Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್​​ಡಿಕೆಗೆ ಪ್ರಾಸಿಕ್ಯೂಷನ್ ಸಂಕಷ್ಟ: ರಾಜ್ಯಪಾಲರ ನಿರ್ಧಾರದಲ್ಲಿ ಕುಮಾರಸ್ವಾಮಿ ಭವಿಷ್ಯ

ಕೇಂದ್ರ ಸಚಿವ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮೇಲಿನ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್​ ಅನುಮತಿಗೆ ಲೋಕಾಯುಕ್ತ ಪೊಲೀಸರು ಮತ್ತೊಮ್ಮೆ ಮನವಿ ಮಾಡಿದ್ದಾರೆ. ಕಳೆದ ವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ಲೋಕಾಯುಕ್ತ ವಿಶೇಷ ತನಿಖಾ ತಂಡ ಪ್ರಾಸಿಕ್ಯೂಷನ್​ ಅನುಮತಿ ಕೋರಿ 7ತಿಂಗಳ ಹಿಂದೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಇದೀಗ ಮತ್ತೊಮ್ಮೆ ಲೋಕಾಯುಕ್ತ ಪೊಲೀಸರ ವಿಶೇಷ ತಂಡ ಮನವಿ ಮಾಡುತ್ತಿರುವುದ್ಯಾಕೆ? ಏನಿದು ಮೈನಿಂಗ್ ಕೇಸ್ ಎನ್ನುವ ಡಿಟೇಲ್ಸ್ ಇಲ್ಲಿದೆ.

ಎಚ್​​ಡಿಕೆಗೆ ಪ್ರಾಸಿಕ್ಯೂಷನ್ ಸಂಕಷ್ಟ: ರಾಜ್ಯಪಾಲರ ನಿರ್ಧಾರದಲ್ಲಿ ಕುಮಾರಸ್ವಾಮಿ ಭವಿಷ್ಯ
Hd Kumaraswamy (
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 26, 2025 | 11:09 PM

ಬೆಂಗಳೂರು, (ಫೆಬ್ರವರಿ 26): ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ದದ್ದ ಮೈನಿಂಗ್ ಕೇಸ್ ಸಂಬಂಧ ಲೋಕಾಯುಕ್ತ ಪೋಲಿಸರು ಪ್ರಾಸಿಕ್ಯೂಷನ್ ಅನುಮತಿಗೆ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕಳೆದ ಏಳು ತಿಂಗಳ ಹಿಂದೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ವೇಳೆ ಕನ್ನಡದಿಂದ ಇಂಗ್ಲಿಷ್​ಗೆ ಭಾಷಾಂತರ ಮಾಡಲು ರಾಜ್ಯಪಾಲರು ಸೂಚನೆ ನೀಡಿದ್ದರು. ಸದ್ಯ 5 ಸಾವಿರ ಪುಟಗಳ ಭಾಷಾಂತರ ಮಾಡಿ ಮತ್ತೊಮ್ಮೆ ಪ್ರಾಸಿಕ್ಯೂಷನ್​​ಗೆ ವಿಶೇಷ ತನಿಖಾ ತಂಡ ಅನುಮತಿ ಕೇಳಿದೆ. ಕುಮಾರಸ್ವಾಮಿ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್​​ಗೆ ಮೈನಿಂಗ್ ಮಂಜೂರು ಮಾಡಿದ್ದರು‌. ಲೋಕಾಯುಕ್ತ ಎಸ್ ಐಟಿ ಸಂಡೂರು ತಾಲೂಕಿನ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್ ನ ಪ್ರಕರಣದ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಗಣಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಮತ್ತು ಸಿಎಸ್ ಸರ್ಕಾರ ಅನುಮತಿ ನೀಡಿಲ್ಲ‌, ಖನಿಜ ರಿಯಾಯಿತಿ ನಿಯಮಾವಳಿ 1960ರ ಪಾಲನೆಯಾಗಿಲ್ಲ. ನಿಯಮ 59(2)ರ ರಿಯಾಯಿತಿ ಬಗ್ಗೆ ಸ್ಪಷ್ಟ ಕಾರಣ ನೀಡಿರುವುದಿಲ್ಲ. ಸ್ಪಷ್ಟ ಕಾರಣ ಇಲ್ಲದೇ ರಿಯಾಯಿತಿಗೆ ಪ್ರಸ್ತಾವ ಕಳಿಸಿದಂತೆ ಕೇಂದ್ರ ಹೇಳಿತ್ತು. ಪತ್ರ ಬರೆದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ತಿಳಿಸಿತ್ತು. ಆದ್ರೆ ಕುಮಾರಸ್ವಾಮಿ ಸಿಎಸ್ ಅನುಮೋದನೆಗೆ ವ್ಯತಿರಿಕ್ತವಾಗಿ ಆದೇಶ ಮಾಡಿದ್ದರು. ಖನಿಜ ರಿಯಾಯಿತಿ ನಿಯಾಮವಳಿ 1960ಕ್ಕೆ ವಿರುದ್ದವಾಗಿ ಆದೇಶ ನೀಡಿದ್ದು, ಅದೇಶಕ್ಕೂ ಯಾವುದೇ ಸ್ಪಷ್ಟ ಕಾರಣ ನೀಡದೇ ಆದೇಶಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಅ ಕ್ಟೋಬರ್ 6, 2007 ರಂದು ಕಡತದಲ್ಲಿ ಎಚ್ ಡಿಕೆ ಬರೆದಿದ್ದಾಗಿ ಆರೋಪವಿದೆ. ನಾನು ದಾಖಲೆಗಳನ್ನು ಪರಿಶೀಲನೆ ಮಾಡಿದ್ದೆನೆಂದು ಬರೆದ ಆರೋಪ ಕೇಳಿಬಂದಿದೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗೆ ಅನುಮತಿ ಮಂಜೂರು ಮಾಡಲಾಗಿದೆ. ಹೀಗೆ ಬರೆದು ಸಿಎಂ ಇಲಾಖೆಗೆ ಕಳುಹಿಸಿದ್ದರು ಎಂಬ ಆರೋಪವಿದೆ.

ಇದನ್ನೂ ಓದಿ: ಡಿನೋಟಿಫಿಕೇಷನ್‌ ಪ್ರಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್

ಸದ್ಯ ಹೆಚ್ ಡಿಕೆ ಮೇಲಿನ ಸಂಡೂರು ಶ್ರೀ ಸಾಯಿ ವೆಂಕಟೇಶ್ವರ ಮೈನಿಂಗ್ ಕೇಸ್ 5 ಸಾವಿರ ಪುಟಗಳ ವರದಿ ಭಾಷಾಂತರಗೊಂಡಿದ್ದು, ಇದೀಗ ಮತ್ತೊಮ್ಮೆ ಪ್ರಾಸಿಕ್ಯೂಷನ್ ಅನುಮತಿ ಕೇಳಿ ಮತ್ತೊಮ್ಮೆ ಲೋಕಾಯುಕ್ತ ಎಅ್ ಎಸ್ ಐಟಿ ಮನವಿ ಮಾಡಿದ್ದು, ರಾಜ್ಯಪಾಲರ ಕ್ರಮ ಕುತೂಹಲ ಮೂಡಿಸಿದೆ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ