ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

| Updated By: ಆಯೇಷಾ ಬಾನು

Updated on: Jul 14, 2021 | 12:30 PM

ಮಹಾರಾಣಿ ಕ್ಲಸ್ಟರ್ ವಿವಿ, ಸರ್ಕಾರದ ಆದೇಶಕ್ಕೂ ಮುನ್ನ ಪರೀಕ್ಷೆಗೆ ಮುಂದಾಗಿದ್ದು ಜುಲೈ 19ರಿಂದ ಪರೀಕ್ಷೆ ನಡೆಸಲಾಗುವುದೆಂದು ಸುತ್ತೋಲೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಮಹಾರಾಣಿ ಕ್ಲಸ್ಟರ್ ವಿವಿಯ ಆದೇಶವನ್ನು ತಳ್ಳಿ ಹಾಕಿದ್ದಾರೆ.

ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
Follow us on

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಶೈಕ್ಷಣಿಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗದ ಕನಿಷ್ಠ ಶೇ. 80ರಷ್ಟು ವಿದ್ಯಾರ್ಥಿಗಳಿಗಾದರೂ ಕೊವಿಡ್ ಲಸಿಕೆ ನೀಡಿ ಹಾಗೂ ಬಾಕಿ ಇರುವ ವಿವಿಧ ಸೆಮಿಸ್ಟರ್ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕು ಎಂಬ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಚಿಂತಿಸಿದೆ. ಆದ್ರೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಧರಣಿಗೆ ಮುಂದಾಗಿದ್ದಾರೆ.

ಮಹಾರಾಣಿ ಕ್ಲಸ್ಟರ್ ವಿವಿ, ಸರ್ಕಾರದ ಆದೇಶಕ್ಕೂ ಮುನ್ನ ಪರೀಕ್ಷೆಗೆ ಮುಂದಾಗಿದ್ದು ಜುಲೈ 19ರಿಂದ ಪರೀಕ್ಷೆ ನಡೆಸಲಾಗುವುದೆಂದು ಸುತ್ತೋಲೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಮಹಾರಾಣಿ ಕ್ಲಸ್ಟರ್ ವಿವಿಯ ಆದೇಶವನ್ನು ತಳ್ಳಿ ಹಾಕಿದ್ದಾರೆ. ಕೂಡಲೇ ಸುತ್ತೋಲೆ ಹಿಂಪಡೆಯುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿಯ ಮುಂಭಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗೂ ಆಫ್ ಲೈನ್ ಪರೀಕ್ಷೆ ರದ್ದತಿಗೆ ಒತ್ತಾಯಿಸಿದ್ದಾರೆ.

ಅನೇಕ ಕಾಲೇಜುಗಳಲ್ಲಿ ಲಸಿಕೆ ಕಾರ್ಯಕ್ರಮ ಪೂರ್ಣವಾಗಿಲ್ಲ. ಹೀಗಿರುವಾಗ ಆಫ್ ಲೈನ್ ತರಗತಿ, ಪರೀಕ್ಷೆ ನಡೆಸಬಾರದೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಒಂದೇ ಬಾರಿ 2 ಸೆಮಿಸ್ಟರ್ ಪರೀಕ್ಷೆ ಕೈಬಿಡುವಂತೆ ಒತ್ತಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರು ನಡೆಸುತ್ತಿರುವ ಧರಣಿಗೆ AIDSO ವಿದ್ಯಾರ್ಥಿ ಸಂಘಟನೆ ಸಾಥ್ ಕೊಟ್ಟಿದೆ.

ಇದನ್ನೂ ಓದಿ: ಕಾಲೇಜುಗಳಿಗೆ ಕಂಟಕವಾದ ಕೊರೊನಾ.. ಕಿಟ್ ಧರಿಸಿ ಮಹಾರಾಣಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

Published On - 12:14 pm, Wed, 14 July 21