AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ

ಆ್ಯಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರ ಸಜೀವ ದಹನ ಹಾಗೂ ಮತ್ತೋರ್ವ ಆಸ್ಪತ್ರೆಯಲ್ಲಿ ಮರಣ ಹೊಂದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ
ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ
shruti hegde
|

Updated on:Mar 21, 2021 | 11:43 AM

Share

ಹಾಸನ: ಆ್ಯಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರ ಸಜೀವ ದಹನ ಹಾಗೂ ಮತ್ತೋರ್ವ ಆಸ್ಪತ್ರೆಯಲ್ಲಿ ಮರಣ ಹೊಂದಿರುವ ಘಟನೆ ನಡೆದಿದೆ. ಅರಕಲಗೂಡು ತಾಲ್ಲೂಕಿನ ಬಸವನಹಳ್ಳಿ ಬಳಿ ಅಪಘಾತ ನಡೆದಿದೆ. ವಿಷಕಾರಿ ರಾಸಾಯನಿಕ ಹೊತ್ತು ಸಾಗುತ್ತಿದ್ದ ಲಾರಿ ನಿನ್ನೆ(ಮಾರ್ಚ್ 20) ರಾತ್ರಿ ಪಲ್ಟಿಯಾಗಿ ಅವಘಡ ಸಂಭವಿಸಿದೆ.

ಗೊರವನಹಳ್ಳಿ ಗ್ರಾಮದ ಲಾರಿ ಚಾಲಕ ಪುಟ್ಟರಾಜು (42), ಪ್ರಮೋದ್ (18) ಹಾಗೂ ಪರಮೇಶ್ (40) ಭೀಕರ ಅಪಘಾತದಲ್ಲಿ ಮರಣ ಹೊಂದಿದ್ದಾರೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಲಾರಿ ಉರುಳಿ ಬಿದ್ದ ರಭಸಕ್ಕೆ ಬೆಂಕಿ ಹೊತ್ತಿ ಉರಿದಿದೆ. ಇಬ್ಬರು ಲಾರಿಯಲ್ಲೇ ಸಿಲುಕಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಲಾರಿಯಿಂದ ಕೆಳಕ್ಕೆ ಜಿಗಿದು ಗಾಯಗೊಡಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೆಮಿಕಲ್ ದುರ್ವಾಸನೆಯಿಂದ ಲಾರಿ ಹತ್ತಿರ ಹೋಗಲು ಸಾಧ್ಯವಾಗದೆ ಪೊಲೀಸರು ಕ್ರೇನ್ ಗಾಗಿ ಕೆಲಕಾಲ ಕಾಯುವ ಪರಿಸ್ಥಿತಿ ಎದುರಾಗಿದೆ. ಸ್ಥಳಕ್ಕೆ ಅರಕಲಗೂಡು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

hassan lorry accident

ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ

ಮೈಸೂರಿನಲ್ಲಿ ಮದುವೆ ದಿಬ್ಬಣ ಬಸ್​ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಬಸ್ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಬಸ್​ನಲ್ಲಿದ್ದ ಸುಮಾರು 30 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ನಿನ್ನೆ(ಮಾರ್ಚ್​ 20) ರಾತ್ರಿ ಆರತಕ್ಷತೆ ಮುಗಿಸಿ ಹಿಂತಿರುಗಿ ಬರುವಾಗ ನಂಜನಗೂಡು ತಾಲೂಕು ಕಂದೇಗಾಲ ಗ್ರಾಮದಲ್ಲಿ ಘಟನೆ ನಡೆದಿದೆ.

ಕಂದೇಗಾಲದ ನಾಗೇಂದ್ರ ಹಾಗೂ ಹೆಚ್.ಡಿ.ಕೋಟೆ ತಾಲೂಕಿನ ಬೊಪ್ಪನಹಳ್ಳಿ ಗ್ರಾಮದ ನಾಗದೇವಿ ಎಂಬುವರ ವಿವಾಹವಿತ್ತು. ಸರಗೂರು ತಾಲೂಕಿನ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮದುವೆ ಹಮ್ಮಿಕೊಳ್ಳಲಾಗಿತ್ತು. ಇಂದು ವಿವಾಹ ಕಾರ್ಯಕ್ರಮವಿತ್ತು. ನಿನ್ನೆ ಆರತಕ್ಷತೆಗೆ ಬಸ್​ನಲ್ಲಿ ಜನ ತೆರಳಿದ್ದರು. ಸಮಾರಂಭ ಮುಗಿಸಿ ಹಿಂತಿರುಗುವಾಗ ಘಟನೆ ನಡೆದಿದೆ.

ಗಾಯಾಳುಗಳಿಗೆ ಮೈಸೂರು ಹಾಗೂ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ನಂತರ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾರೆ. ಚಾಲಕನ ಬೇಜವಾಬ್ದಾರಿಯಿಂದ ಅಪಘಾತ ಆರೋಪ ಕೇಳಿ ಬರುತ್ತಿದೆ. ನಂಜನಗೂಡು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ನುಗ್ಗಿದ ಕಾರು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇದನ್ನೂ ಓದಿ: ಅಪಘಾತದಲ್ಲಿ ಅಗಲಿದ ಕಟ್ಟಾ ಅಭಿಮಾನಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಹೊನ್ನಾಳಿ ಶಾಸಕ ರೇಣುಕಾಚಾರ್ಯ

Published On - 11:40 am, Sun, 21 March 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ