ಮಹಾರಾಷ್ಟ್ರ ಚುನಾವಣೆ: ಇವಿಎಂಗಳಲ್ಲಿ ಕನ್ನಡದಲ್ಲಿಯೂ ಕಾಣಿಸಿದ ಅಭ್ಯರ್ಥಿಗಳ ಹೆಸರು!

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ, ಬೆಳಗಾವಿ ಗಡಿ ಪ್ರದೇಶಗಳ ಇವಿಎಂಗಳಲ್ಲಿ ಕನ್ನಡದಲ್ಲೂ ಅಭ್ಯರ್ಥಿಗಳ ಹೆಸರುಗಳನ್ನು ಪ್ರದರ್ಶಿಸಲಾಗಿದೆ. ಇದು ಕನ್ನಡ ಮಾತನಾಡುವ ಮತದಾರರ ನಿಟ್ಟಿನಲ್ಲಿ ಚುನಾವಣಾ ಆಯೋಗ ಕೈಗೊಂಡ ಮಹತ್ವದ ಹೆಜ್ಜೆಯಾಗಿದೆ. ಇದೇ ಮೊದಲ ಬಾರಿಗೆ ಇಂಥದ್ದೊಂದು ಕ್ರಮವನ್ನು ಆ ಭಾಗದಲ್ಲಿ ಕೈಗೊಳ್ಳಲಾಗಿದೆ.

ಮಹಾರಾಷ್ಟ್ರ ಚುನಾವಣೆ: ಇವಿಎಂಗಳಲ್ಲಿ ಕನ್ನಡದಲ್ಲಿಯೂ ಕಾಣಿಸಿದ ಅಭ್ಯರ್ಥಿಗಳ ಹೆಸರು!
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Nov 21, 2024 | 8:08 AM

ಬೆಂಗಳೂರು, ನವೆಂಬರ್ 21: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಬುಧವಾರ ರಾತ್ರಿ ವೇಳೆಗೆ ಮತಗಟ್ಟೆ ಸಮೀಕ್ಷೆಗಳೂ ಹೊರಬಿದ್ದಿವೆ. ಮಹಾವಿಕಾಸ್ ಅಘಾಡಿಯನ್ನು ಹಿಂದಿಕ್ಕಿ ಬಿಜೆಪಿ ಮೈತ್ರಿಕೂಟ ಮಹಾಯುತಿ ಮತ್ತೊಮ್ಮೆ ಅಧಿಕಾರಕ್ಕೇರುವ ಸಾಧ್ಯತೆಗಳನ್ನು ಎಕ್ಸಿಟ್​ಪೋಲ್ ಸಮೀಕ್ಷೆಗಳು ನುಡಿದಿವೆ. ಏತನ್ಮಧ್ಯೆ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಕೆಲವು ವಿಶೇಷಗಳಿಗೂ ಸಾಕ್ಷಿಯಾಗಿದೆ.

ಬೆಳಗಾವಿ ಗಡಿ ಭಾಗದ ಪ್ರದೇಶಗಳ ಮತಗಟ್ಟೆಗಳಲ್ಲಿ ಇಡಲಾಗಿದ್ದ ವಿದ್ಯುನ್ಮಾನ ಮತ ಯಂತ್ರಗಳಲ್ಲಿ (ಇವಿಎಂ) ಅಭ್ಯರ್ಥಿಗಳ ಹೆಸರುಗಳ ಮರಾಠಿ ಜತೆ ಕನ್ನಡದಲ್ಲಿಯೂ ಕಾಣಿಸಿದೆ! ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ ಇಂಥದ್ದೊಂದು ಕ್ರಮವನ್ನು ಕೈಗೊಂಡಿದೆ.

ಯಾವೆಲ್ಲ ಕ್ಷೇತ್ರಗಳ ಇವಿಎಂಗಳಲ್ಲಿ ಕನ್ನಡ?

15 ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರದರ್ಶಿಸಲಾಗಿತ್ತು ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಲಾತೂರ್, ಮಂಗಳವೇಡ್, ಅಕ್ಕಲಕೋಟ, ಜತ್ತ್ ಮತ್ತು ದಕ್ಷಿಣ ಸೊಲ್ಲಾಪುರ ಸೇರಿದಂತೆ 15 ವಿಧಾನಸಭಾ ಕ್ಷೇತ್ರಗಳಲ್ಲಿ ಕನ್ನಡ ಮಾತನಾಡುವವರೇ ಹೆಚ್ಚು. ಮಹಾರಾಷ್ಟ್ರದ ಈ ಕ್ಷೇತ್ರಗಳಲ್ಲಿ ಕನಿಷ್ಠ 50 ರಿಂದ 60 ಲಕ್ಷ ಕನ್ನಡ ಮಾತನಾಡುವವರಿದ್ದು, ಹೆಚ್ಚಿನವರು ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೀಗಾಗಿ ಈ ಪ್ರದೇಶಗಳ ಮತಗಟ್ಟೆಗಳಲ್ಲಿ ಅಳವಡಿಸಿದ್ದ ಇವಿಎಂಗಳಲ್ಲಿ ಕನ್ನಡದಲ್ಲಿಯೂ ಅಭ್ಯರ್ಥಿಗಳ ಹೆಸರನ್ನು ಮುದ್ರಿಸಲಾಗಿತ್ತು ಎಂದು ವರದಿ ಉಲ್ಲೇಖಿಸಿದೆ.

ಕನ್ನಡಿಗ ಮತದಾರರ ಮಹತ್ವವನ್ನು ಮನಗಂಡ ವಿವಿಧ ಪಕ್ಷಗಳ ಅಭ್ಯರ್ಥಿಗಳು ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದ ಪ್ರಮುಖ ಕನ್ನಡಿಗ ನಾಯಕರನ್ನು ಸ್ಟಾರ್ ಪ್ರಚಾರಕರನ್ನಾಗಿ ಆಹ್ವಾನಿಸಿದ್ದರು ಎಂಬುದು ಗಮನಾರ್ಹ.

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಇತ್ತೀಚೆಗೆ ಮಹಾರಾಷ್ಟ್ರದ ರಾಜಕೀಯ ಪಕ್ಷಗಳನ್ನು ಭೇಟಿ ಮಾಡಿ, ಕರ್ನಾಟಕ-ಮಹಾರಾಷ್ಟ್ರ ಗಡಿ ರೇಖೆಯನ್ನು ಪ್ರಣಾಳಿಕೆಯಲ್ಲಿ ಸೇರಿಸಲು ಕೋರಿತ್ತು. ಅಚ್ಚರಿಯ ಸಂಗತಿಯೆಂದರೆ, ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ಚುನಾವಣಾ ಭಾಷಣಗಳಲ್ಲಿ ಗಡಿ ವಿಷಯವನ್ನು ಪ್ರಸ್ತಾಪಿಸಲಿಲ್ಲ. ಎಂಇಎಸ್​​​ಬೇಡಿಕೆಗೆ ಸೊಪ್ಪುಹಾಕಿರಲಿಲ್ಲ. ಬದಲಾಗಿ ಕನ್ನಡ ಮತದಾರರನ್ನು ತಲುಪಲು ಕನ್ನಡದಲ್ಲಿ ಪೋಸ್ಟರ್, ಹ್ಯಾಂಡ್ ಬಿಲ್ ಗಳನ್ನು ಮುದ್ರಿಸಿದ್ದರು.

ಮಹಾರಾಷ್ಟ್ರದ ಹಲವು ಗಡಿ ಗ್ರಾಮಗಳಲ್ಲಿ ಕನ್ನಡ ಭಾಷಿಕರು ತಮ್ಮ ಬಗ್ಗೆ ಸರ್ಕಾರದ ನಿರಾಸಕ್ತಿಯನ್ನು ಖಂಡಿಸಿ ಚಳವಳಿಯನ್ನು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೆ, ತಮ್ಮ ಗ್ರಾಮಗಳನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸುವ ಬಯಕೆಯನ್ನು ವ್ಯಕ್ತಪಡಿಸಿ ಪಂಚಾಯಿತಿಗಳಲ್ಲಿ ನಿರ್ಣಯಗಳನ್ನು ಸಹ ಮಾಡಿದ್ದರು. ಇದರ ಬೆನ್ನಲ್ಲೇ ಮಹರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಕನ್ನಡ ಭಾಷಿಕರನ್ನು ಓಲೈಸಿದ್ದಾರೆ. ಕನ್ನಡ ಮಾತನಾಡುವ ಹಳ್ಳಿಗಳಲ್ಲಿ ಆದ್ಯತೆಯ ಆಧಾರದ ಮೇಲೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಚುನಾವಣಾ ಆಯೋಗವೂ ಕನ್ನಡಿಗರ ಹಿತದೃಷ್ಟಿಯಿಂದ ಕ್ರಮ ಕೈಗೊಂಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ