AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್‌ಪೆಕ್ಟರ್​​​ನಿಂದಲೇ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ!

ಬೇಲಿಯೇ ಎದ್ದು ಹೊಲ ಮೇಯ್ದಂತೆ ಇಸ್ಪೀಟ್ ಜೂಜು ದಂಧೆಗೆ ಕಡಿವಾಣ ಹಾಕಬೇಕಿದ್ದ ಪೊಲೀಸರೇ ಎಂಜಲ ಕಾಸಿಗೆ ಚಾಚಿ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೌದು...ಇಸ್ಪೀಟ್ ಆಡುವವರ ಬಳಿಯೇ ಲಂಚ ಪಡೆಯುವಾಗ ಪಿಎಸ್​​ಐ ಹಾಗೂ ಕಾನ್ಸ್​ಟೇಬಲ್ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮತ್ತೊಂದೆಡೆ ಇನ್ನೊಂದೆಡೆ ಸರ್ಕಾರಿ ಅಧಿಕಾಯಿಂದಲೇ ಲಂಚ ಮಡಿಯುತ್ತಿದ್ದ ಎಸ್​​​ಡಿಎ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ಎರಡು ಪ್ರತ್ಯೇಕ ಪ್ರಕರಣದ ಡಿಟೇಲ್ಸ್ ಇಲ್ಲಿದೆ.

ಇನ್ಸ್‌ಪೆಕ್ಟರ್​​​ನಿಂದಲೇ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ!
Lokayukta, ಎಸ್‌ಡಿಎ ಮುದಾಸಿರ್
ರಮೇಶ್ ಬಿ. ಜವಳಗೇರಾ
|

Updated on: Apr 22, 2026 | 3:34 PM

Share

ಬೆಂಗಳೂರು, (ಏಪ್ರಿಲ್ 22):  ಇನ್ಸ್​ಪೆಕ್ಟರ್​  (Inspector) ಬಳಿಯೇ ಲಂಚ (Bribe) ಸ್ವೀಕರಿಸುವಾಗ ಎಸ್​​ಡಿಎ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಇನ್ನೊಂದೆಡೆ ಬೆಂಗಳೂರಿನ (Bengaluru) ಹೆಬ್ಬಾಳದ ಪಶುಸಂಗೋಪನೆ ಇಲಾಖೆ ಆಯುಕ್ತರ ಕಚೇರಿಯ ಎಸ್‌ಡಿಎ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಲಾಖಾ ತನಿಖೆಯ ಅಂತಿಮ ಆದೇಶ ಪ್ರಕ್ರಿಯೆ ಕಾರ್ಯಗತಗೊಳಿಸಲು ಪಶುಸಂಗೋಪನೆ ಇಲಾಖೆ ಆಯುಕ್ತರ ಕಚೇರಿಯ ಎಸ್‌ಡಿಎ ಮುದಾಸಿರ್ ಎನ್ನುವರು ವಿಜಯಪುರ ಜಿಲ್ಲೆಯ ಪಶುಸಂಗೋಪನೆ ಇನ್ಸ್‌ಪೆಕ್ಟರ್‌ ಮಲ್ಲಿಕಾರ್ಜುನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರೆ. ಸದ್ಯ ಮುದಾಸಿರ್‌ನನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರಿಂದ ವಿಚಾರಣೆ ನಡೆಸಿದ್ದಾರೆ.

ಪಿಎಸ್​​ಐ, ಕಾನ್ಸ್​ಟೇಬಲ್ ಲೋಕಾ ಬಲೆಗೆ

ಬಾಗಲಕೋಟೆ: ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ಹಾಗೂ ಕಾನ್ಸ್​​​ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎನ್ನುವರು ಮುತ್ತಪ್ಪ ನಾಯ್ಕರ್​ ಎಂಬುವರಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: 1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ

ಇಸ್ಪೀಟ್ ಆಡುತ್ತಿದ್ದ ಓರ್ವ ಆರೋಪಿ ರಕ್ಷಣೆಗೆ ಮುಂದಾಗಿದ್ದ ಪೊಲೀಸರು, ಬೈಕ್ ಬಿಡಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಮುತ್ತಪ್ಪ ನಾಯ್ಕರ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರಿನ ಅನ್ವಯ ಲೋಕಾಯುಕ್ತ SP ಮಹಾಲಿಂಗ ನಂದಗಾಂವಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, ಪಿಎಸ್​ಐ ಭೀಮಪ್ಪ, ಪಿಸಿ ಬಿರಾದಾರನನ್ನು 1.70 ಲಕ್ಷ ಲಂಚ ಸ್ವೀಕರಿಸುವಾಗ ಹಿಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ