AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಕರ್ನಾಟಕದ ಹಲವಡೆ ಲೋಕಾಯುಕ್ತ ದಾಳಿ

Lokayukta Raid: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮನೆ, ಕಚೇರಿ, ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಹಾಗಾದ್ರೆ, ಲೋಕಾಯುಕ್ತ ಅಧಿಕಾರಿಗಳು ಎಲ್ಲೆಲ್ಲಿ ಯಾರ ಮೇಲೆ ದಾಳಿ ಮಾಡಿದ್ದಾರೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಕರ್ನಾಟಕದ ಹಲವಡೆ ಲೋಕಾಯುಕ್ತ ದಾಳಿ
ಲೋಕಾಯುಕ್ತ ದಾಳಿ
ರಮೇಶ್ ಬಿ. ಜವಳಗೇರಾ
|

Updated on:May 31, 2025 | 10:20 AM

Share

ಬೆಂಗಳೂರು, (ಮೇ 31): ಕರ್ನಾಟದಲ್ಲಿ (karnataka) ಇಂದು (ಮೇ 31) ಬೆಳ್ಳಂ ಬೆಳಗ್ಗೆ ಹಲವು ಕಡೆ ಲೋಕಾಯುಕ್ತ (Lokayukta raids), ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಿದದು, ಆಸ್ತಿ-ಪಾಸ್ತಿ ಬಗ್ಗೆ ದಾಖಲೆ ಪರಿಶೀಲಿಸಿಸುತ್ತಿದ್ದಾರೆ.

ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಂಗಾಧರ್ ಮನೆ, ಕಚೇರಿ, ಅಳಿಯ, ಭಾವನ ಮನೆ ಸೇರಿ 6 ಕಡೆ ಲೋಕಾಯುಕ್ತ ಎಸ್ ಪಿ ಹಣಮಂತರಾಯ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ದಾಖಗಳ ಶೋಧ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ, ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು. ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ಲೋಕಾಯುಕ್ತ ದಾಳಿ

ಬಳ್ಳಾರಿ PWD ಸುಪರಿಡೆಂಟ್ ಇಂಜಿನಿಯರ್ ಅಮೀನ್ ಮುಕ್ತಾರ್ ಮನೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಕೋಟಿ ಕೋಟಿ ರೂ.ಮೌಲ್ಯದ ಆಸ್ತಿ ಪತ್ರ ಪತ್ತೆಯಾಗಿದೆ. ಕಲಬುರಗಿ ನಗರದ ಹೊರವಲಯದಲ್ಲಿ 25 ಏಕರೆ ಜಮೀನಿನ ಆಸ್ತಿ ಪತ್ರ, ಕಲಬುರಗಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಪೆಟ್ರೋಲ್ ಬಂಕ್, ಒಂದು ಕ್ರಶರ್ ಮಷೀನ್ ಲೈಸನ್ಸ್ ಸೇರಿದಂತೆ ಇತರೆ ಆಸ್ತಿ ಪತ್ರಗಳು ಪತ್ತೆಯಾಗಿವೆ.

ಉಡುಪಿಯಲ್ಲೂ ಭ್ರಷ್ಟ ಅಧಿಕಾರಿಗೆ ಶಾಕ್

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ ಆಫಿಸರ್ ಗಿರೀಶ್ ರಾವ್ ಮೆನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಡಿವೈಎಸ್ ಪಿ ಮಂಜಿನಾಥ ನೇತೃತ್ವದಲ್ಲಿ ದಾಳಿ, ಕಾರ್ಕಳದ ಮನೆ, ಕಚೇರಿ, ಸಂಬಂಧಿಕರ ಮನೆ ಸೇರಿದಂತೆ ಐದು ಕಡೆ ದಾಳಿ ಮಾಡಿದ್ದು, ತಲಾಶ್ ನಡೆಸಿದ್ದಾರೆ.

ಧಾರವಾಡದಲ್ಲಿಯೂ ಲೋಕಾಯುಕ್ತ ದಾಳಿ

ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನೀಯರ್ ಎಚ್. ಸುರೇಶ ಮನೆ ಹಾಗೂ ಸರಕಾರಿ ಕ್ವಾರ್ಟರ್ಸ್ ಮೇಲೆ ದಾಳಿಯಾಗಿದೆ. ಧಾರವಾಡದ ಡಿಸಿ ಕಾಂಪೌಂಡ್‌ನಲ್ಲಿರೋ ಕಚೇರಿ, ಕೆಸಿಡಿ ವೃತ್ತದ ಬಳಿಯ ಮನೆ ಮೇಲೆ ದಾಳಿ ಮಾಡಲಾಗಿದ್ದು,ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಜಂಟಿ ಕಾರ್ಯಚರಣೆ

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದ ಗ್ರಾಮ ಪಂಚಾಯತಿ ಪಿಡಿಓ ಕಚೇರಿ ಮತ್ತು ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ. ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಸಿಬ್ಬಂದಿಗಳಿಂದ ಜಂಟಿ ಕಾರ್ಯಚರಣೆ ನಡೆಸಿದ್ದು, ರಾಮಕೃಷ್ಣಪ್ಪ ಗುಡಗೇರಿ ಗ್ರಾಮ ಪಂಚಾಯತಿ ಅಧಿಕಾರಿ ಕಚೇರಿ ಮತ್ತು ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ ಡಿಸಿ ಅಧಿಕಾರಿಗೆ ಶಾಕ್

ಬಾಗಲಕೋಟೆ ಡಿಸಿ ಕಚೇರಿ ಲೆಕ್ಕಪತ್ರ ವಿಭಾಗದ ಪ್ರಥಮ ದರ್ಜೆ ಸಹಾಯಕ ಶ್ರೀಶೈಲ್ ತತ್ರಾಣಿಗೂ ಲೋಕಾಯುಕ್ತ ಶಾಕ್ ಕೊಟ್ಟಿದೆ. ಅಮೀನಗಢ ಪಟ್ಟಣದಲ್ಲಿರುವ ಶ್ರೀಶೈಲ್ ತತ್ರಾಣಿ ಅವರ ಮನೆ ಹಾಗೂ ಜ್ಯುವೆಲ್ಲರಿ ಶಾಪ್ ಮೇಲೆ‌ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಾಗಲಕೋಟೆ ಲೋಕಾಯುಕ್ತ DySP ನೇತೃತ್ವದಲ್ಲಿ ಸಿದ್ದೇಶ್ವರ ನೇತೃತ್ವದಲ್ಲಿ ದಾಳಿಯಾಗಿದೆ.

Published On - 10:13 am, Sat, 31 May 25