ಜನವರಿ 17ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ಸಂಘ ಕರೆ

ಆತ್ಮರಕ್ಷಣೆಗಾಗಿ ಲಾರಿ ಚಾಲಕರು ಘಟನಾ ಸ್ಥಳದಿಂದ ಓಡಿ ಪೊಲೀಸ್ ಸ್ಟೇಷನ್​ಗಳಿಗೆ ಹೋಗುತ್ತಾರೆ. ಇಂಥ ಘಟನೆಗಳಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ಎಂದು ದಾಖಲು ಮಾಡುವುದು ಎಷ್ಟು ಸರಿ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ನವೀನ್​ ರೆಡ್ಡಿ ಪ್ರಶ್ನಿಸಿದ್ದಾರೆ.

ಜನವರಿ 17ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ಸಂಘ ಕರೆ
ಲಾರಿ ಮುಷ್ಕರ
Edited By:

Updated on: Jan 06, 2024 | 2:41 PM

ಬೆಂಗಳೂರು, ಜನವರಿ 6: ಜ‌ನವರಿ 17ರಿಂದ ಲಾರಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಮಾಲೀಕರ ಸಂಘ ಶನಿವಾರ ತಿಳಿಸಿದೆ. ಹಿಟ್ ಆ್ಯಂಡ್ ರನ್ (Hit and Run Case) ಕೇಸ್​ನಲ್ಲಿ 10 ವರ್ಷ ಜೈಲು ಹಾಗೂ 7 ಲಕ್ಷ ರೂ. ದಂಡ ವಿಧಿಸುವ ಕೇಂದ್ರ ಸರ್ಕಾರದ ಕಾನೂನು ವಿರೋಧಿಸಿ ಲಾರಿ ಮಾಲೀಕರ ಸಂಘ (Lorry owners association) ಮುಷ್ಕರಕ್ಕೆ ಕರೆ ನೀಡಿದೆ. ಲಾರಿ ಮುಷ್ಕರದಿಂದ ರಾಜ್ಯದಲ್ಲಿ ಅಗತ್ಯವಸ್ತುಗಳ ಸಾಗಾಟದ ಮೇಲೆ ಪರಿಣಾಮವಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ನವೀನ್​ ರೆಡ್ಡಿ ಮಾತನಾಡಿ, ಯಾವುದಾದ್ರೂ ಅಪಘಾತವಾದರೆ ಚಾಲಕರ ಮೇಲೆ ಹಲ್ಲೆ ನಡೆಯುತ್ತದೆ. ಹಿಂದಿನ ಚಕ್ರಕ್ಕೆ ಬೈಕ್‌ ಸಿಕ್ಕರೆ ಕೂಡಲೇ ಭಾರಿ ವಾಹನ ನಿಲ್ಲಿಸುವುದು ಸುಲಭವಿಲ್ಲ. ಒಂದು ವೇಳೆ ಲಾರಿ‌ ನಿಲ್ಲಿಸಿ ಬಂದರೆ ಅಲ್ಲಿರುವ ಜನರು ಚಾಲಕನ ಮೇಲೆ ಹಲ್ಲೆ ಮಾಡುತ್ತಾರೆ. ಆತ್ಮರಕ್ಷಣೆಗಾಗಿ ಲಾರಿ ಚಾಲಕರು ಸ್ಥಳೀಯ ಸ್ಟೇಷನ್​ಗಳಿಗೆ ಹೋಗುತ್ತಾರೆ ಎಂದು ಹೇಳಿದರು.

ಆತ್ಮರಕ್ಷಣೆಗಾಗಿ ಲಾರಿ ಚಾಲಕರು ಘಟನಾ ಸ್ಥಳದಿಂದ ಓಡಿ ಪೊಲೀಸ್ ಸ್ಟೇಷನ್​ಗಳಿಗೆ ಹೋಗುತ್ತಾರೆ. ಇಂಥ ಘಟನೆಗಳಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ಎಂದು ದಾಖಲು ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರ ಕೂಡಲೇ ಈ ಕಾನೂನನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಂದೆಡೆ ಹಿಟ್​ ಆ್ಯಂಡ್ ರನ್ ಕಾನೂನು ವಿರುದ್ಧ ಟ್ರಕ್​ ಚಾಲಕರ ಪ್ರತಿಭಟನೆ, ಇನ್ನೊಂದೆಡೆ ಪೆಟ್ರೋಲ್​ ಬಂಕ್​ನಲ್ಲಿ ಜನವೋ ಜನ

ನಮ್ಮ ಅಸೋಸಿಯೇಷನ್​ನಲ್ಲಿ ಸುಮಾರು 6 ಲಕ್ಷ ಮಾಲೀಕರಿದ್ದಾರೆ. ರಾಜ್ಯದಲ್ಲಿ ಸುಮಾರು 15 ಲಕ್ಷ ಲಾರಿ ಚಾಲಕರಿದ್ದಾರೆ ಎಂದು ನವೀನ್​ ರೆಡ್ಡಿ ತಿಳಿಸಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ಕೂಡ ಲಾರಿ ಮುಷ್ಕರ ನಡೆಸಲಾಗುದೆ. ಪರಿಣಾಮವಾಗಿ ಕೆಲವೆಡೆ ಇಂಧನ ಕೊರತೆ ಭೀತಿ ಎದುರಾಗಿತ್ತು. ಹೊಸ ನಿಯಮದಿಂದಾಗಿ ಟ್ರಕ್ ಚಾಲಕರು ಅನಗತ್ಯ ಕಿರುಕುಳವನ್ನು ಎದುರಿಸಬೇಕಾಗಬಹುದು ಎಂದು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಕೂಡ ಹೇಳಿದ್ದು, ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. ಮಹಾರಾಷ್ಟ್ರ ಮಾತ್ರವಲ್ಲದೆ ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನಗಳಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ