Kannada News Karnataka Lokayukta raids On 17 government officials House And Office Across Karnataka here Is details In Kannada
ಕರ್ನಾಟಕದಲ್ಲಿ ಏಕಕಾಲಕ್ಕೆ 75 ಕಡೆ ಲೋಕಾಯುಕ್ತ ದಾಳಿ: ಯಾವೆಲ್ಲಾ ಇಲಾಖೆ ಅಧಿಕಾರಿಗಳ ಮೇಲೆ ರೇಡ್? ಇಲ್ಲಿದೆ ಪಟ್ಟಿ
Lokayukta raids In Karnataka: 250 ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಜ್ಯಾದ್ಯಂತ ವಿವಿಧ ಇಲಾಖೆಗಳ 17 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಏಕಕಾಲದಲ್ಲಿ 75 ಕಡೆ ದಾಳಿ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಹಾಗಾದ್ರೆ, ಯಾವೆಲ್ಲಾ ಇಲಾಖೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.
ಲೋಕಾಯುಕ್ತ
Follow us on
ಬೆಂಗಳೂರು, (ಅಕ್ಟೋಬರ್ 30): ಲೋಕಾಯುಕ್ತ (Lokayukta raid) ಅಧಿಕಾರಿಗಳು ಕೆಲ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಹೌದು…ಇಂದು(ಸೋಮವಾರ) ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹಾಗೂ ಭ್ರಷ್ಟಾಚಾರ ಆರೋಪದ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಒಟ್ಟು 250 ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಜ್ಯಾದ್ಯಂತ ವಿವಿಧ ಇಲಾಖೆಗಳ 17 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಏಕಕಾಲದಲ್ಲಿ 75 ಕಡೆ ದಾಳಿ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಹಾಗಾದ್ರೆ, ಯಾವೆಲ್ಲಾ ಇಲಾಖೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.