ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ; ಸ್ಥಳದಲ್ಲೇ ಹಾರಿಹೋಯ್ತು ಚಾಲಕನ ಪ್ರಾಣಪಕ್ಷಿ
ವಿಜಯಪುರ ಕಡೆಯಿಂದ ಬೆಂಗಳೂರಿಗೆ ಲಿಂಬೆಹಣ್ಣು ತುಂಬಿಕೊಂಡು ಲಾರಿ ಬರುತ್ತಿತ್ತು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮದಿಂದಾಗಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ದಾವಣಗೆರೆ: ಚಲಿಸುತ್ತಿರುವ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕಲ್ಲೆದೇವಪುರ ಗ್ರಾಮದ ಬಳಿ ನಡೆದಿದೆ.
ಚಂದ್ರಪ್ಪ (24) ಸಾವನ್ನಪ್ಪಿದ ಚಾಲಕನಾಗಿದ್ದು. ಇನ್ನೊಬ್ಬ ನಿಕೀಲ್ (22)ಎಂಬಾತನಿಗೆ ತೀವ್ರಗಾಯಗಳಾಗಿವೆ. ಹೀಗಾಗಿ ಗಾಯಾಳುವನ್ನು ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಲ್ಲೆದೇವಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಐವತ್ತರಲ್ಲಿ ಈ ಘಟನೆ ಸಂಭವಿಸಿದೆ.
ವಿಜಯಪುರ ಕಡೆಯಿಂದ ಬೆಂಗಳೂರಿಗೆ ಲಿಂಬೆಹಣ್ಣು ತುಂಬಿಕೊಂಡು ಲಾರಿ ಬರುತ್ತಿತ್ತು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮದಿಂದಾಗಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಮತ್ತು ಗಾಯಾಳು ವಿಜಯಪು ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬೊಮ್ಮನಜೋಗಿ ಗ್ರಾಮದ ನಿವಾಸಿಗಳು ಎಂಬುದು ತಿಳಿದುಬಂದಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.