ಹಾಸನದಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ

|

Updated on: Mar 21, 2021 | 11:43 AM

ಆ್ಯಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರ ಸಜೀವ ದಹನ ಹಾಗೂ ಮತ್ತೋರ್ವ ಆಸ್ಪತ್ರೆಯಲ್ಲಿ ಮರಣ ಹೊಂದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ
ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ
Follow us on

ಹಾಸನ: ಆ್ಯಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರ ಸಜೀವ ದಹನ ಹಾಗೂ ಮತ್ತೋರ್ವ ಆಸ್ಪತ್ರೆಯಲ್ಲಿ ಮರಣ ಹೊಂದಿರುವ ಘಟನೆ ನಡೆದಿದೆ. ಅರಕಲಗೂಡು ತಾಲ್ಲೂಕಿನ ಬಸವನಹಳ್ಳಿ ಬಳಿ ಅಪಘಾತ ನಡೆದಿದೆ. ವಿಷಕಾರಿ ರಾಸಾಯನಿಕ ಹೊತ್ತು ಸಾಗುತ್ತಿದ್ದ ಲಾರಿ ನಿನ್ನೆ(ಮಾರ್ಚ್ 20) ರಾತ್ರಿ ಪಲ್ಟಿಯಾಗಿ ಅವಘಡ ಸಂಭವಿಸಿದೆ.

ಗೊರವನಹಳ್ಳಿ ಗ್ರಾಮದ ಲಾರಿ ಚಾಲಕ ಪುಟ್ಟರಾಜು (42), ಪ್ರಮೋದ್ (18) ಹಾಗೂ ಪರಮೇಶ್ (40) ಭೀಕರ ಅಪಘಾತದಲ್ಲಿ ಮರಣ ಹೊಂದಿದ್ದಾರೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಲಾರಿ ಉರುಳಿ ಬಿದ್ದ ರಭಸಕ್ಕೆ ಬೆಂಕಿ ಹೊತ್ತಿ ಉರಿದಿದೆ.
ಇಬ್ಬರು ಲಾರಿಯಲ್ಲೇ ಸಿಲುಕಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಲಾರಿಯಿಂದ ಕೆಳಕ್ಕೆ ಜಿಗಿದು ಗಾಯಗೊಡಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೆಮಿಕಲ್ ದುರ್ವಾಸನೆಯಿಂದ ಲಾರಿ ಹತ್ತಿರ ಹೋಗಲು ಸಾಧ್ಯವಾಗದೆ ಪೊಲೀಸರು ಕ್ರೇನ್ ಗಾಗಿ ಕೆಲಕಾಲ ಕಾಯುವ ಪರಿಸ್ಥಿತಿ ಎದುರಾಗಿದೆ. ಸ್ಥಳಕ್ಕೆ ಅರಕಲಗೂಡು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ

ಮೈಸೂರಿನಲ್ಲಿ ಮದುವೆ ದಿಬ್ಬಣ ಬಸ್​ ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಬಸ್ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಬಸ್​ನಲ್ಲಿದ್ದ ಸುಮಾರು 30 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ನಿನ್ನೆ(ಮಾರ್ಚ್​ 20) ರಾತ್ರಿ ಆರತಕ್ಷತೆ ಮುಗಿಸಿ ಹಿಂತಿರುಗಿ ಬರುವಾಗ ನಂಜನಗೂಡು ತಾಲೂಕು ಕಂದೇಗಾಲ ಗ್ರಾಮದಲ್ಲಿ ಘಟನೆ ನಡೆದಿದೆ.

ಕಂದೇಗಾಲದ ನಾಗೇಂದ್ರ ಹಾಗೂ ಹೆಚ್.ಡಿ.ಕೋಟೆ ತಾಲೂಕಿನ ಬೊಪ್ಪನಹಳ್ಳಿ ಗ್ರಾಮದ ನಾಗದೇವಿ ಎಂಬುವರ ವಿವಾಹವಿತ್ತು. ಸರಗೂರು ತಾಲೂಕಿನ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮದುವೆ ಹಮ್ಮಿಕೊಳ್ಳಲಾಗಿತ್ತು. ಇಂದು ವಿವಾಹ ಕಾರ್ಯಕ್ರಮವಿತ್ತು. ನಿನ್ನೆ ಆರತಕ್ಷತೆಗೆ ಬಸ್​ನಲ್ಲಿ ಜನ ತೆರಳಿದ್ದರು. ಸಮಾರಂಭ ಮುಗಿಸಿ ಹಿಂತಿರುಗುವಾಗ ಘಟನೆ ನಡೆದಿದೆ.

ಗಾಯಾಳುಗಳಿಗೆ ಮೈಸೂರು ಹಾಗೂ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ನಂತರ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾರೆ. ಚಾಲಕನ ಬೇಜವಾಬ್ದಾರಿಯಿಂದ ಅಪಘಾತ ಆರೋಪ ಕೇಳಿ ಬರುತ್ತಿದೆ. ನಂಜನಗೂಡು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ನುಗ್ಗಿದ ಕಾರು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇದನ್ನೂ ಓದಿ: ಅಪಘಾತದಲ್ಲಿ ಅಗಲಿದ ಕಟ್ಟಾ ಅಭಿಮಾನಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಹೊನ್ನಾಳಿ ಶಾಸಕ ರೇಣುಕಾಚಾರ್ಯ

Published On - 11:40 am, Sun, 21 March 21