ಗುಪ್ತಚರ ವರದಿಯ ಮೇಲೆ ನಂಬಿಕೆ ಇಟ್ಟ ಕಾಂಗ್ರೆಸ್​: ಕರ್ನಾಟಕದಲ್ಲಿ ಡಬಲ್ ಡಿಜಿಟ್ ದಾಟುವ ವಿಶ್ವಾಸ

ಲೋಕಸಭಾ ಚುನಾವಣೆಯ ಏಳು ಹಂತದ ಮತದಾನ ಮುಗಿದಿದ್ದು, ಇದೀಗ ಎಲ್ಲರ ಚಿತ್ತ ಜೂನ್​ 4ರ ಫಲಿತಾಂಶದ ಮೇಲೆ ನೆಟ್ಟಿದೆ. ಇದಕ್ಕೂ ಮೊದಲ ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿದ್ದು, ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲೂ ಎನ್​ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಇನ್ನೂ ಕರ್ನಾಟಕದಲ್ಲಿ ಎನ್​ಡಿಎ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಆದ್ರೆ, ಕಾಂಗ್ರೆಸ್​ ಮಾತ್ರ ರಾಜ್ಯ ಗುಪ್ತಚರ ಇಲಾಖೆ ವಿಶ್ವಾಸ ಮೇಲೆ ವಿಶ್ವಾಸ ಇಟ್ಟಿದ್ದು, ಡಬಲ್​ ಡಿಜಿಟ್​ ದಾಟುವ ಆತ್ಮವಿಶ್ವಾಸದಲ್ಲಿದೆ. ಹಾಗಾದ್ರೆ, ಗುಪ್ತಚರ ಇಲಾಖೆಯ ಆಂತರಿಕ ವರದಿ ಪ್ರಕಾರ ಕಾಂಗ್ರೆಸ್ ಎಸ್ಟು ಸೀಟು ಗೆಲ್ಲಲಿದೆ ಎನ್ನುವ ವಿವರ ಇಲ್ಲಿದೆ.

ಗುಪ್ತಚರ ವರದಿಯ ಮೇಲೆ ನಂಬಿಕೆ ಇಟ್ಟ ಕಾಂಗ್ರೆಸ್​: ಕರ್ನಾಟಕದಲ್ಲಿ ಡಬಲ್ ಡಿಜಿಟ್ ದಾಟುವ ವಿಶ್ವಾಸ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Jun 02, 2024 | 12:31 PM

ಬೆಂಗಳೂರು, (ಜೂನ್ 02): ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು (Loksabha Elections Exit polls) ಹೊರಬಂದಿದ್ದು, ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲೂ ಎನ್​ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ+ಜೆಡಿಎಸ್​ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದ್ದು, ಕಾಂಗ್ರೆಸ್ ಒಂದಕ್ಕಿಗೆ ಸೀಮತವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.  ಇದರಿಂದ ಬಿಜೆಪಿ ನಾಯಕರು ಫುಲ್​​ ಖುಷ್​ ಆಗಿದ್ದಾರೆ. ಆದ್ರೆ, ಕಾಂಗ್ರೆಸ್ ,ಆತ್ರ​ ಡಬಲ್​ ಡಿಜಿಟ್ ವಿಶ್ವಾಸದಲ್ಲಿದ್ದಾರೆ. ಹೌದು…ಕರ್ನಾಟಕದಲ್ಲಿ ಕಾಂಗ್ರೆಸ್​ 5ರಿಂದ 8ಸ್ಥಾನಗಳು ಮಾತ್ರ ಲಭಿಸಲಿವೆ ಎಂದು ಎಕ್ಸಿಟ್​ ಪೋಲ್​ ಹೇಳಿವೆ. ಆದ್ರೆ, ರಾಜ್ಯ ಕಾಂಗ್ರೆಸ್ ನಾಯಕರು ಅದ್ಯಾವುದನ್ನು ತಲೆಕೆಡಿಸಿಕೊಳ್ಳುತ್ತಿಲ್ಲ. ಎಕ್ಸಿಟ್​ ಪೋಲ್ ಬದಲಿಗೆ ರಾಜ್ಯ ಗುಪ್ತಚರ ಇಲಾಖೆಯ ಆಂತರಿಕ(intelligence report)  ವರದಿ ಮೇಲೆ ವಿಶ್ವಾಸ ಇಟ್ಟಿದ್ದು, ಕನಿಷ್ಠ 10-12 ಸ್ಥಾನ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸದಲ್ಲಿದ್ದಾರೆ.

ಆಂತರಿಕ ವರದಿಯಲ್ಲೂ ಕಾಂಗ್ರೆಸ್ ಡಬಲ್ ಡಿಜಿಟ್ ದಾಟುವ ಮಾಹಿತಿ ಇದೆ. ಕನಿಷ್ಠ ಏನಿಲ್ಲ ಅಂದರೂ 13 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂಬ ವರದಿ ನೀಡಿದೆ. ಇನ್ನು ಗ್ಯಾರಂಟಿಗಳು ಕೈ ಹಿಡಿದರೆ 14 ರಿಂದ15 ಸ್ಥಾನ ದಾಟಬಹುದು ಎಂಬ ವರದಿ ಸಹ ಇದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರು, ಆಂತರಿಕ ವರದಿಯ ಮೇಲೆ ನಂಬಿಕೆ ಇಟ್ಟಿದ್ದಾರೆ.

ಭಾರತೀಯ ಜನತಾ ಪಕ್ಷಕ್ಕೆ ರಾಜ್ಯದಲ್ಲಿ ನಾಯಕತ್ವ ಇರಲಿಲ್ಲ. ಇನ್ನು ಕಾಂಗ್ರೆಸ್ ಸಮರ್ಥ ನಾಯಕತ್ವ ಪ್ರದರ್ಶನ ಮಾಡಿದೆ. ಅಲ್ಲದೇ ಉತ್ತರ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ವರ್ಕೌಟ್ ಆಗಿವೆ ಎಂದು ಕಾಂಗ್ರೆಸ್​ ನಾಯಕರ ಅಭಿಪ್ರಾಯವಾಗಿದೆ. ಹಾಗೇ ಕಳೆದ ವಿಧಾಸಭೆ ಚುನಾವಣೆಯಲ್ಲಿ ಬಹುತೇಕ ಎಕ್ಸಿಟ್​ ಪೋಲ್​ಗಳು, ರಾಜ್ಯದಲ್ಲಿ ಸಮಿಶ್ರ ಸರ್ಕಾರವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದವು. ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ. ಬದಲಿಗೆ ಬಿಜೆಪಿಯೇ ಕಾಂಗ್ರೆಸ್​ಗಿಂತ ಹೆಚ್ಚಿನ ಸೀಟುಗಳನ್ನು ಗೆಲ್ಲಲಿದೆ ಎಂದು ಕೆಲ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು.

ಇದನ್ನೂ ಓದಿ: Karnataka Exit Poll Results: ಬಹುತೇಕ ಎಕ್ಸಿಟ್​ ಪೋಲ್​ಗಳು ಹೇಳೋದು ಒಂದೇ; ಕರ್ನಾಟಕದಲ್ಲಿ ಬಿಜೆಪಿಗೇ ಹೆಚ್ಚು ಸ್ಥಾನ

ಆದ್ರೆ, ಫಲಿತಾಂಶ ಎಕ್ಸಿಟ್​ ಪೋಲ್​ಗಳ ಸಮೀಕ್ಷೆಗಳನ್ನು ಸುಳ್ಳಾಗಿಸಿದ್ದು, ಕಾಂಗ್ರೆಸ್​ ನಿರೀಕ್ಷೆಗೂ ಮೀರಿ ಬರೋಬ್ಬರಿ 130 ಸ್ಥಾನಗಳಲ್ಲಿ ಗೆದ್ದು ಅಧಿಕಾರಿಗಕೇರಿದೆ. ಇನ್ನು ಪ್ರಮುಖವಾಗಿ ಡಿಕೆ ಶಿವಕುಮಾರ್ ಸಹ ಕಾಂಗ್ರೆಸ್​ 130 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಬಹಿರಂಗವಾಗಿಯೇ ಹೇಳಿದ್ದರು. ಅದರಂತೆ ಕಾಂಗ್ರೆಸ್​ ಗೆದ್ದಿದೆ. ಹೀಗಾಗಿ ಈ ಬಾರಿಯೂ ಸಹ ಲೋಕಸಭಾ ಚುನಾವಣೆಯಲ್ಲೂ  ಗುಪ್ತಚರ ಇಲಾಖೆಯ ಆಂತರಿಂದ ವರದಿ ಮೇಲೆ ಕಾಂಗ್ರೆಸ್ ನಾಯಕರು ವಿಶ್ವಾಸ ಇಟ್ಟಿದ್ದು, ಅದರ ಆಧಾರದ ಮೇಲೆ​ ಡಬಲ್ ಡಿಜಿಟ್​ ಗೆಲ್ಲುವು ನಂಬಿಕೆಯಲ್ಲಿದ್ದಾರೆ. ​

ಡಬಲ್ ಡಿಜಿಟ್​ ವಿಶ್ವಾದಲ್ಲಿ ಕೈ ನಾಯಕರು

ಎಲೆಕ್ಷನ್‌ ಇಂಟರ್ನಲ್‌ ರಿಪೋರ್ಟ್‌ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ ಒಟ್ಟು 14 ಕ್ಷೇತ್ರಗಳನ್ನು ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿ ಆ ಪಕ್ಷದ ನಾಯಕರು ಇದ್ದಾರೆ. ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಆರು, ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ 8 ಕ್ಷೇತ್ರಗಳನ್ನು ಗೆಲ್ಲಬಹುದು ಎಂಬ ಅಂಶ ಕಾಂಗ್ರೆಸ್‌ನ ಆಂತರಿಕ ವರದಿಯಲ್ಲಿದೆ. ತಳಹಂತದಲ್ಲಿ ಬೂತ್‌ ಏಜೆಂಟ್‌ಗಳು, ಕಾರ್ಯಕರ್ತರು ಕೊಟ್ಟಿರುವ ಅಂಕಿ – ಅಂಶಗಳು ವಾಸ್ತವಕ್ಕೆ ಹತ್ತಿರವಾಗಿರುತ್ತವೆ ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್‌ ನಾಯಕರು ಇದ್ದು, 14 ಕ್ಷೇತ್ರಗಳಿಗಿಂತಲೂ ಹೆಚ್ಚು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಇದ್ದಾರೆ.

ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡು ಆಡಳಿತಾರೂಢ ಕಾಂಗ್ರೆಸ್‌ ಅನ್ನು ಎದುರಿಸಿದ್ದವು. ಏಪ್ರಿಲ್‌ 26 ಹಾಗೂ ಮೇ 7ರಂದು ಎರಡು ಹಂತಗಳಲ್ಲಿ ರಾಜ್ಯದ 28 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಕಾಂಗ್ರೆಸ್‌ 28 ಕ್ಷೇತ್ರದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ, ಬಿಜೆಪಿ 25 ಹಾಗೂ ಜೆಡಿಎಸ್‌ ಮೂರು ಕ್ಷೇತ್ರಗಳಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದವು. ಸದ್ಯ ಎರಡು ಪಕ್ಷಗಳಲ್ಲೂ ಸೋಲು – ಗೆಲುವಿನ ಲೆಕ್ಕಾಚಾರ ಜೋರಾಗಿದ್ದು, ಜೂನ್ 4ರಂದು ಯಾರು ಎಷ್ಟು ಸ್ಥಾನಗಳಲ್ಲಿ ಗೆಲ್ಲಲಿದ್ದಾರೆ ಎನ್ನುವುದು ಗೊತ್ತಾಗಲಿದೆ.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ