AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

ಮಹಾರಾಣಿ ಕ್ಲಸ್ಟರ್ ವಿವಿ, ಸರ್ಕಾರದ ಆದೇಶಕ್ಕೂ ಮುನ್ನ ಪರೀಕ್ಷೆಗೆ ಮುಂದಾಗಿದ್ದು ಜುಲೈ 19ರಿಂದ ಪರೀಕ್ಷೆ ನಡೆಸಲಾಗುವುದೆಂದು ಸುತ್ತೋಲೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಮಹಾರಾಣಿ ಕ್ಲಸ್ಟರ್ ವಿವಿಯ ಆದೇಶವನ್ನು ತಳ್ಳಿ ಹಾಕಿದ್ದಾರೆ.

ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
TV9 Web
| Edited By: |

Updated on:Jul 14, 2021 | 12:30 PM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಶೈಕ್ಷಣಿಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗದ ಕನಿಷ್ಠ ಶೇ. 80ರಷ್ಟು ವಿದ್ಯಾರ್ಥಿಗಳಿಗಾದರೂ ಕೊವಿಡ್ ಲಸಿಕೆ ನೀಡಿ ಹಾಗೂ ಬಾಕಿ ಇರುವ ವಿವಿಧ ಸೆಮಿಸ್ಟರ್ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕು ಎಂಬ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಚಿಂತಿಸಿದೆ. ಆದ್ರೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಧರಣಿಗೆ ಮುಂದಾಗಿದ್ದಾರೆ.

ಮಹಾರಾಣಿ ಕ್ಲಸ್ಟರ್ ವಿವಿ, ಸರ್ಕಾರದ ಆದೇಶಕ್ಕೂ ಮುನ್ನ ಪರೀಕ್ಷೆಗೆ ಮುಂದಾಗಿದ್ದು ಜುಲೈ 19ರಿಂದ ಪರೀಕ್ಷೆ ನಡೆಸಲಾಗುವುದೆಂದು ಸುತ್ತೋಲೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಮಹಾರಾಣಿ ಕ್ಲಸ್ಟರ್ ವಿವಿಯ ಆದೇಶವನ್ನು ತಳ್ಳಿ ಹಾಕಿದ್ದಾರೆ. ಕೂಡಲೇ ಸುತ್ತೋಲೆ ಹಿಂಪಡೆಯುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿಯ ಮುಂಭಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗೂ ಆಫ್ ಲೈನ್ ಪರೀಕ್ಷೆ ರದ್ದತಿಗೆ ಒತ್ತಾಯಿಸಿದ್ದಾರೆ.

ಅನೇಕ ಕಾಲೇಜುಗಳಲ್ಲಿ ಲಸಿಕೆ ಕಾರ್ಯಕ್ರಮ ಪೂರ್ಣವಾಗಿಲ್ಲ. ಹೀಗಿರುವಾಗ ಆಫ್ ಲೈನ್ ತರಗತಿ, ಪರೀಕ್ಷೆ ನಡೆಸಬಾರದೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಒಂದೇ ಬಾರಿ 2 ಸೆಮಿಸ್ಟರ್ ಪರೀಕ್ಷೆ ಕೈಬಿಡುವಂತೆ ಒತ್ತಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರು ನಡೆಸುತ್ತಿರುವ ಧರಣಿಗೆ AIDSO ವಿದ್ಯಾರ್ಥಿ ಸಂಘಟನೆ ಸಾಥ್ ಕೊಟ್ಟಿದೆ. Maharani cluster university

ಇದನ್ನೂ ಓದಿ: ಕಾಲೇಜುಗಳಿಗೆ ಕಂಟಕವಾದ ಕೊರೊನಾ.. ಕಿಟ್ ಧರಿಸಿ ಮಹಾರಾಣಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

Published On - 12:14 pm, Wed, 14 July 21

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್