ಕೇರಳದ ತಕರಾರು ಅರ್ಜಿ ತಿರಸ್ಕರಿಸಿದ ಕೋರ್ಟ್, ಕರ್ನಾಟಕದ ಕೆಎಸ್‌ಆರ್‌ಟಿಸಿಗೆ ಗೆಲುವು

KSRTC ಟ್ರೇಡ್ ಮಾರ್ಕ್​ಗಾಗಿ ಕೇರಳ ಹಾಗೂ ಕರ್ನಾಟಕದ ನಡುವೆ ಕಾನೂನು ಸಮರ ನಡೆದಿದ್ದು, ಕೇರಳ ಸರ್ಕಾರದ ರಸ್ತೆ ಸಾರಿಗೆ ನಿಗಮವು (RTC) ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್‌ನಲ್ಲಿ ವಜಾಗೊಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ್ಕೆ ಗೆಲವು ಸಿಕ್ಕಿದೆ.

ಕೇರಳದ ತಕರಾರು ಅರ್ಜಿ ತಿರಸ್ಕರಿಸಿದ ಕೋರ್ಟ್, ಕರ್ನಾಟಕದ ಕೆಎಸ್‌ಆರ್‌ಟಿಸಿಗೆ ಗೆಲುವು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 15, 2023 | 8:36 PM

ಬೆಂಗಳೂರು, (ಡಿಸೆಂಬರ್ 15): ಕೆಎಸ್‌ಆರ್‌ಟಿಸಿ (KSRTC) ಹೆಸರು ಬಳಕೆ ಪ್ರಶ್ನಿಸಿ ಕೇರಳ RTC ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್​ ಹೈಕೋರ್ಟ್​ (madras high court ) ವಜಾಗೊಳಿಸಿದೆ. ಕೆಎಸ್ಆಆರ್​ಟಿಸಿ ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್​ ಹೈಕೋರ್ಟ್ ಹೇಳಿದೆ. ಈ ಹಿನ್ನೆಲೆಯಲ್ಲಿ ‘ಕೆಎಸ್ಆರ್ ಟಿ ಸಿ’ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಭರ್ಜರಿ ಜಯ ಸಿಕ್ಕಿದರೆ, ಕೇರಳಕ್ಕೆ ಮುಖಭಂಗವಾಗಿದೆ.

ಇದಾದ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ (Intellectual Property Appellate Board) ಮುಂದೆ ಕೇರಳ ಸಾರಿಗೆ ನಿಗಮದಿಂದ ಪ್ರಶ್ನೆ ಮಾಡಲಾಗಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 42 ವರ್ಷಗಳಿಂದ ಕರ್ನಾಟಕ ರಸ್ತೆ ಸಾರಿಗೆ ನಿಮಗದಿಂದ (RTC) ಟ್ರೇಡ್ ಮಾರ್ಕ್ ಅನ್ನು ಬಳಸುವುದರ ಬಗ್ಗೆ ತಿಳಿದಿರುತ್ತದೆ. ಆದ್ದರಿಂದ KSRTCಯು ಪಡೆದಿರುವ ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ ಎಂದು ಅರ್ಜಿ ಸಲ್ಲಿಸಲು ನೀವು (ಕೇರಳದ ರಸ್ತೆ ಸಾರಿಗೆ ನಿಗಮ) ಅರ್ಹರಾಗಿರುವುದಿಲ್ಲ ಎಂದು ಕರ್ನಾಟಕ  KSRTC ವಾದಿಸಿದೆ.

ಕರ್ನಾಟಕ ಪಡೆದಿರುವ KSRTC ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೇರಳ RTC ವಾದಿಸಿತ್ತು. KSRTC, ಕೇರಳ RTC ವಾದ ಆಲಿಸಿದ ಕೋರ್ಟ್​ ಕೇರಳ ಸಾರಿಗೆ ಸಂಸ್ಥೆ ಅರ್ಜಿ ವಜಾಗೊಳಿಸಿದೆ.

ಕೇರಳ KRTC ಕೂಡ 2019ರಲ್ಲಿ KSRTCಗೂ ಹಿಂದಿನಿಂದ ಸಂಕ್ಷಿಪ್ತ ಹೆಸರನ್ನು ಬಳಸುತ್ತಿರುವ ಕುರಿತು ನೋಂದಣಿಯನ್ನು ಪಡೆದುಕೊಂಡಿದೆ. ನಂತರ ಕೇಂದ್ರ ಸರ್ಕಾರವು ಐಪಿಎಬಿಯನ್ನು ರದ್ದುಗೊಳಿಸಿದ್ದು ಐಪಿಎಬಿ ಮುಂದೆ ಬಾಕಿ ಉಳಿದಿದ್ದ ಪ್ರಕರಣಗಳನ್ನು ಚೆನ್ನೈನಲ್ಲಿರುವ ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಈ ಪ್ರಕರಣವು ಡಿ.12ರಂದು ಮದ್ರಾಸ್ ಹೈಕೋರ್ಟ್ ಮುಂದೆ ಬಂದಿದ್ದು, ಇದೀಗ ಕೇರಳ RTC ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ

ಏನಿದು ಕೆಎಸ್ಆರ್ಟಿಸಿ ಹೆಸರು ಬಳಕೆ ಪ್ರಕರಣ?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್ ಟಿ ಸಿ’ಎಂದು ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣಪತ್ರವನ್ನು ನೀಡಲು ಅರ್ಜಿ ಸಲ್ಲಿಸಿ ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ 2013 ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣಪತ್ರವನ್ನು ಪಡೆದುಕೊಂಡಿತ್ತು. ಸಂಸ್ಥೆಯು 1.11.1973 ಯಿಂದ ಬಳಸುತ್ತಿರುವುದನ್ನು ಮಂಜೂರು ಮಾಡಲಾಗಿರುತ್ತದೆ. ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್ ಅವರಿಂದ ‘KSRTC’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್ ಅನ್ನು ಸಹ ಪಡೆಯಲಾಗಿರುತ್ತದೆ. ಆದ್ರೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ ಇದನ್ನು ಪ್ರಶ್ನಿಸಿತ್ತು.

ಮತ್ತಷ್ಟು ಕರ್ನಾಟಕದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Fri, 15 December 23

ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ