AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಬೆಳಗಾವಿ ಗಡಿ ಪ್ರದೇಶದ 865 ಗ್ರಾಮಗಳಿಗೆ ಆರೋಗ್ಯ ಯೋಜನೆ ವಿಸ್ತರಿಸಿದ ಮಹಾರಾಷ್ಟ್ರ

ಬೆಳಗಾವಿ ಗಡಿ ಪ್ರದೇಶದ ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಹಮ್ಮಿಕೊಂಡಿರುವ ಆರೋಗ್ಯ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ 865 ಗ್ರಾಮಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

Belagavi News: ಬೆಳಗಾವಿ ಗಡಿ ಪ್ರದೇಶದ 865 ಗ್ರಾಮಗಳಿಗೆ ಆರೋಗ್ಯ ಯೋಜನೆ ವಿಸ್ತರಿಸಿದ ಮಹಾರಾಷ್ಟ್ರ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ
ಗಣಪತಿ ಶರ್ಮಾ
|

Updated on:Apr 04, 2023 | 8:22 PM

Share

ಮುಖ್ಯಾಂಶಗಳು

  • ಬೆಳಗಾವಿ ಗಡಿ ಪ್ರದೇಶದ ಗ್ರಾಮಗಳಲ್ಲಿ ಆರೋಗ್ಯ ಯೋಜನೆ ವಿಸ್ತರಿಸಿದ ಮಹಾರಾಷ್ಟ್ರ.
  • ಕರ್ನಾಟಕದ ತೀವ್ರ ವಿರೋಧದ ನಡುವೆಯೂ ಮಹಾರಾಷ್ಟ್ರದಿಂದ ಕ್ರಮ.
  • ಮಹಾರಾಷ್ಟ್ರ ಸರ್ಕಾರದ ನಡೆಯಿಂದ ಮತ್ತೆ ವಿವಾದ ಸೃಷ್ಟಿ ಸಾಧ್ಯತೆ.

ಬೆಂಗಳೂರು: ಬೆಳಗಾವಿ (Belagavi) ಗಡಿ ಪ್ರದೇಶದ ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಹಮ್ಮಿಕೊಂಡಿರುವ ಆರೋಗ್ಯ ಯೋಜನೆಯನ್ನು ಮಹಾರಾಷ್ಟ್ರ (Maharashtra) ಸರ್ಕಾರ 865 ಗ್ರಾಮಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರ ಏಪ್ರಿಲ್ 3ರಂದು ನಿರ್ಣಯ ಕೈಗೊಂಡಿತ್ತು. ಈಗಾಗಲೇ ಅಂತ್ಯೋದಯ ಆಹಾರ ಯೋಜನೆಯ (ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಕೈಗೊಂಡಿರುವ ಉಪಕ್ರಮ) ಫಲಾನುಭವಿಗಳಾಗಿರುವ ಜನರು, ಆದ್ಯತಾ ಗುಂಪಿನ ಕುಟುಂಬಗಳು, ಅನ್ನಪೂರ್ಣ ರೇಶನ್ ಕಾರ್ಡ್​​ದಾರರು ಮಾಹಾತ್ಮ ಜ್ಯೋತಿ ರಾವ್ ಫುಲೆ ಜನ ಆರೋಗ್ಯ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ ಎಂದು ಮಹಾರಾಷ್ಟ್ರ ಸರ್ಕಾರದ ನಿರ್ಣಯ ಉಲ್ಲೇಖಿಸಿದೆ.

ಬೆಳಗಾವಿ, ಕಾರವಾರ, ಕಲಬುರ್ಗಿ ಮತ್ತು ಬೀದರ್‌ ಗಡಿ ವ್ಯಾಪ್ತಿಯ 865 ಗ್ರಾಮಗಳನ್ನು ಆರೋಗ್ಯ ಯೋಜನೆಯಡಿ ಸೇರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದೇಶದ ಪ್ರಕಾರ, ಈ ಪ್ರದೇಶಗಳಲ್ಲಿ ವಾಸಿಸುವ ಕುಟುಂಬಗಳು ಸರ್ಕಾರದಿಂದ ಗುರುತಿಸಲ್ಪಟ್ಟ 996 ರೀತಿಯ ಚಿಕಿತ್ಸೆಗಳಿಗೆ ವರ್ಷಕ್ಕೆ 1.50 ಲಕ್ಷ ರೂಪಾಯಿಗಳವರೆಗೆ ವೈದ್ಯಕೀಯ ವಿಮೆಯನ್ನು ಪಡೆಯಲಿವೆ.

ಮಹಾರಾಷ್ಟ್ರ ಸರ್ಕಾರವು ರಾಜ್ಯದ ಹಲವಾರು ಆಸ್ಪತ್ರೆಗಳನ್ನು ಗುರುತಿಸಿದ್ದು, ಅವುಗಳಲ್ಲಿ ಜನರು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕ ವಿರೋಧಿಸಿದರೂ ಬೆಳಗಾವಿ ಗಡಿ ಪ್ರದೇಶದಲ್ಲಿ ಆರೋಗ್ಯ ಯೋಜನೆ ಜಾರಿಗೊಳಿಸಿಯೇ ಸಿದ್ಧ; ಮಹಾರಾಷ್ಟ್ರ ಶಾಸಕ

ಬೆಳಗಾವಿ ಗಡಿ ವಿಚಾರದಲ್ಲಿ ಉಭಯ ರಾಜ್ಯಗಳ ನಡುವೆ ಸಂಘರ್ಷ ಇದ್ದು, ಇದೀಗ ಮಹಾರಾಷ್ಟ್ರ ಸರ್ಕಾರ ಕೈಗೊಂಡಿರುವ ನಿರ್ಧಾರ ಮತ್ತಷ್ಟು ವಿವಾದಕ್ಕೆ ಕಾರಣವಾಗಲಿದೆ. ಬೆಳಗಾವಿ ಗಡಿ ಪ್ರದೇಶದಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಹಮ್ಮಿಕೊಂಡಿರುವ ಆರೋಗ್ಯ ಯೋಜನೆಯನ್ನು ಕರ್ನಾಟಕ ಸರ್ಕಾರ ತಡೆಯಲು ಮುಂದಾದರೂ ನಾವದನ್ನು ಹೇಗಾದರೂ ಮಾಡಿ ಜಾರಿಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಮಹಾರಾಷ್ಟ್ರದ ಶಾಸಕ ಶಂಭುರಾಜ್ ದೇಸಾಯಿ ಇತ್ತೀಚೆಗೆ ಹೇಳಿದ್ದರು.

ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದ ನಡೆ

ಬೆಳಗಾವಿ ಗಡಿ ಪ್ರದೇಶದಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಮಹಾರಾಷ್ಟ್ರ ಸರ್ಕಾರ ಹಮ್ಮಿಕೊಂಡಿರುವ ಆರೋಗ್ಯ ಯೋಜನೆ ಕರ್ನಾಟಕದಲ್ಲಿ ರಾಜಕೀಯ ಜಿದ್ದಾಜಿದ್ದಿ, ವಾಕ್ಸಮರಕ್ಕೆ ಕಾರಣವಾಗಿತ್ತು. ಕರ್ನಾಟಕದ ಮಹಾರಾಷ್ಟ್ರದ ಗಡಿಭಾಗದ ಹಳ್ಳಿಗಳಲ್ಲಿ ವಿವಿಧ ಯೋಜನೆಗಳ ಜಾರಿಗೆ ಮಹಾರಾಷ್ಟ್ರ ಸರ್ಕಾರ ₹54 ಕೋಟಿ ಮಂಜೂರು ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಇದು ಕನ್ನಡಿಗರ ಸ್ವಾಭಿಮಾನ ಕೆಣಕುವಂತಹ ನಡೆ. ನಾಡಿನ ಹಿತಕ್ಕೆ ಜೀವ ಪಣಕ್ಕಿಟ್ಟು ಹೊರಡಲು ನಾವು ಸಿದ್ಧ. ಕನ್ನಡಿಗರ ಸ್ವಾಭಿಮಾನ, ಕನ್ನಡದ ನೆಲ ಬಲಿ ಕೊಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಗಡಿ ಪ್ರದೇಶಕ್ಕೆ ಅನುದಾನ ಬಿಡುಗಡೆ ಮಾಡಿದರೆ ನಾನ್ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ್ದರು. ಜತೆಗೆ, ನಾವೂ ಕೂಡ ಮಹಾರಾಷ್ಟ್ರದಲ್ಲಿರುವ ಫಂಡರಪುರ, ತುಳಜಾಪುರಕ್ಕೆ ಹೋಗುವ ಕರ್ನಾಟಕದವರಿಗೆ ಹಣ ಬಿಡುಗಡೆ ಮಾಡುತ್ತೇವೆ. ಅವರು ಯಾವ ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಮಹಾರಾಷ್ಟ್ರದ ಹಸ್ತಕ್ಷೇಪವನ್ನು ಯಾವ ರೀತಿಯಲ್ಲಿ ತಡೆಗಟ್ಟಬೇಕು ಎಂಬುದರ ಬಗ್ಗೆ ಪರಾಮರ್ಶೆ ನಡೆಸಲಾಗುವುದು ಎಂದು ಹೇಳಿದ್ದರು.

Published On - 8:17 pm, Tue, 4 April 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ