Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕೈದು ವರ್ಷ ಬದುಕಿರುತ್ತೇನೆ: ಅಲ್ಲಿಯವರೆಗೂ ಕರ್ನಾಟಕದ ನೀರಾವರಿಗಾಗಿ ಹೋರಾಟ ಎಂದ ದೇವೇಗೌಡ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮಹದಾಯಿ ನದಿ ನೀರಿಗಾಗಿ ಕರ್ನಾಟಕದ ಎಲ್ಲ ಪಕ್ಷಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕೆಂದು ಕರೆ ನೀಡಿದ್ದಾರೆ. ಗೋವಾ ಆಕ್ಷೇಪಣೆಯ ಹೊರತಾಗಿಯೂ ಕರ್ನಾಟಕಕ್ಕೆ ಸಿಗಬೇಕಾದ ನೀರಿಗಾಗಿ ನ್ಯಾಯಾಲಯದಲ್ಲಿ ಪ್ರಬಲ ವಾದ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಲಾಗಿದೆ ಮತ್ತು ಎತ್ತಿನಹೊಳೆ ಯೋಜನೆಗಳ ಪ್ರಗತಿಯ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಪಕ್ಷಾತೀತ ಒಗ್ಗಟ್ಟಿನ ಅವಶ್ಯಕತೆಯನ್ನು ಅವರು ಒತ್ತಿ ಹೇಳಿದ್ದಾರೆ.

ನಾಲ್ಕೈದು ವರ್ಷ ಬದುಕಿರುತ್ತೇನೆ: ಅಲ್ಲಿಯವರೆಗೂ ಕರ್ನಾಟಕದ ನೀರಾವರಿಗಾಗಿ ಹೋರಾಟ ಎಂದ ದೇವೇಗೌಡ
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ
Follow us
Sunil MH
| Updated By: ವಿವೇಕ ಬಿರಾದಾರ

Updated on:Feb 16, 2025 | 8:30 AM

ಬೆಂಗಳೂರು, ಫೆಬ್ರವರಿ 15: ಮಹದಾಯಿ ನದಿ (Mahadayi River) ನೀರಿಗಾಗಿ ನಾವೆಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕಿದೆ. ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​​ ಸೇರಿ ಎಲ್ಲರೂ ಹೋರಾಟ ಮಾಡಬೇಕು. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಶಕ್ತಿಮೀರಿ ಹೋರಾ ಮಾಡೋಣ. ನಾನು ಇನ್ನು 4-5 ವರ್ಷ ಬದುಕಿರುತ್ತೇನೆ, ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Deve Gowda) ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹದಾಯಿ ಯೋಜನೆ ವಿವಾದ ನ್ಯಾಯಾಲಯದಲ್ಲಿದೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡಲು ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅದಕ್ಕೆ ನಮ್ಮ ಸರ್ಕಾರ ಪ್ರತಿಭಟನೆ ಮಾಡಿ ಅರ್ಜಿ ಹಾಕಿದೆ. ವಿವಾದ ಕೋರ್ಟ್​ನಲ್ಲಿರುವಾಗ ಪ್ರಧಾನಿ ಏನು ಮಾಡುತ್ತಾರೆ. ಹಾಗಾಗಿ ನಮ್ಮವರು ಕೋರ್ಟ್​ನಲ್ಲಿ ಪ್ರಬಲ ವಾದ ಮಾಡಬೇಕು. ನಾವೆಲ್ಲ ಪಕ್ಷಭೇದ ಮರೆತು ಹೋರಾಟ ಮಾಡಬೇಕು ಎಂದು ಕರೆ ಕೊಟ್ಟರು.

ಇದನ್ನೂ ಓದಿ: ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಪ್ರಹ್ಲಾದ್ ಜೋಶಿ ಬಳಿ ಅನ್ನದಾತರ ಮನವಿ

25 ಟಿಎಂಸಿ ನೀರು ಕರ್ನಾಟಕಕ್ಕೆ ಕೊಡಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದೇನೆ. ಮಹದಾಯಿ ಯೋಜನೆಗೆ ಗೋವಾ ಮತ್ತು ಪರಿಸರದ ಸಮಸ್ಯೆ ಇದೆ. ಅದಕ್ಕೆ ಕೊಡಲು ಆಗಲ್ಲ ಅಂತ ಹೇಳಿದ್ದಾರೆ. ಕುಡಿಯುವ ನೀರಿಗಾಗಿ ನಮ್ಮ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಹೋರಾಟ ಮಾಡುತ್ತಿದೆ. ಎತ್ತಿನಹೊಳೆ ಯೋಜನೆಗೆ ₹8 ಸಾವಿರ ಕೋಟಿ ಮಂಜೂರು ಮಾಡಿದರೂ. ಈಗ 25 ಸಾವಿರ ಕೋಟಿ ನೀಡಿದ್ದಾರೆ, ಅದು ಎಲ್ಲಿವರೆಗೆ ಬಂದಿದೆ ಗೊತ್ತಿಲ್ಲ. ಎಲ್ಲಿಯವರೆಗೆ ಯೋಜನೆ ಆಗಿದೆ, ಅಲ್ಲಿಯವರೆಗೆ ನೋಡಿಕೊಂಡು ಬರೋಣ ಎಂದರು.

ಗೋದಾವರಿ, ಕೃಷ್ಣಾ, ಕಾವೇರಿ ನದಿಗಳ ಜೋಡಣೆಗೆ ಮನವಿ: ದೇವೇಗೌಡ

ಗೋದಾವರಿ, ಕೃಷ್ಣಾ, ಕಾವೇರಿ ನದಿಗಳ ಜೋಡಣೆಗೆ ಮನವಿ ಮಾಡುತ್ತೇನೆ. ನಮ್ಮ ಪಾಲಿನ ನೀರನ್ನು ಕೊಡಬೇಕೆಂದು ಸಭೆ ಮಾಡುತ್ತೇನೆ. ಸಿದ್ದರಾಮಯ್ಯ ಜತೆ ಮಾತಾಡೋಕೆ ನನಗೆ ಯಾವುದೇ ಆತಂಕ ಇಲ್ಲ. ನೀರಾವರಿ ಮಂತ್ರಿ ಜತೆ ಮಾತಾಡೋಕೆ ತೊಂದರೆ ಇಲ್ಲ. ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಸ್ವಲ್ಪ ಶಕ್ತಿ ನೀಡಿದರೇ ಸ್ಟೀಲ್ ಕಂಪನಿ ಪುನರುಜ್ಜೀವನಕ್ಕಾಗಿ ಹೋರಾಟ ಮಾಡುತ್ತಾರೆ. ಭದ್ರಾವತಿ ಉಕ್ಕಿನ ಕಾರ್ಖಾನೆ ಮತ್ತೆ ಪುನರುಜ್ಜೀವನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ರಾಜಕೀಯ ಸಾಕು, ರಾಜ್ಯದ ಅಭಿವೃದ್ಧಿ ಮಾಡೋಣ. ತಮಿಳುನಾಡಿನವರ ಒಗ್ಗಟ್ಟಿನ ಹೋರಾಟವನ್ನು ನಾವು ಕಲಿಯಬೇಕು ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Sat, 15 February 25

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ