AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಅವರ ಈ ಸರಣಿ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಉತ್ತರಿಸುತ್ತಾ?

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾಗಿ ಹಲವಾರು ಕಡೆ ಪ್ರವಾಹ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ ಎಂದು ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಇನ್ನೂ ಪರಿಹಾರ ಕಲ್ಪಿಸಲು ಸರ್ಕಾರ ವಿಫಲವಾಗಿದೆ. ಈ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯ ಸರ್ಕಾರ ಕೈಕಾಲು ಬಿಡುತ್ತಿದೆ. ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ. ಈಗ ಬೆಂಕಿ […]

ಸಿದ್ದರಾಮಯ್ಯ ಅವರ ಈ ಸರಣಿ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಉತ್ತರಿಸುತ್ತಾ?
ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಸಿಎಂ ಯಡಿಯೂರಪ್ಪ
Guru
|

Updated on: Aug 09, 2020 | 1:05 PM

Share

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾಗಿ ಹಲವಾರು ಕಡೆ ಪ್ರವಾಹ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ ಎಂದು ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಇನ್ನೂ ಪರಿಹಾರ ಕಲ್ಪಿಸಲು ಸರ್ಕಾರ ವಿಫಲವಾಗಿದೆ. ಈ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯ ಸರ್ಕಾರ ಕೈಕಾಲು ಬಿಡುತ್ತಿದೆ. ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ. ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಉಪಮುಖ್ಯಮಂತ್ರಿ ಕಾರಜೋಳಗೆ ಸಿದ್ದು ಸವಾಲ್‌ ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು? ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು? ಈಗಲಾದರೂ ಈ ವಿವರ ನೀಡುವಿರಾ ಗೋವಿಂದ ಕಾರಜೋಳ ಅವರೇ? ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರಿಗೆ ಅವರದೇ ಜಿಲ್ಲೆಯಿಂದ ಆಯ್ಕೆಯಾಗಿರುವ ಸಿದ್ದರಾಮಯ್ಯ ಕೇಳಿದ್ದಾರೆ. ವಸತಿ ಸಚಿವ ಸೋಮಣ್ಣಗೆ ಸಿದ್ದು ಗುದ್ದು  ‌ ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು? ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್ನಲ್ಲಿವೆ? ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ? ಈ ಮಾಹಿತಿ ನೀಡುವಿರಾ ಸೋಮಣ್ಣ ಅವರೇ? ಎಂದು ವಸತಿ ಸಚಿವ ಸೋಮಣ್ಣ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಲೆಕ್ಕ ಕೇಳಿದ ಸಿದ್ದು ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಸರ್ಕಾರಿ ಶಾಲಾ ಕಟ್ಟಡಗಳೆಷ್ಟು? ಎಷ್ಟು ಕಟ್ಟಡಗಳನ್ನು ದುರಸ್ತಿ ಪಡಿಸಲಾಗಿದೆ ಮತ್ತು ಪುನರ್ ನಿರ್ಮಿಸಿಗೊಳ್ಳಲಾಗಿದೆ? ದುರಸ್ತಿಗೆ ಬಾಕಿ ಉಳಿದಿರುವುದು ಎಷ್ಟು? ಇದಕ್ಕಾಗಿ ಖರ್ಚಾದ ಹಣ ಎಷ್ಟು? ಈಗಲಾದರೂ ವಿವರ ನೀಡಬಹುದೇ ಸುರೇಶ್ ಕುಮಾರ್ ಅವರೇ? ಎಂದು ವಿಪಕ್ಷ ನಾಯಕ ಶಿಕ್ಷಣ ಸಚಿವ ಸುರೇಶ್ಕುಮಾರ್ ಅವರನ್ನು ಕೇಳಿದ್ದಾರೆ. ಶಶಿಕಲಾ ಜೊಲ್ಲೆಗೆ ಅಂಗನವಾಡಿ ಖರ್ಚು ಕೇಳಿದ ಸಿದ್ದು ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು? ಅವುಗಳಲ್ಲಿ ದುರಸ್ತಿವಾಗಿರುವುದೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು? ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು? ದಯವಿಟ್ಟು ವಿವರ ನೀಡುವಿರಾ? ಶಶಿಕಲಾ ಜೊಲ್ಲೆ ಅವರೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದಾರೆ.

ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮಖ್ಯಮಂತ್ರಿಯೂ ಆಗಿರುವ ಸಿದ್ದರಾಮಯ್ಯ ಅವರ ಈ ಸರಣಿ ಟ್ವೀಟ್ ದಾಳಿಗೆ ಈ ನಾಲ್ವರು ಸಚಿವರುಗಳು ಉತ್ತರಿಸುತ್ತಾರಾ ಇಲ್ಲವಾ ಎನ್ನೋದನ್ನು ಕಾದು ನೋಡಬೇಕಿದೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!