ಕೊವಿಡ್ ಪರಿಹಾರ ಪಡೆಯಲು ಮನೆ ಕೆಲಸದವರಿಂದ ಕಮಿಷನ್:​ ಹೈಕೋರ್ಟ್ ಆಕ್ಷೇಪ

ಸೇವಾಸಿಂಧು ಕೇಂದ್ರಗಳಲ್ಲಿ ಈ ಸೌಲಭ್ಯದ ನೋಂದಣಿಗೆ ಕಮಿಷನ್ ಪಡೆದುಕೊಳ್ಳುತ್ತಿರುವ ವಿಷಯ ತಿಳಿದ ಹೈಕೋರ್ಟ್​ ಕೆಂಡಾಮಂಡಲವಾಯಿತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿತು.

ಕೊವಿಡ್ ಪರಿಹಾರ ಪಡೆಯಲು ಮನೆ ಕೆಲಸದವರಿಂದ ಕಮಿಷನ್:​ ಹೈಕೋರ್ಟ್ ಆಕ್ಷೇಪ
ಕರ್ನಾಟಕ ಹೈಕೋರ್ಟ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 01, 2021 | 7:57 PM

ಬೆಂಗಳೂರು: ಮನೆ ಕೆಲಸದವರಿಗೆ ಕೊವಿಡ್ ಪರಿಹಾರ ವಿಚಾರದ ಬಗ್ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್​ ವಿಭಾಗೀಯ ಪೀಠದಲ್ಲಿ ಗುರುವಾರ ನಡೆಯಿತು. ಸೇವಾಸಿಂಧು ಕೇಂದ್ರಗಳಲ್ಲಿ ಈ ಸೌಲಭ್ಯದ ನೋಂದಣಿಗೆ ಕಮಿಷನ್ ಪಡೆದುಕೊಳ್ಳುತ್ತಿರುವ ವಿಷಯ ತಿಳಿದ ಹೈಕೋರ್ಟ್​ ಕೆಂಡಾಮಂಡಲವಾಯಿತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿತು.

ಪರಿಹಾರ ಅರ್ಜಿ ಸಲ್ಲಿಕೆ ವಿಧಾನವನ್ನು ಸರಳಗೊಳಿಸಬೇಕು ಎಂದು ಸರ್ಕಾರಕ್ಕೆ ತಾಕೀತು ಮಾಡಿತು. ಹೈಕೋರ್ಟ್​​ಗೆ ಈ ಸಂಬಂಧ ಕಾನೂನು ಸೇವೆಗಳ ಪ್ರಾಧಿಕಾರವು ವರದಿ ನೀಡಿತ್ತು. ಸರ್ಕಾರ ನೀಡುವ ₹ 2000 ಪರಿಹಾರ ಪಡೆದುಕೊಳ್ಳಲು ಅಸಂಘಟಿತ ಕಾರ್ಮಿಕರು ₹150ರಿಂದ 250 ಕಮಿಷನ್ ನೀಡಬೇಕಾದ ಪರಿಸ್ಥಿತಿಯಿದೆ ಎಂದು ಪ್ರಾಧಿಕಾರ ತಿಳಿಸಿತ್ತು. ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್​, ಇದು ಕಾರ್ಮಿಕ ಇಲಾಖೆಯ ಕಣ್ತೆರೆಸಬೇಕಿತ್ತು ಎಂದು ಅಭಿಪ್ರಾಯಪಟ್ಟಿತ್ತು. ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯೂ ವಿಚಾರಣೆ ವೇಳೆ ಹಾಜರಿರಬೇಕು ಎಂದು ಹೈಕೋರ್ಟ್ ಸೂಚಿಸಿತ್ತು.

ಬೆಂಗಳೂರು ನಗರಕ್ಕೆ ಎಷ್ಟು ಶೌಚಾಲಯ ಬೇಕು? ಮಾಹಿತಿ ನೀಡಲು ಹೈಕೋರ್ಟ್ ಸೂಚನೆ

ಬೆಂಗಳೂರಿಗೆ ಎಷ್ಟು ಶೌಚಾಲಯಗಳ ಅಗತ್ಯವಿದೆ. ಪ್ರತಿ ವಾರ್ಡ್‌ನಲ್ಲಿ ಎಷ್ಟು ಶೌಚಾಲಯಗಳ ಕೊರತೆಯಿದೆ ಎಂಬ ಮಾಹಿತಿ ನೀಡಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ಕೊರತೆ ಕುರಿತು ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೌಚಾಲಯಗಳ ನೈರ್ಮಲ್ಯಕ್ಕೆ ಗಮನ ನೀಡಬೇಕು. ಕೈಗೊಂಡ ಕ್ರಮದ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸೂಚನೆ ನೀಡಿತು.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಲೆಟ್ಜ್ ಕಿಟ್ ಫೌಂಡೇಷನ್, ನ್ಲೋಕಲ್‌ ಸೆಲ್ಫ್ ಗವರ್ನೆನ್ಸ್ ಸಂಸ್ಥೆಯ ಸರ್ವೆ ವರದಿ ಹೈಕೋರ್ಟ್ ಸಲ್ಲಿಸಿತು. ಇತರೆ ನಗರಕ್ಕೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಶೌಚಾಲಯಗಳ ಸಂಖ್ಯೆ ಕಡಿಮೆಯಿದೆ. ಇರುವ ಶೌಚಾಲಯಗಳ ನಿರ್ವಹಣೆಯೂ ಉತ್ತಮವಾಗಿಲ್ಲ. ಸಾಮುದಾಯಿಕ ಶೌಚಾಲಯಗಳಲ್ಲಿ ಶುಚಿತ್ವದ ಕೊರತೆಯಿದೆ ಎಂದು ಅಭಿಪ್ರಾಯಪಟ್ಟು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಡಲಾದ ಶಿಫಾರಸುಗಳನ್ನು ಹೈಕೋರ್ಟ್​ಗೆ ಸಲ್ಲಿಸಿತು. ಈ ಶಿಫಾರಸುಗಳನ್ನು ಅವಲೋಕಿಸಿದ ಹೈಕೋರ್ಟ್, ಬೆಂಗಳೂರು ನಗರದಲ್ಲಿ ಅಗತ್ಯವಿರುವ ಶೌಚಾಲಯಗಳ ಸಂಖ್ಯೆಯನ್ನು ಪರಿಶೀಲಿಸಿ ಸಲ್ಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೂಚಿಸಿತು.

(Loopholes in Covid Compensation Karnataka High Court Directs Govt to Set Order)

ಇದನ್ನೂ ಓದಿ: ಗುಲ್ಶನ್ ಕುಮಾರ್ ಹತ್ಯೆ ಪ್ರಕರಣ: ದಾವೂದ್ ಸಹಚರ ಅಬ್ದುಲ್ ರೌಫ್ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ಇದನ್ನೂ ಓದಿ: ಕೆಲವೇ ಜಾತಿಗೆ ಮಾತ್ರ ನಿಗಮ ಏಕೆ: ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

Published On - 7:57 pm, Thu, 1 July 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್