Lokayukta Raid: ಆದಾಯಕ್ಕೂ ಮೀರಿ ಗಳಿಕೆ ಆರೋಪ; ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

ಕರ್ನಾಟಕದ ವಿವಿಧೆಡೆ ಬುಧವಾರ ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆದಾಯ ಗಳಿಕೆ ಆರೋಪ ಕೇಳಿಬಂದ ಹಿನ್ನಲ್ಲೆ ಐಎಎಸ್ ಸೇರಿದಂತೆ ಹಲವು ಅಧಿಕಾರಿ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಆ ಮೂಲಕ ಬೆಳ್ಳಂ ಬೆಳಗ್ಗೆ ಶಾಕ್​ ನೀಡಲಾಗಿದೆ. ಎಲ್ಲೆಲ್ಲಿ ಮತ್ತು ಯಾರ ಯಾರ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ ಎಂಬ ಮಾಹಿತಿ ಇಲ್ಲಿದೆ.

Lokayukta Raid: ಆದಾಯಕ್ಕೂ ಮೀರಿ ಗಳಿಕೆ ಆರೋಪ; ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ
ಲೋಕಾಯುಕ್ತ
Updated By: ಗಂಗಾಧರ​ ಬ. ಸಾಬೋಜಿ

Updated on: Jul 23, 2025 | 10:24 AM

ಬೆಂಗಳೂರು, ಜುಲೈ 23: ಕರ್ನಾಟಕದ ಹಲವೆಡೆ ಬುಧವಾರದಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ (Lokayukta Raid) ಮಾಡಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು (bangaluru), ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಆ ಮೂಲಕ ಶಾಕ್ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಸದ್ಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ.

IAS ಸೇರಿ ಮೂವರು ಅಧಿಕಾರಿ ಮನೆ ಮೇಲೆ ದಾಳಿ

ಬೆಂಗಳೂರಿನಲ್ಲಿ ಐಎಎಸ್​ ಸೇರಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾ ದಾಳಿ ಮಾಡಿದೆ. ಆರ್​.ಟಿ.ನಗರದಲ್ಲಿರುವ ಹಿರಿಯ IAS ಅಧಿಕಾರಿ ವಾಸಂತಿ ಅಮರ್​ ಮನೆ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಇವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ

ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್​​ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್:ಹಲವಡೆ ಲೋಕಾಯುಕ್ತ ದಾಳಿ
ಗುಡ್ಡಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ, ಅಧಿಕಾರಿಗಳ ವಿರುದ್ಧ ದೂರು
ರಾಜ್ಯದಲ್ಲಿ 125 ವರ್ಷಗಳಲ್ಲೇ ಮೇ ತಿಂಗಳಲ್ಲಿ ಅತ್ಯಧಿಕ ಮಳೆ: 67 ಜನ ಸಾವು
ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ

ಇದನ್ನೂ ಓದಿ: Lokayukta Raid: ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

ಅದೇ ರೀತಿಯಾಗಿ ಮೈಸೂರಿನ ಸಾತಗಳ್ಳಿಯ ಜೆಪಿನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮನೆ ಮೇಲೂ ದಾಳಿ ಮಾಡಲಾಗಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪ ಕೇಳಿಬಂದಿದೆ.

ಬಳ್ಳಾರಿಯಲ್ಲಿ ಮೂರು ಕಡೆ ದಾಳಿ

ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ. ಬೆಂಗಳೂರು ಟೌನ್ ಮತ್ತು ರೂರಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ಮಾಡಿರುವ ಬೆಂಗಳೂರು ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. ಬೆಂಗಳೂರು ನಿವಾಸಿಯಾಗಿರುವ ಅಧಿಕಾರಿ ಮಾರುತಿ ಬಗಲಿ ವಿರುದ್ಧ ರಾಜ್ಯದ ಹಲವೆಡೆ ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ.

ಬೆಳ್ಳಂ ಬೆಳಿಗ್ಗೆ ಲೋಕಾ ಶಾಕ್​​: ಕಕ್ಕಾಬಿಕ್ಕಿಯಾದ ಅಧಿಕಾರಿ

ಇನ್ನು ಕೊಪ್ಪಳ ನಗರದಲ್ಲೂ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ಮಲಗಿದ್ದ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿದೇರ್ಶಕ ಶೆಕು ಚವ್ಹಾಣ್​ಗೆ ಶಾಕ್ ನೀಡಿದ್ದಾರೆ. ಲೋಕಾ ಅಧಿಕಾರಿಗಳನ್ನು ಶೆಕು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ. ​

ಇದನ್ನೂ ಓದಿ: ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಕರ್ನಾಟಕದ ಹಲವಡೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ಇನ್ಸ್‌ಪೆಕ್ಟರ್ ಸುನೀಲ ಮೇಗಳಮನಿ ನೇತೃತ್ವದಲ್ಲಿ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಶೇಕು ಚವ್ಹಾಣ್​ಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.