ಮಹದಾಯಿ ವಿವಾದ: ಕಳಸಾ-ಬಂಡೂರಿ ನಾಲಾ ಯೋಜನೆಗೆ ನೀಡಿದ್ದ ಒಪ್ಪಿಗೆಗೆ ತಡೆ

|

Updated on: Dec 18, 2019 | 4:36 PM

ದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದ ಹೊಸ ತಿರುವುಪಡೆದುಕೊಂಡಿದೆ. ಕಳಸಾ-ಬಂಡೂರಿ ನಾಲಾ ಯೋಜನೆಗೆ ನೀಡಿದ್ದ ಒಪ್ಪಿಗೆ ಆದೇಶವನ್ನು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಅಮಾನತು ಮಾಡಿದೆ. ಮಹದಾಯಿ ನದಿ ನೀರು ನ್ಯಾಯಾಧಿಕರಣದ ತೀರ್ಪು ಪ್ರಶ್ನಿಸಿ ಮೂರು ರಾಜ್ಯಗಳು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿವೆ. ಗೋವಾ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದೆ. ಸುಪ್ರೀಂಕೋರ್ಟ್​ನಲ್ಲಿ ವಿವಾದ ಬಗೆಹರಿಯುವವರೆಗೂ ಈ ಹಿಂದೆ ಒಪ್ಪಿಗೆ ನೀಡಿದ್ದ ಆದೇಶಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ತಡೆ […]

ಮಹದಾಯಿ ವಿವಾದ: ಕಳಸಾ-ಬಂಡೂರಿ ನಾಲಾ ಯೋಜನೆಗೆ ನೀಡಿದ್ದ ಒಪ್ಪಿಗೆಗೆ ತಡೆ
Follow us on

ದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದ ಹೊಸ ತಿರುವುಪಡೆದುಕೊಂಡಿದೆ. ಕಳಸಾ-ಬಂಡೂರಿ ನಾಲಾ ಯೋಜನೆಗೆ ನೀಡಿದ್ದ ಒಪ್ಪಿಗೆ ಆದೇಶವನ್ನು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಅಮಾನತು ಮಾಡಿದೆ.

ಮಹದಾಯಿ ನದಿ ನೀರು ನ್ಯಾಯಾಧಿಕರಣದ ತೀರ್ಪು ಪ್ರಶ್ನಿಸಿ ಮೂರು ರಾಜ್ಯಗಳು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿವೆ. ಗೋವಾ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದೆ. ಸುಪ್ರೀಂಕೋರ್ಟ್​ನಲ್ಲಿ ವಿವಾದ ಬಗೆಹರಿಯುವವರೆಗೂ ಈ ಹಿಂದೆ ಒಪ್ಪಿಗೆ ನೀಡಿದ್ದ ಆದೇಶಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ತಡೆ ನೀಡಿದೆ.