ಕೋಲಾರ, ದಾವಣಗೆರೆಯಲ್ಲೂ ಹೆಚ್ಚಾದ ಚರ್ಮ ಗಂಟು ರೋಗ: ಸಂತೆ, ಜಾತ್ರೆ, ಜಾನುವಾರು ಸಾಗಾಣಿಕೆಗೆ ತಾತ್ಕಾಲಿಕ ನಿಷೇಧ

ಕೋಲಾರ ಮತ್ತು ದಾವಣಗೆರೆಯಲ್ಲೂ ಸಂತೆ, ಜಾತ್ರೆ, ಜಾನುವಾರು ಸಾಗಾಣಿಕೆಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಒಂದು ತಿಂಗಳ ನಿಷೇಧಿಸಿ ಕೋಲಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

ಕೋಲಾರ, ದಾವಣಗೆರೆಯಲ್ಲೂ ಹೆಚ್ಚಾದ ಚರ್ಮ ಗಂಟು ರೋಗ: ಸಂತೆ, ಜಾತ್ರೆ, ಜಾನುವಾರು ಸಾಗಾಣಿಕೆಗೆ ತಾತ್ಕಾಲಿಕ ನಿಷೇಧ
ಚರ್ಮಗಂಟು ರೋಗ
Follow us
TV9 Web
| Updated By: ಆಯೇಷಾ ಬಾನು

Updated on:Oct 08, 2022 | 11:46 AM

ಕೋಲಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ(Lumpy Skin Disease) ಕಂಡು ಬಂದಿದೆ. ದಿನದಿಂದ ದಿನಕ್ಕೆ ಈ ರೋಗ ಉಲ್ಬಣಗೊಳ್ಳುತ್ತಿದೆ. ಈ ಹಿನ್ನೆಲೆ ಕೋಲಾರ ಮತ್ತು ದಾವಣಗೆರೆಯಲ್ಲೂ ಸಂತೆ, ಜಾತ್ರೆ, ಜಾನುವಾರು ಸಾಗಾಣಿಕೆಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಒಂದು ತಿಂಗಳ ನಿಷೇಧಿಸಿ ಕೋಲಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ಹೊರ ರಾಜ್ಯಗಳಿಂದ ಜಾನುವಾರುಗಳನ್ನು ತರದಂತೆ ಆದೇಶ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಹೆಚ್ಚಾಗಿದೆ. ಸಂತೆ ಜಾತ್ರೆಗಳಿಗೆ ಜಾನುವಾರು ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಚರ್ಮಗಂಟು ರೋಗ ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಸಂತೆ ಜಾತ್ರೆಗಳಿಗೆ ಜಾನುವಾರು ಸಾಗಾಣಿಕೆ ನಿಷೇಧಿಸಲಾಗಿದೆ. ಜಾನುವಾರುಗ‌ಳ ರೋಗ ಪತ್ತೆಗೆ ಜಿಲ್ಲಾ ಪಶುವೈದ್ಯಕೀಯ ಆಸ್ಪತ್ರೆ ಪ್ರಯೋಗಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮ‌ವಾಗಿ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಎಂದು ಡಿಸಿ ಶಿವಾನಂದ ಕಾಪಶಿ ರೈತರಿಗೆ ಸಲಹೆ ನೀಡಿದರು. ಇದನ್ನೂ ಓದಿ: ಹಗಲು ರಾತ್ರಿ ಹುಡುಕಾಡಿದರು ಪತ್ತೆಯಾಗುತ್ತಿಲ್ಲ ಮೂವರು ಮಕ್ಕಳ ಸುಳಿವು: ಬೆಂಗಳೂರಿನಲ್ಲೊಂದು ವಿಚಿತ್ರ ಮಿಸ್ಸಿಂಗ್ ಸ್ಟೋರಿ!

ಹೇಗೆ ಹರಡುತ್ತದೆ?

ರೋಗಪೀಡಿತ ಜಾನುವಾರುಗಳ ಬಾಯಿ, ಮೂಗಿನಿಂದ ಸುರಿಯುವ ಲೋಳೆಯಂತಹ ದ್ರವ ಬಿದ್ದ ಕಡೆ ಆರೋಗ್ಯವಂತ ರಾಸುಗಳು ಆಹಾರ ಸೇವಿಸಿದರೆ ರೋಗ ಹರಡುತ್ತದೆ. ಜಾನುವಾರುಗಳು ಕುಡಿಯುವ ನೀರಿನಲ್ಲಿ ರೋಗ ಬಂದ ಹಸುವಿನ ಜೊಲ್ಲು, ಇತರ ದ್ರವ ಸೇರಿದ್ದರೂ ರೋಗ ಹರಡುತ್ತದೆ. ರೋಗಪೀಡಿತ ಆಕಳಿನ ಸಂಪರ್ಕದ ಕೀಟ, ನೋಣ, ಸೊಳ್ಳೆ ಇತರ ಜಾನುವಾರುಗಳಿಗೆ ಕಡಿದಾಗಲೂ ರೋಗ ಹರಡುತ್ತದೆ.

ರೋಗ ಲಕ್ಷಣಗಳು

ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುತ್ತವೆ. ವಾರಗಟ್ಟಲೆ ಜ್ವರ ಇರುವುದರೊಂದಿಗೆ ಹಾಲು ನೀಡುವ ಪ್ರಮಾಣವೂ ಕಡಿಮೆಯಾಗುತ್ತದೆ. ಈ ರೋಗವು ಮನುಷ್ಯರಿಗೆ, ಕುರಿ, ಮೇಕೆಗಳಿಗೆ ಹರಡುವುದಿಲ್ಲ. ಆದರೆ ಹಸು-ದತ್ತುಗಳಿಗೆ ಮಾತ್ರ ಜೀವಕಂಟಕವಾಗಬಲ್ಲದು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:46 am, Sat, 8 October 22