AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟರ ಬೇಟೆ: ಬೆಂಗಳೂರು ಸೇರಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ವಿವಿಧೆಡೆ ಭ್ರಷ್ಟರ ಬೇಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಎಲ್ಲೆಲ್ಲಿ ದಾಳಿ ನಡೆದಿದೆ, ಯಾವೆಲ್ಲ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ ಎಂಬ ಮಾಹಿತಿ ಇಲ್ಲಿದೆ.

ಭ್ರಷ್ಟರ ಬೇಟೆ: ಬೆಂಗಳೂರು ಸೇರಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಲೋಕಾಯುಕ್ತ ದಾಳಿ
Jagadisha B
| Edited By: |

Updated on:Mar 06, 2025 | 9:08 AM

Share

ಬೆಂಗಳೂರು, ಮಾರ್ಚ್​ 6: ಬೆಂಗಳೂರು (Bangalore) ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್​, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್.ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್​ಸಿ ವೈದ್ಯ ಜಗದೀಶ್ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.

ಕೋಲಾರದಲ್ಲಿ ಬೆಸ್ಕಾಂ ಎಂಜಿನಿಯರ್ ಮನೆ, ಕಚೇರಿ ಮೇಲೆ ದಾಳಿ

ಕೋಲಾರದಲ್ಲಿ ಬೆಸ್ಕಾಂ AEE ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಕಡೆ ದಾಳಿ ನಡೆದಿದೆ. ನಾಗರಾಜ್ ಪ್ರಸ್ತುತ ಬೆಂಗಳೂರು ರಾಜಾಜಿನಗರ AEE ಬೆಸ್ಕಾಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಗರಾಜ್ ಅವರ ನಿವಾಸ, ಕೆ.ಆರ್.ಪುರಂ ಬಳಿಯ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಮನೆ, ರಾಜಾಜಿನಗರ ಬೆಸ್ಕಾಂ ಕಚೇರಿ, ಅವರ ಸಂಬಂಧಿಕರೊಬ್ಬರ ಮನೆ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ
Image
ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌ ಹಾಕಲು ಕಾಯ್ದೆ ತಿದ್ದುಪಡಿಗೆ ನಿರ್ಧಾರ
Image
ಕಲಬುರಗಿಯಲ್ಲಿ ಗರಿಷ್ಠ ತಾಪಮಾನ, ಮೈಸೂರಿನಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ
Image
SSLC ಪ್ರಶ್ನೆ ಪತ್ರಿಕೆ ಲೀಕ್: ಯೂಟ್ಯೂಬ್, ಇನ್​ಸ್ಟಾದಲ್ಲಿ ವೈರಲ್​!
Image
ಚಿಕ್ಕಬಳ್ಳಾಪುರ, ಅಮಾನವೀಯ ಘಟನೆ: ತಾಯಿ ಅಂತ್ಯಕ್ರಿಯೆಗೆ ಹಣಕ್ಕೆ ಬೇಡಿಕೆ

ನಾಗರಾಜ್ ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮಲೇ ಮಹದೇಶ್ವರ ಬೆಟ್ಟದವರು. ಲೋಕಾಯುಕ್ತ ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ನಾಗರಾಜ್ ಕೊಳ್ಳೇಗಾಲ ಬಳಿ 6 ಎಕರೆ ಜಮೀನು, ಬೆಂಗಳೂರಿನಲ್ಲಿ ಒಂದು ಮನೆ, ಎರಡು ನಿವೇಶನಗಳು, ಕೋಲಾರ ತಾಲ್ಲೂಕು ನರಸಾಪುರ ಬಳಿ ಭೂಮಿ ಹೊಂದಿರುವುದು ಗೊತ್ತಾಗಿದೆ. ಕೋಲಾರದಲ್ಲಿ ಬೆಸ್ಕಾಂ ಎಂಜಿನಿಯರಿಂಗ್ ಆಗಿ ನಾಜರಾಜ್ ಕೆಲಸ ಮಾಡಿದ್ದರು.

ಬಾಗಲಕೋಟೆಯಲ್ಲಿ ಲೋಕಾ ದಾಳಿ, ದಾಖಲೆಗಳ ಪರಿಶೀಲನೆ

ಬಾಗಲಕೋಟೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್​ ಅವರ ಬಾಗಲಕೋಟೆ ಕಚೇರಿ, ಬೀಳಗಿ ತಾಲೂಕಿನ ತಳ್ಳಿಕೇರಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್​ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಇದನ್ನೂ ಓದಿ: ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌ ಹಾಕಲು ಕಾಯ್ದೆ ತಿದ್ದುಪಡಿಗೆ ಸರ್ಕಾರ ನಿರ್ಧಾರ: ಏನೇನು ಬದಲಾವಣೆ? ಇಲ್ಲಿದೆ ವಿವರ

ತುಮಕೂರಿನಲ್ಲಿ ವೈದ್ಯ ಡಾ.ಜಗದೀಶ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯಲ್ಲಿರುವ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯನಾಗಿರುವ ಜಗದೀಶ್​ ಅವರು ತುಮಕೂರಿನ ಮಂಜುನಾಥ್ ನಗರದಲ್ಲಿ ಹೊಂದಿರುವ ಜಗದೀಶ್​ ಕಾಂಪ್ಲೆಕ್ಸ್, ಶಿರಾ ತಾಲೂಕಿನ ಯಲ್ಪೆನಹಳ್ಳಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಜಗದೀಶ್ ಪತ್ನಿ ರೂಪಾ, ಸೋದರ ಕಾಂತರಾಜ್ ಮನೆ ಮೇಲೂ ರೇಡ್ ಮಾಡಲಾಗಿದೆ. ಶಿರಾ ತಾಲೂಕಿನ ಬರಗೂರಿನಲ್ಲಿ ತಾಯಿಯ ಹೆಸರಿನಲ್ಲಿ ಆಸ್ತಿ ಮಾಡಿರುವುದು ದಾಳಿ ವೇಳೆ ಪತ್ತೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Thu, 6 March 25

Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ