋಕಾ ದಾಳಿ

ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ ಅವರ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಮಂಡ್ಯ ಜಿಲ್ಲೆಯಲ್ಲಿರುವ ಸಂಬಂಧಿಕರ ಮನೆಗಳು, ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್​ಹೌಸ್​​ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಹಾಸನದ ಆಹಾರ ನೀರಿಕ್ಷಕರ ಮನೆ, ಕಚೇರಿ ಮೇಲೆ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಫುಡ್ ಇನ್ಸ್‌ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಚೇರಿ ಹಾಗೂ ನಿವಾಸದಲ್ಲಿ ತಲಾಶ್ ಕೈಗೊಂಡಿದ್ದಾರೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ.

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮನೆ ಮೇಲೆ ದಾಳಿ‌

ಚಿಕ್ಕಮಗಳೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ‌ ನಡೆಸಿದೆ. 13 ವರ್ಷದಿಂದ ಅಧಿಕ ಅಸ್ತಿ ಹೊಂದಿರುವ ಆರೋಪದಡಿಯಲ್ಲಿ ಲೋಕಾಯುಕ್ತ ಇನ್ಸ್ ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಕಡೂರು ಪಟ್ಟಣದಲ್ಲಿರುವ ನೇತ್ರಾವತಿ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು: ಕಳ್ಳತನಕ್ಕಾಗಿಯೇ ಹೈದರಾಬಾದ್​ನಿಂದ ಬಂದು ಮನೆಗಳನ್ನು ದೋಚುತ್ತಿದ್ದ ಖದೀಮರು ಅರೆಸ್ಟ್

ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ರೇಡ್​​

ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ.​​ ಮೈಸೂರಿನ ಜೆ.ಪಿ.ನಗರದ ಮನೆ, ವಿಜಯನಗರದ ಅಪಾರ್ಟ್‌ಮೆಂಟ್, ಕೆ.ಆರ್.ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ಞೇಂದ್ರ ಸಹೋದರನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

KRDL ಇಂಜಿನಿಯರ್​ ಹನುಮಂತರಾಯಪ್ಪ ಮನೆ ಮೇಲೆ ದಾಳಿ

ತುಮಕೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್​ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ