Lunar Eclipse 2023: ಚಂದ್ರಗ್ರಹಣದಿಂದ ಈ ರಾಶಿಯವರಿಗೆ ಅಶುಭ ಫಲ

ಈ ಚಂದ್ರ ಗ್ರಹಣವು ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರದ ನಾಲ್ಕನೆಯ ಚರಣದಲ್ಲಿ ನಡೆಯುತ್ತದೆ. ಈ ಸಮಯದಲ್ಲಿ ಕಟಕ ಮತ್ತು ಸಿಂಹ ಲಗ್ನಗಳು ನಡೆಯುತ್ತದೆ.‌ ‌ಚಂದ್ರ ಗ್ರಹಣದ ಸಮಯದಲ್ಲಿ, ಚಂದ್ರನು ಮೇಷ ರಾಶಿಯಲ್ಲಿರುತ್ತಾನೆ. ಈ ಕಾರಣದಿಂದಾಗಿ, ಮೇಷ ರಾಶಿಯ ಜನರ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು.

Lunar Eclipse 2023: ಚಂದ್ರಗ್ರಹಣದಿಂದ ಈ ರಾಶಿಯವರಿಗೆ ಅಶುಭ ಫಲ
ಚಂದ್ರಗ್ರಹಣ
Follow us
TV9 Web
| Updated By: ಆಯೇಷಾ ಬಾನು

Updated on: Oct 28, 2023 | 1:11 PM

ಸೂರ್ಯಗ್ರಹಣ (Solar Eeclipse 2023) ಸಂಭವಿಸಿದ 2 ವಾರಗಳ ಬೆನ್ನಲ್ಲೇ ಚಂದ್ರಗ್ರಹಣ (Lunar Eclipse 2023)  ಸಂಭವಿಸುತ್ತಿದೆ. ಈ ವರ್ಷದ 2ನೇ ಮತ್ತು ಕೊನೆಯ ಚಂಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾತ್ರಿ 11.30ಕ್ಕೆ ಆರಂಭವಾಗುವ ಚಂದ್ರಗ್ರಹಣ ನಾಳೆ ಬೆಳಗಿನ ಜಾವ 2.24 ಅಥವಾ 3.36 ನಿಮಿಷಕ್ಕೆ ಕೊನೆಗೊಳ್ಳುತ್ತದೆ. ರಾತ್ರಿ 11.30 ಕ್ಕೆ ಗ್ರಹಣ ಸ್ಪರ್ಶಕಾಲ ಆರಂಭವಾಗುತ್ತದೆ. ಮಧ್ಯರಾತ್ರಿ 1.42ಕ್ಕೆ ಗ್ರಹಣ ಮಧ್ಯಕಾಲ ಹಾಗೂ ಬೆಳಗಿನ ಜಾವ 3.30ಕ್ಕೆ ಗ್ರಹಣ ಮೋಕ್ಷಕಾಲವಿರಲಿದೆ.

ಗ್ರಹಣಕಾಲದಲ್ಲಿ ಪಾಲಿಸಬೇಕಾದ ಆಚರಣೆಗಳು

  • ಗ್ರಹಣ ಸ್ಪರ್ಶ ಸ್ನಾನ (ಹಿಡಿಯುವ ಸಮಯ) ಮತ್ತು ಮೋಕ್ಷ ಸ್ನಾನ (ಮುಗಿದ ನಂತರ) ಸ್ನಾನ ಮಾಡಲೇಬೇಕು.
  • ಗ್ರಹಣದ ಆರಂಭದಲ್ಲಿ ಮಾಡುವ ಸ್ನಾನದಿಂದ ಜಪ-ಪಾರಾಯಣ-ದಾನಾದಿಗಳಿಗೆ ಮಾತ್ರ ಅಧಿಕಾರ. ಊಟ, ಉಪಾಹಾರಗಳಿಗಿಲ್ಲ. ‌
  • ಗ್ರಹಣದ ಸೂತಕವು ಗ್ರಹಣ ಆರಂಭದ ಹನ್ನೆರಡು ಗಂಟೆಗಳ ಮೊದಲು ಆರಂಭವಾಗುತ್ತದೆ. ಗ್ರಹಣ ಮೋಕ್ಷ ಕಾಲದ ನಂತರ ಮಾಡುವ ಸ್ನಾನವು ಸೂತಕದ ಮುಕ್ತಾಯವಾಗಿರುತ್ತದೆ.
  • ಗ್ರಹಣ ಕಾಲದಲ್ಲಿ ಯಾವುದೇ ದ್ರವ ಅಹಾರವಾಗಲಿ ಅಥವಾ ಘನ ಆಹಾರವಾಗಲಿ ಸ್ವೀಕರಿಸಬಾರದು. ‌
  • ‌ಗ್ರಹಣ ಮೋಕ್ಷ ಕಾಲದ ನಂತರವೇ ಸ್ನಾನ, ಪೂಜೆ ಸಲ್ಲಿಸಿ, ಅಡುಗೆ ಮಾಡಿ, ಊಟ ಮಾಡಬೇಕು. ಗ್ರಹಣಕ್ಕಿಂತ ಮುಂಚೆ ಮಾಡಿಟ್ಟು ಅಥವಾ ಗ್ರಹಣಕಾಲದಲ್ಲಿ ಮಾಡಿಟ್ಟು ತಿನ್ನಬಾರದು. ‌
  • ಗ್ರಹಣ ಮೋಕ್ಷ ಕಾಲದ ನಂತರ ಅಗತ್ಯವಾಗಿ ಸ್ನಾನ ಮಾಡಲೇಬೇಕು. ಪವಿತ್ರ ಗಂಗಾಜಲ ಅಥವಾ ಶುದ್ದ ಜಲವನ್ನು ಮನೆಯ ಎಲ್ಲಾ ಭಾಗಗಳಲ್ಲಿಯೂ ಪ್ರೋಕ್ಷಿಸಬಹುದು.
  • ಗ್ರಹಣ ಕಾಲದಲ್ಲಿ ನದಿಗಳಲ್ಲಿ, ಮಹಾನದಿಗಳಲ್ಲಿ ಮಾಡುವ ಸ್ನಾನ ಅತೀ ಶ್ರೇಷ್ಠ. ಸಮುದ್ರ ಸ್ನಾನ ಸರ್ವೋತ್ತಮ.
  • ಯಾರ ಮನೆಯಲ್ಲಿ ಬಾವಿ ಮುಂತಾದವುಗಳಿಂದ ಗ್ರಹಣದ ನಂತರ ಶುದ್ಧ ನೀರನ್ನು ತೆಗೆದುಕೊಳ್ಳಲು ಸಾಧ್ಯವಿದೆಯೋ ಅಂತಹವರು ಹಾಗೆಯೇ ಮಾಡಬೇಕು. ಯಾರ ಮನೆಯಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಇದೆ ಅಂತಹವರು ನೀರಿನ ಪಾತ್ರೆಗಳ (ಹಾಲು, ಮೊಸರು, ತುಪ್ಪ ಮತ್ತು ಎಣ್ಣೆಯಲ್ಲಿ ಕರಿದ ಪದಾರ್ಥಗಳು ಇತರೆ) ಮೇಲೆ ದರ್ಬೆ ಅಥವಾ ತುಳಸಿ ಅಥವಾ ಗರಿಕೆಯನ್ನು ಹಾಕಿರಬೇಕು.
  • ಗ್ರಹಣ ಆರಂಭದಿಂದ ಅಂತ್ಯದ ಕಾಲದವರೆಗೂ ದೇವರಸ್ಮರಣೆ, ನಮಸ್ಕಾರ, ಜಪ, ಪಾರಾಯಣಗಳನ್ನು ಮಾಡಬೇಕು.

ಈ ಚಂದ್ರ ಗ್ರಹಣವು ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರದ ನಾಲ್ಕನೆಯ ಚರಣದಲ್ಲಿ ನಡೆಯುತ್ತದೆ. ಈ ಸಮಯದಲ್ಲಿ ಕಟಕ ಮತ್ತು ಸಿಂಹ ಲಗ್ನಗಳು ನಡೆಯುತ್ತದೆ.‌ ‌ಚಂದ್ರ ಗ್ರಹಣದ ಸಮಯದಲ್ಲಿ, ಚಂದ್ರನು ಮೇಷ ರಾಶಿಯಲ್ಲಿರುತ್ತಾನೆ. ಈ ಕಾರಣದಿಂದಾಗಿ, ಮೇಷ ರಾಶಿಯ ಜನರ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು. ಮೇಷ ರಾಶಿಯವರಿಗೆ ಚಂದ್ರ ಗ್ರಹಣದ ಸಮಯವು ಅನುಕೂಲಕರವಾಗಿರುವುದಿಲ್ಲ. ಚಂದ್ರ ಗ್ರಹಣವು ಕೆಲವು ರಾಶಿಚಕ್ರ ಚಿಹ್ನೆಗಳ ಮೇಲೆ ಶುಭ, ಮಿಶ್ರ ಮತ್ತು ಅಶುಭ ಪರಿಣಾಮ ಬೀರಲಿದೆ. ‌

ಇದನ್ನೂ ಓದಿ: Lunar Eclipse 2023: ಚಂದ್ರ ಗ್ರಹಣದ ವೇಳೆ ಈ ತಪ್ಪುಗಳನ್ನು ಮಾಡಬೇಡಿ, ಅಧ್ಯಾತ್ಮ ಹೇಳೋದೇನು?

ದ್ವಾದಶ ರಾಶಿಗಳಿಗೆ ರಾಹುಗ್ರಸ್ತ ಚಂದ್ರ ಗ್ರಹಣ ಫಲಗಳು

‌ ಶುಭ ಫಲ: ಮಿಥುನ, ಕಟಕ, ವೃಶ್ಚಿಕ, ಕುಂಭ ‌ ಮಿಶ್ರ ಫಲ: ಸಿಂಹ, ತುಲಾ, ಧನಸ್ಸು, ಮೀನ ‌ ‌ ‌ ಅಶುಭ ಫಲ: ಮೇಷ, ವೃಷಭ, ಕನ್ಯಾ, ಮಕರ ‌ ‌ ‌‌ ‌ ‌ ‌ ‌ ‌

ಗ್ರಹಣ ಪ್ರಾರಂಭವಾಗುತ್ತಿದ್ದಂತೆ ಮತ್ತು ಗ್ರಹಣ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿಯೇ ಸ್ನಾನ ಮಾಡಬೇಕು.‌ ಗ್ರಹಣ ಸ್ಪರ್ಶ ಸಮಯದಲ್ಲಿ ಮಾಡುವ ಸ್ನಾನವು ಲಕ್ಷ ಸ್ನಾನಗಳ ಫಲವನ್ನು ಮೋಕ್ಷ ನಂತರ ಮಾಡುವ ಸ್ನಾನವು ಅನಂತ ಸ್ನಾನಗಳ ಫಲವನ್ನು ಕೊಡುತ್ತದೆ. ಗ್ರಹಣ ಸಮಯದಲ್ಲಿ ಮಾಡುವ ಜಪ-ತಪಾದಿ, ಹೋಮವು ಕೋಟಿ ಹೋಮಗಳು ಫಲವನ್ನು ಕೊಡುತ್ತದೆ. ‌‌ ‌ ‌ ‌ ‌ ‌

ಪರಿಹಾರ

ಕಪ್ಪು ಅಥವಾ ಧೂಮ್ರ (ಬೂದು) ವರ್ಣ ಮತ್ತು ಉದ್ದಿನಕಾಳು ಹಾಗೂ ಶ್ವೇತ ವಸ್ತ್ರ ಮತ್ತು ಅಕ್ಕಿ ಇವುಗಳನ್ನು ದಕ್ಷಿಣೆ ಸಮೇತವಾಗಿ ದೇವಾಲಯದಲ್ಲಿ / ಬ್ರಾಹ್ಮಣರಿಗೆ / ಸತ್ಪಾತ್ರರಿಗೆ ದಾನ ಮಾಡಿ. ಗ್ರಹಣ ಸಮಯದಲ್ಲಿ ದುರ್ಗಾದೇವಿ, ಈಶ್ವರ ಸುಬ್ರಹ್ಮಣ್ಯ, ನಾಗ ದೇವತೆ, ಕಾಳಿ ಮಂತ್ರ ಜಪ ಅಥವಾ ಸ್ತೋತ್ರ ಪಾರಾಯಣ, ದುರ್ಗಾ ಕವಚ, ಸಪ್ತಶತೀ ಮತ್ತು ಸಹಸ್ರನಾಮ ಸ್ತೋತ್ರ ಪಠಿಸಿರಿ.

ಮಾಹಿತಿ: ವೇ!!ಶ್ರೀ!!ಕುಮಾರಸ್ವಾಮಿ ಶ್ರೀ ಜ್ಯೋತಿಷ್ಯ ಸಲಹಾ ಕೇಂದ್ರ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ