AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಸಿಹಿಸುದ್ದಿ ನೀಡಿದ ಸಾರಿಗೆ, ರೈಲ್ವೆ ಇಲಾಖೆ

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಗಳಿಗೆ ತೆರಳುವ ಲಕ್ಷಾಂತರ ಜನರಿಗಾಗಿ ಸಾರಿಗೆ ಇಲಾಖೆಯು 2,155 ಹೆಚ್ಚುವರಿ ಬಸ್‌ಗಳನ್ನು ಘೋಷಿಸಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ನಿಗಮಗಳು ಜಂಟಿಯಾಗಿ ಈ ವ್ಯವಸ್ಥೆ ಮಾಡಿವೆ. ಪ್ರಯಾಣಿಕರು ಸುಲಭವಾಗಿ ಪ್ರಯಾಣಿಸಲು ಕೆಎಸ್‌ಆರ್‌ಟಿಸಿ ವೆಬ್‌ಸೈಟ್ ಅಥವಾ ಆ್ಯಪ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ಮನವಿ ಮಾಡಲಾಗಿದೆ. ಹಬ್ಬದ ನಂತರ ವಾಪಸಾಗುವವರಿಗೂ ಇದೇ ರೀತಿ ಬಸ್ ವ್ಯವಸ್ಥೆ ಇರಲಿದೆ.

ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಸಿಹಿಸುದ್ದಿ ನೀಡಿದ ಸಾರಿಗೆ, ರೈಲ್ವೆ ಇಲಾಖೆ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Feb 13, 2026 | 7:15 PM

Share

ಬೆಂಗಳೂರು, ಫೆ.13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬರೋಬ್ಬರಿ 2,155 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಘೋಷಿಸಿದೆ. ಹಬ್ಬದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ರಾತ್ರಿಯಿಂದಲೇ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದೆ. ಇದನ್ನು ಮನಗಂಡು ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ಜಂಟಿಯಾಗಿ ಹೆಚ್ಚುವರಿ ಬಸ್ಸುಗಳನ್ನು ಬಿಟ್ಟಿದೆ.

ಇಂದಿನಿಂದ 895 ಹೆಚ್ಚುವರಿ ಬಸ್‌ಗಳು ರಸ್ತೆಗೆ ಇಳಿಯಲಿದೆ. ನಾಳೆ 1,180 ಹೆಚ್ಚುವರಿ ಬಸ್‌ಗಳು, ಹಾಗೂ ಭಾನುವಾರ 80 ಹೆಚ್ಚುವರಿ ಬಸ್‌ಗಳನ್ನು ಬಿಡಲಾಗುವುದು. ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣದಿಂದ ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಕ್ಕೆ ತೆರಳುವ ಬಸ್‌ಗಳು ಇಲ್ಲಿಂದ ಲಭ್ಯವಿರಲಿದೆ. ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಮಡಿಕೇರಿ ಮತ್ತು ತಮಿಳುನಾಡು ಕಡೆಗೆ ಹೋಗುವವರಿಗೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವಾರ್ಷಿಕ ಪರೀಕ್ಷೆ ಸಮಯದಲ್ಲಿ KSRTC ಬಸ್​​​ನಲ್ಲಿ ಉಚಿತ ಪ್ರಯಾಣ

ಇನ್ನು ನಿಲ್ದಾಣದಲ್ಲಿ ದಟ್ಟಣೆಯನ್ನು ತಪ್ಪಿಸಲು ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಅಧಿಕೃತ ವೆಬ್‌ಸೈಟ್ ಅಥವಾ ಆ್ಯಪ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ನಿಗಮ ಕೋರಿದೆ. ಹಬ್ಬ ಮುಗಿಸಿ ವಾಪಸ್ ಬರುವವರಿಗೂ ಸಹ ಇದೇ ರೀತಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಮಹಾಶಿವರಾತ್ರಿ ಹಬ್ಬಕ್ಕೆ ವಿಶೇಷ ರೈಲು

ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ (SWR) ಯಶವಂತಪುರ ಮತ್ತು ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಘೋಷಿಸಿದೆ. ಇಂದಿನಿಂದ 06209 ಸಂಖ್ಯೆಯ ರೈಲು ಯಶವಂತಪುರದಿಂದ ರಾತ್ರಿ 22:40ಕ್ಕೆ ಹೊರಟು, ಮರುದಿನ ಬೆಳಗ್ಗೆ 09:15ಕ್ಕೆ ಕಲಬುರಗಿ ತಲುಪಲಿದೆ. ರೈಲು ಸಂಖ್ಯೆ 06210 ನಾಳೆ(ಶನಿವಾರ) ಕಲಬುರಗಿಯಿಂದ ಬೆಳಗ್ಗೆ 10:15ಕ್ಕೆ ಹೊರಟು, ಅದೇ ದಿನ ರಾತ್ರಿ 21:40ಕ್ಕೆ ಯಶವಂತಪುರ ತಲುಪಲಿದೆ. ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಮತ್ತು ಶಹಾಬಾದ್ ಕೂಡ ವಿಶೇಷ ರೈಲುಗಳನ್ನು ಘೋಷಣೆ ಮಾಡಲಾಗಿದೆ. ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ