ಕರ್ನಾಟಕದ ಹಲವು ಆರ್​ಟಿಓ ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ

ಕರ್ನಾಟಕದಲ್ಲಿನ ಹಲವು ಆರ್​ಟಿಓ ಚೆಕ್​​ ಪೋಸ್ಟ್​​ ಸಿಬ್ಬಂದಿ ವಿರುದ್ಧ ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಂ ಬೆಳಗ್ಗೆ ಏಕಕಾಲಕ್ಕೆ ಕೋಲಾರ, ಬೀದರ್​ ಜಿಲ್ಲೆಯ ಆರ್​​ಟಿಓ ಚೆಕ್​ ​ಪೋಸ್ಟ್​ಗಳ ಮೇಲೆ ದಾಳಿ ಮಾಡಿದ್ದಾರೆ.

Follow us
| Updated By: ವಿವೇಕ ಬಿರಾದಾರ

Updated on:Oct 08, 2024 | 10:40 AM

ಬೆಂಗಳೂರು, ಅಕ್ಟೋಬರ್​ 08: ಲೋಕಾಯುಕ್ತ (Lokayukta) ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​​ಗಳ (RTO Checkpost) ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್​ಟಿಓ ಚೆಕ್​ಪೋಸ್ಟ್​​ಗಳ ಮೇಲೆ ಅಧಿಕಾರಿಗಳು ಇಂದು (ಅ.08) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್​​ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

ಇದನ್ನೂ ಓದಿ: ಮುಡಾ ಕೇಸ್​: ಭೈರತಿ ಸುರೇಶ್​, ಲೋಕಾಯುಕ್ತ ಎಸ್​ಪಿ ವಿರುದ್ಧ ದೂರು

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್​ಟಿಓ ಚೆಕ್ ಪೋಸ್ಟ್​​ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಬೀದರ್ ಮತ್ತು ಡಿವೈಎಸ್​ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್​ಟಿಓ ಚೆಕ್ ​ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹಾಗೇ, ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್​ಟಿಓ ಚೆಕ್‌ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿದೆ. ಅಧಿಕಾರಿಗಳು ಚೆಕ್ ಪೋಸ್ಟ್​​ನಲ್ಲಿದ್ದ ಹಣವನ್ನು ವಶಪಡಿಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Tue, 8 October 24

ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್