AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಒಂದೇ ಹಗ್ಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ಕಳೆದ ಒಂದು ತಿಂಗಳ ಹಿಂದೆಯಷ್ಟೇ ಬೇರೆ ಯುವಕನ ಜೊತೆ ಸಕ್ಕೂಬಾಯಿ ವಿವಾಹ ಆಗಿತ್ತು. ಇದರಿಂದ ಮನನೊಂದು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ಹಗ್ಗದಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇನ್ನು ಮೃತರ ಕುಟುಂಬಸ್ಥರು ರಾತ್ರೋರಾತ್ರಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ ಒಂದೇ ಹಗ್ಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
TV9 Web
| Updated By: ಆಯೇಷಾ ಬಾನು|

Updated on:Jun 03, 2021 | 10:43 AM

Share

ಬೆಳಗಾವಿ: ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಸಿಂದೋಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊಲದಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಂಚಪ್ಪಾ ಕಣವಿ, ಸಕ್ಕೂಬಾಯಿ ಕರಿಗಾರ ನೇಣಿಗೆ ಶರಣಾದ ಪ್ರೇಮಿಗಳು.

ಕಳೆದ ಒಂದು ತಿಂಗಳ ಹಿಂದೆಯಷ್ಟೇ ಬೇರೆ ಯುವಕನ ಜೊತೆ ಸಕ್ಕೂಬಾಯಿ ವಿವಾಹ ಆಗಿತ್ತು. ಇದರಿಂದ ಮನನೊಂದು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ಹಗ್ಗದಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇನ್ನು ಮೃತರ ಕುಟುಂಬಸ್ಥರು ರಾತ್ರೋರಾತ್ರಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾಗಿದ್ದ ವೃದ್ಧನ ಶವ ಪತ್ತೆ ಇನ್ನು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಜಕ್ಕನಹಳ್ಳಿಯಲ್ಲಿ ನಾಪತ್ತೆಯಾಗಿದ್ದ ವೃದ್ಧನ ಶವ ಪತ್ತೆಯಾಗಿದೆ. ರಕ್ತಸಿಕ್ತ ಸ್ಥಿತಿಯಲ್ಲಿ ಕುಮಾರಸ್ವಾಮಿ(61) ಶವ ಪತ್ತೆಯಾಗಿದೆ. ಜೂನ್ 1ರಂದು ಮುಂಜಾನೆ ಮನೆಯಿಂದ ಹೋದವರು ಮನೆಗೆ ವಾಪಾಸ್ ಆಗಿರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಕುಮಾರಸ್ವಾಮಿ ಸಿಕ್ಕಿರಲಿಲ್ಲ. ಈಗ ಮನೆಯ ಹಿಂಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಯಾರೋ ಬೇಕಾದವರೇ ಕುಮಾರಸ್ವಾಮಿಯ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೈಸೂರಿನಲ್ಲಿ ಆಸ್ತಿಗಾಗಿ ವೃದ್ಧನ ಕೊಲೆ ಆಸ್ತಿಗಾಗಿ ಶಿವರಾಜಪ್ಪ (60) ಎಂಬುವವರನ್ನು ಕೊಲೆ ಮಾಡಿರುವ ಘಟನೆ ಮೈಸೂರಿ‌ನ ನಂಜನಗೂಡು ತಾಲೂಕಿನ ಗೌಡರ ಹುಂಡಿ ಗ್ರಾಮದಲ್ಲಿ ನಡೆದಿದೆ. ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿವರಾಜಪ್ಪ ಹುಲ್ಲಹಳ್ಳಿ ರಾಂಪುರ ನಾಲೆಯ ಬಿದರಗೂಡು ಸಮೀಪದ ನಾಲೆಯಲ್ಲಿ ಶವ ಪತ್ತೆಯಾಗಿದೆ.

ಆಸ್ತಿ ವಿಚಾರಕ್ಕೆ ದಾಯಾದಿಗಳಿಂದಲೇ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಶಿವರಾಜಪ್ಪ ಹೆಂಡತಿಯ ಸಂಬಂಧಿಕರಿಂದಲೇ ಕೊಲೆ ಆರೋಪ ಕೇಳಿ ಬಂದಿದೆ. ಹೀಗಾಗಿ ಸಂಬಂಧಿಗಳಾದ ಶರತ್ ಕುಮಾರ್ ಮತ್ತು ಸುದರ್ಶನ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಪ್ರೇಮಿಗಳ ಆತ್ಮಹತ್ಯೆ: ಸಾವಿನಲ್ಲಿ ಒಂದಾದ ಜೋಡಿ ಹಕ್ಕಿಗಳು

Published On - 9:08 am, Thu, 3 June 21