ಕರ್ನಾಟಕದಲ್ಲಿ ಮಹಾರಾಷ್ಟ್ರ ಮಾದರಿ ಆಪರೇಷನ್: ಮಹಾ ಸಿಎಂ ಏಕನಾಥ್ ಶಿಂಧೆ ಶಾಕಿಂಗ್ ಹೇಳಿಕೆ

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯಲಿದೆ ಎಂಬ ಬಗ್ಗೆ ಇದೀಗ ಮತ್ತೊಂದು ಸುಳಿವು ದೊರೆತಿದೆ. ಈ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮಾತನಾಡಿರುವುದು ಈಗ ಸದ್ದು ಮಾಡುತ್ತಿದೆ. ಕರ್ನಾಟಕದಲ್ಲಿ ಆಪರೇಷನ್ ಕಮಲದ ಬಗ್ಗೆ ಶಿಂಧೆ ಏನಂದರು ಎಂಬ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಮಹಾರಾಷ್ಟ್ರ ಮಾದರಿ ಆಪರೇಷನ್: ಮಹಾ ಸಿಎಂ ಏಕನಾಥ್ ಶಿಂಧೆ ಶಾಕಿಂಗ್ ಹೇಳಿಕೆ
ಏಕನಾಥ್ ಶಿಂಧೆ
Follow us
Ganapathi Sharma
|

Updated on:May 13, 2024 | 1:05 PM

ಬೆಂಗಳೂರು, ಮೇ 13: ಲೋಕಸಭೆ ಚುನಾವಣೆ (Lok Sabha Polls) ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Government) ಪತನವಾಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಸುಳಿವು ನೀಡಿದ್ದಾರೆ. ತೆರೆಯ ಮರೆಯಲ್ಲಿ ಕರ್ನಾಟಕದ ಬಿಜೆಪಿ ನಾಯಕರಿಂದಲೇ ತಮಗೆ ಆಪರೇಷನ್​​ ಮಾಡಲು (Operation Kamala) ಆಹ್ವಾನವಿದೆ ಎಂದಿರುವ ಅವರು, ‘ನಾಥ್’ ಮಾದರಿ ಆಪರೇಷನ್ ಮಹಾರಾಷ್ಟ್ರದಲ್ಲಿ ಖ್ಯಾತಿ ಗಳಿಸಿದೆ. ಅದೇ ಮಾದರಿಯ ಆಪರೇಷನ್​​ಗೆ ಕರ್ನಾಟಕದಿಂದಲೂ ಆಹ್ವಾನವಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಸತರಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮೇ 9 ರಂದು ಏಕನಾಥ್ ಶಿಂಧೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆಗ ಮಾತನಾಡಿದ್ದ ಶಿಂಧೆ, ಲೋಕಸಭೆಯ ನಂತರ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದರು.

ಚುನಾವಣಾ ಪ್ರಚಾರದ ನಿಮಿತ್ತ ಬೆಳಗಾವಿಗೆ ಹೋಗಿದ್ದಾಗ ಅಲ್ಲಿನ ಬಿಜೆಪಿ ಪದಾಧಿಕಾರಿಗಳು ಮಹಾರಾಷ್ಟ್ರದ ಮುಖ್ಯಮಂತ್ರಿಯಾದ ನನ್ನನ್ನು ಭೇಟಿಯಾಗಲು ಉತ್ಸುಕತೆಯಿಂದ ಬಂದಿದ್ದರು. ಈ ‘ನಾಥ’ ಯಾರೆಂದು ನೋಡಲು ಬಯಸಿದ್ದರು. ಆಗ, ಲೋಕಸಭೆ ಚುನಾವಣೆ ನಂತರ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ‘ನಾಥ್’ ಮಾದರಿ ಆಪರೇಷನ್​ಗೆ ಮನವಿ ಮಾಡಿದ್ದರು ಎಂದು ಶಿಂಧೆ ಹೇಳಿದ್ದಾರೆ.

ಆದರೆ, ಕರ್ನಾಟಕ ಸರ್ಕಾರ ಚುನಾವಣೆ ನಂತರ ಪತನವಾಗಲಿದೆಯೇ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಲು ಶಿಂಧೆ ನಿರಾಕರಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಆ ಬಗ್ಗೆ ಕೇಳಿದಾಗ ಸುಮ್ಮನೆ ನಕ್ಕು ಅಲ್ಲಿಂದ ತೆರಳಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್​ರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸುಪ್ರೀಂಗೆ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತ

ಶಿಂಧೆ ಹೇಳಿಕೆಗೆ ಕರ್ನಾಟಕದ ಬಿಜೆಪಿ ನಾಯಕರು ಈವರೆಗೆ ಪ್ರತಿಕ್ರಿಯೆ ನೀಡಿಲ್ಲ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ನಂತರ ಆಪರೇಷನ್ ಕಮಲ ನಡೆಯಲಿದೆ ಎಂಬ ಬಗ್ಗೆ ಈ ಹಿಂದೆಯೂ ಹಲವು ಬಾರಿ ವದಂತಿಗಳು ಹರಿದಾಡಿವೆ. ಅದಕ್ಕೆ ಕಾಂಗ್ರೆಸ್ ನಾಯಕರೂ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Mon, 13 May 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ