ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯದ ಹಲವಡೆ ಲೋಕಾಯುಕ್ತ ದಾಳಿ, ಪಿಡಿಒ ವಶಕ್ಕೆ

ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಅಕ್ರಮ ಆಸ್ತಿ ಗಳಿಕೆ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಉತ್ತರ ಕನ್ನಡ, ಬೀದರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು (ಮಾ.27) ಬೆಳ್ಳಂ ಬೆಳಿಗ್ಗೆ ದಾಳಿ ಮಾಡಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿ ಪಿಡಿಓ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯದ ಹಲವಡೆ ಲೋಕಾಯುಕ್ತ ದಾಳಿ, ಪಿಡಿಒ ವಶಕ್ಕೆ
ಲೋಕಾಯುಕ್ತ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 27, 2024 | 9:57 AM

ಬೆಂಗಳೂರು​, ಮಾರ್ಚ್​ 27: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ 13 ಅಧಿಕಾರಿಗಳಿಗೆ ಸಂಬಂಧಪಟ್ಟ ಮನೆ, ಕಚೇರಿ ಸೇರಿದಂತೆ 60 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಬೆಂಗಳೂರು, ಉಡುಪಿ, ಕಾರವಾರ, ಮೈಸೂರು, ಕೊಡಗು, ಬೀದರ್, ಧಾರವಾಡ, ಕೋಲಾರ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.  ರಾಜ್ಯದ ಅತಿ ಶ್ರೀಮಂತ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಪಡೆದಿರುವ ರಾಮನಗರ (Ramnagar) ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಓ ಯತೀಶ್ ಚಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈಗಲ್ಟನ್ ರೆಸಾರ್ಟ್​​ನಲ್ಲಿ ಪಿಡಿಓ‌ ಯತೀಶ್​ನನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ‌ ಯತೀಶ್​ ಚಂದ್ರ ಅವರಿಗೆ ಸೇರಿದ ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದೆ.

ಪಿಡಿಒ ಯತೀಶ್​ ಚಂದ್ರ ಕಳೆದೆರಡು ವರ್ಷಗಳಲ್ಲಿ ಕೋಟ್ಯಾಂತರ ರೂಪಾಯಿ ವ್ಯವಹಾರ ಮಾಡಿದ್ದಾರೆ. ಯತೀಶ್ ಮೈಸೂರಿನಲ್ಲಿ ಪತ್ನಿ ಹೆಸರಿನಲ್ಲಿ ಮನೆ ಕಟ್ಟಿಸುತ್ತಿದ್ದಾರೆ. ಮನೆಗೆ ಐದು ಕೋಟಿಗೂ ಅಧಿಕ ಖರ್ಚು ಮಾಡುತ್ತಿದ್ದಾರೆ. ಯತೀಶ್​ ಮೈಸೂರಿನಲ್ಲಿ ಈಗಾಗಲೆ ಎರಡು ಮನೆ ಹೊಂದಿದ್ದಾರೆ.

ಇನ್ನು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಚೀಫ್ ಇಂಜಿನಿಯರ್ ರಂಗನಾಥ್ ಅವರಿಗೆ ಸೇರಿದ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿ ಮಾರ್ಪಟ್ಟಿವೆ: ಲೋಕಾಯುಕ್ತ ಕೋರ್ಟ್​

ಉತ್ತರ ಕನ್ನಡ ಮತ್ತು ಬೀದರ್ ​ಜಿಲ್ಲೆಯ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಆರ್. ರೇವಣಕರ್ ಅವರ ಕಾರವಾರದ ಐಶ್ವರ್ಯ ರೆಸಿಡೆನ್ಸಿಯಲ್​​ನಲ್ಲಿರುವ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಬೀದರ್​ ಜಿಲ್ಲೆಯಲ್ಲಿ ಭಾಲ್ಕಿ ಕಾರಂಜಾ ವಿಭಾಗದ ಎಲೆಕ್ಟ್ರಿಕಲ್ ಎಂಜಿನಿಯರ್​ ಶಿವಕುಮಾರ್​ ಸ್ವಾಮಿ ಅವರಿಗೆ ಸೇರಿದ ಬೀದರ್​ನ ಅಗ್ರಿಕಲ್ಚರ್ ಕಾಲೋನಿಯಲ್ಲಿರುವ ಮನೆ, ಕಲಬುರಗಿಯ ಎಂ.ಬಿ. ಕಾಲೋನಿಯಲ್ಲಿರುವ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಚನ್ನಪಟ್ಟಣ ತಾಲೂಕಿನ ಮೈಲನಾಯಕನ ಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಶೀಬಾ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪಿಡಿಒ ಶೀಬಾ ಕಳೆದ‌ ಒಂದು ತಿಂಗಳಿನಿಂದ ರಜೆಯಲ್ಲಿದ್ದಾರೆ.

ಚಿಕ್ಕಬಳ್ಳಾಫುರ ಕೆಆರ್​ಡಿಎಲ್​ ಅಧಿಕಾರಿ ಮನೆ ಮೇಲೆ ದಾಳಿ

ಚಿಕ್ಕಬಳ್ಳಾಫುರ ಕೆಆರ್​ಡಿಎಲ್​ನ ಅಧಿಕಾರಿ ಸದಾಶಿವಯ್ಯ ಅವರಿಗೆ ಸೇರಿದ ನಾಲ್ಕು ಮನೆಗಳು ಹಾಗೂ ಚಿಕ್ಕಬಳ್ಳಾಫುರ ಕೆಆರ್​ಡಿಎಲ್ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಮೈಸೂರಿನಲ್ಲಿ ಎರಡು ಮನೆಗಳು, ಟಿ. ನರಸಿಪುರದ ಮನೆ, ಬೆಂಗಳೂರಿನ ಯಲಹಂಕದಲ್ಲಿರುವ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಆರ್​ಟಿಓ ಅಧಿಕಾರಿಯ ನಿವಾಸದಲ್ಲಿ ಪರಿಶೀಲನೆ

ವಿಜಯಪುರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ತೀರ್ಥ ಅವರ ವಿಜಯಪುರದ ‌ಚಾಲುಕ್ಯ ನಗರದಲ್ಲಿರುವ ನಿವಾಸ, ಜಮಖಂಡಿಯಲ್ಲಿರುವ ಮನೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.  ಅಲ್ಲದೆ ಷಣ್ಮುಖಪ್ಪ ಅವರ ಸಂಬಂಧಿಕರ ನಿವಾಸಗಳ ಮೇಲೂ ದಾಳಿ ಮಾಡಿದ್ದಾರೆ.

ಧಾರವಾಡ ಅರಣ್ಯ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ

ಧಾರವಾಡದ ಮೂಕಾಂಬಿಕಾ ನಗರದಲ್ಲಿರುವ ಅರಣ್ಯ ಸಂಶೋಧನಾ ವಿಭಾಗದ ಆರ್‌ಎಫ್‌ಒ ಮಹೇಶ್ ಹಿರೇಮಠ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್​ಪಿ ಶಂಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Wed, 27 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ