AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Assembly Election: ಮಹಾರಾಷ್ಟ್ರ ಚುನಾವಣಾ ಅಖಾಡಕ್ಕಿಳಿಯಲು ಡಿಸಿಎಂ ಡಿಕೆ ಶಿವಕುಮಾರ್ ಸಜ್ಜು

ಕರ್ನಾಟಕದ ಉಪಚುನಾವಣೆ ಬಳಿಕ ಇದೀಗ ಮಹಾರಾಷ್ಟ್ರ ಚುನಾವಣಾ ಅಖಾಡಕ್ಕಿಳಿಯಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಜ್ಜಾಗಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಅಬ್ಬರದ ಮತಬೇಟೆ ನಡೆಸಲಿದ್ದಾರೆ. ಇಂದು ಮೊದಲ ದಿನವಾಗಿದ್ದು ಭೀವಂಡಿ, ಚಾಂಡಿವಾಲಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

Maharashtra Assembly Election: ಮಹಾರಾಷ್ಟ್ರ ಚುನಾವಣಾ ಅಖಾಡಕ್ಕಿಳಿಯಲು ಡಿಸಿಎಂ ಡಿಕೆ ಶಿವಕುಮಾರ್ ಸಜ್ಜು
ಡಿಕೆ ಶಿವಕುಮಾರ್ Image Credit source: India Today
ನಯನಾ ರಾಜೀವ್
|

Updated on: Nov 15, 2024 | 10:12 AM

Share

ಕರ್ನಾಟಕದ ಉಪಚುನಾವಣೆ ಬಳಿಕ ಇದೀಗ ಮಹಾರಾಷ್ಟ್ರ ಚುನಾವಣಾ ಅಖಾಡಕ್ಕಿಳಿಯಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಜ್ಜಾಗಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಅಬ್ಬರದ ಮತಬೇಟೆ ನಡೆಸಲಿದ್ದಾರೆ. ಇಂದು ಮೊದಲ ದಿನವಾಗಿದ್ದು ಭೀವಂಡಿ, ಚಾಂಡಿವಾಲಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಪ್ರಚಾರ ಮುಗಿಸಿ ಮತ್ತೆ ಬೆಂಗಳೂರಿಗೆ ವಾಪಸಾಗಲಿದ್ದಾರೆ, ನಾಳೆ(ನವೆಂಬರ್ 16) ಸೊಲ್ಲಾಪುರಕ್ಕೆ ತೆರಳಲಿದ್ದಾರೆ, ನಾಡಿದ್ದು ಮತ್ತೆ ಸರಣಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಜಾಟ್, ಅಕ್ಕಾಲ್ಕೋಟ್,ಸೊಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಾಡಿದ್ದು, ಲಾಥೂರ್ ಕ್ಷೇತ್ರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರಚಾರ ಮಾಡಲಿದ್ದಾರೆ.

ಇಂದು ಬೆಳಗ್ಗೆ 9.55ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಮುಂಬೈಗೆ ತೆರಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮುಂಬೈ ಏರ್ಪೋರ್ಟ್​ಗೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆಯ ಮೂಲಕ ಸಾಗಿ ಮುಂಬೈ ವೆಸ್ಟ್ ವಿಧಾನಸಭಾ ಕ್ಷೇತ್ರವಾದಂತ ಭೀವಂಡಿಯಲ್ಲಿ ಪ್ರಚಾರ ನಡೆಸಲಿದ್ದಾರೆ.

ಸಂಜೆ 5 ಗಂಟೆಗೆ ಚಾಂಡೀವಲಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿರುವಂತ ಅವರು, ರಾತ್ರಿ 7.55ಕ್ಕೆ ಮುಂಬೈನಿಂದ ವಿಮಾನದಲ್ಲಿ ಹೊರಟು, ಬೆಂಗಳೂರನ್ನು ರಾತ್ರಿ 9.55ಕ್ಕೆ ತಲುಪಲಿದ್ದಾರೆ. ನ.16ರಂದು ಸೊಲ್ಲಾಪುರದಲ್ಲಿಯೇ ಉಳಿದುಕೊಳ್ಳಲಿದ್ದು, 17ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಲಾತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತಪ್ರಚಾರ ನಡೆಸಲಿದ್ದಾರೆ.

ಮಹಾರಾಷ್ಟ್ರದಲ್ಲಿ ಎಂವಿಎ ಮೈತ್ರಿಯೊಂದಿಗೆ ಕಾಂಗ್ರೆಸ್​, ಶಿವಸೇನಾ (ಯುಬಿಟಿ) ಮತ್ತು ನ್ಯಾಷನಲ್​ ಕಾಂಗ್ರೆಸ್​ ಪಕ್ಷ (ಎಸ್​ಪಿ) ಸ್ಪರ್ಧಿಸುತ್ತಿದೆ. ನವೆಂಬರ್​ 20ರಂದು ಮಹಾರಾಷ್ಟ್ರದಲ್ಲಿ ಮತದಾನ ನಡೆಯಲಿದ್ದು, ನವೆಂಬರ್​ 23ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಚಾರ ನಡೆಸಿದ್ದಾರೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ಅಜಿತ್ ಪವಾರ್​ ಇದ್ದ ಹೆಲಿಕಾಪ್ಟರ್​, ಬ್ಯಾಗ್​ಗಳನ್ನು ಪರಿಶೀಲಿಸಿದ ಚುನಾವಣಾ ಆಯೋಗದ ಅಧಿಕಾರಿಗಳು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ನವೆಂಬರ್ 20 ರಂದು ರಾಜ್ಯದ 288 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಜಾರ್ಖಂಡ್ ಜೊತೆಗೆ ರಾಜ್ಯದ ಚುನಾವಣಾ ಫಲಿತಾಂಶಗಳು ನವೆಂಬರ್ 23 ರಂದು ಪ್ರಕಟಗೊಳ್ಳಲಿವೆ. ಬಿಜೆಪಿ, ಕಾಂಗ್ರೆಸ್, ಶಿವಸೇನೆ ಮತ್ತು ಎನ್‌ಸಿಪಿಯ ಎರಡೂ ಪಾಳಯಗಳು ಸೇರಿದಂತೆ ಒಟ್ಟು 158 ಪಕ್ಷಗಳು ಉತ್ತರ ಪ್ರದೇಶದ ನಂತರ ದೇಶದ ಎರಡನೇ ಅತಿದೊಡ್ಡ ರಾಜ್ಯ ಚುನಾವಣಾ ಸ್ಪರ್ಧೆಯಲ್ಲಿ ಕಣದಲ್ಲಿವೆ.

ಈ ಪಕ್ಷಗಳ ಹೊರತಾಗಿ ರಾಜ್ಯದಲ್ಲಿ 2086 ಸ್ವತಂತ್ರ ಅಭ್ಯರ್ಥಿಗಳೂ ಇದ್ದಾರೆ. ಚುನಾವಣಾ ಆಯೋಗದ ಪ್ರಕಾರ, ರಾಜ್ಯದ 288 ಸ್ಥಾನಗಳಿಗೆ ಒಟ್ಟು 4136 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 161 ಸ್ಥಾನಗಳನ್ನು ಗೆದ್ದಿತ್ತು. ಯುಪಿಎ 98 ಸ್ಥಾನ ಪಡೆದಿತ್ತು. ಇತರರು 29 ಸ್ಥಾನ ಪಡೆದಿದ್ದರು. ಇದರಲ್ಲಿ ಸಣ್ಣ ಪಕ್ಷಗಳು 16 ಸ್ಥಾನಗಳನ್ನು ಪಡೆದಿವೆ. 13 ಸ್ಥಾನಗಳಲ್ಲಿ ಪಕ್ಷೇತರರು ಗೆದ್ದಿದ್ದರು.

ಮಹಾರಾಷ್ಟ್ರ ಚುನಾವಣೆಯಲ್ಲಿ ಆರು ಪ್ರಮುಖ ಪಕ್ಷಗಳನ್ನು ಹೊರತುಪಡಿಸಿ 152 ಸಣ್ಣ ಪಕ್ಷಗಳು ಇವೆ. ಇವುಗಳಲ್ಲಿ ಟಿಪ್ಪು ಸುಲ್ತಾನ್ ಪಕ್ಷ, ಉತ್ತರ ಭಾರತ ವಿಕಾಸ ಸೇನೆ, ಪೀಸ್ ಪಾರ್ಟಿ, ನೇತಾಜಿ ಕಾಂಗ್ರೆಸ್ ಸೇನೆ, ನಿರ್ಭಯ್ ಮಹಾರಾಷ್ಟ್ರ ಪಕ್ಷ, ರಾಷ್ಟ್ರೀಯ ವಿಶ್ವ ನಾಯಕ ಪಕ್ಷ, ರಾಷ್ಟ್ರೀಯ ಉಲಮಾ ಕೌನ್ಸಿಲ್, ಜೈ ವಿದರ್ಭ ಪಕ್ಷದಂತಹ ಪಕ್ಷಗಳು ಸೇರಿವೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜನತಾದಳ ಸೆಕ್ಯುಲರ್ (ಜೆಡಿಎಸ್) ಕೂಡ ಕಣದಲ್ಲಿದೆ. ರೈಟ್ ಟು ರೀಕಾಲ್ ಪಕ್ಷವು 18 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಜ್ಯದ 288 ಸ್ಥಾನಗಳಿಗೆ ಒಟ್ಟು 4136 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ