ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರದಿಂದ ಪುಸ್ತಕ ಬಿಡುಗಡೆ.. ಫಡ್ನವೀಸ್ ಸಹ ಭಾಗಿ: ತಾರಕಕ್ಕೇರುತ್ತ ಅಸಮಾಧಾನ?
ಜನವರಿ 27. ಇಂದು 'ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ; ಸಂಘರ್ಷ ಅನಿ ಸಂಕಲ್ಪ' ಹೆಸರಿನ ಪುಸ್ತಕ ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು ಮಧ್ಯಾಹ್ನ 12 ಗಂಟೆಗೆ ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಬೆಳಗಾವಿ: ಮತ್ತೆ ಗಡಿ ಕಿಡಿ ಹೊತ್ತಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿರುವ ಹಾಗೆ ಕಾಣಿಸುತ್ತಿದೆ. ಏಕೆಂದರೆ ಇಂದು ವಿವಾದಿತ ಪುಸ್ತಕ ಬಿಡುಗಡೆಗೆ ಮಹಾರಾಷ್ಟ್ರ ಸರ್ಕಾರದ ಸಿದ್ಧತೆ ಮಾಡಿಕೊಂಡಿದೆ. ಗಡಿ ವಿವಾದ ಕುರಿತ ಪುಸ್ತಕ ಬಿಡುಗಡೆ ಮಾಡಲು ಮುಂದಾಗಿದೆ.
ದೇವೇಂದ್ರ ಫಡ್ನವೀಸ್ ಸೇರಿ ಹಲವು ನಾಯಕರು ಭಾಗಿ ಜನವರಿ 27. ಇಂದು ‘ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ; ಸಂಘರ್ಷ ಅನಿ ಸಂಕಲ್ಪ’ ಹೆಸರಿನ ಪುಸ್ತಕ ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು ಮಧ್ಯಾಹ್ನ 12 ಗಂಟೆಗೆ ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಸೇರಿ ಹಲವು ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.
ನ್ಯಾಯಾಂಗ ನಿಂದನೆಯಾಗೋಲ್ವಾ? 1956 ರಿಂದ 2021ರವರೆಗಿನ ಗಡಿವಿವಾದ ಘಟನಾವಳಿಗಳು, ಮಹಾರಾಷ್ಟ್ರದ ನಿಲುವುಗಳ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಸದ್ಯ 2004ರಿಂದಲೂ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಈ ನಡುವೆ ಪುಸ್ತಕ ಬಿಡುಗಡೆ ಮಾಡುತ್ತಿರುವುದು ನ್ಯಾಯಾಂಗ ನಿಂದನೆಯಾಗಲಿದೆ.
ಮೊಂಡ-ಭಂಡ ವಾದಗಳಿರುವ ಸಾಧ್ಯತೆ ಪುಸ್ತಕದಲ್ಲಿ ಮಹಾರಾಷ್ಟ್ರದ ಮೊಂಡ ಮತ್ತು ಭಂಡ ವಾದಗಳಿರುವ ಸಾಧ್ಯತೆ ಇದೆ. ಪುಸ್ತಕದಲ್ಲಿನ ಅಂಶಗಳಿಂದ ಉಭಯ ರಾಜ್ಯಗಳ ಮಧ್ಯೆ ಮತ್ತೆ ಸಂಘರ್ಷದ ಕಿಡಿ ಹೊತ್ತಿಸುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ಹೆಜ್ಜೆ ಇಡಬೇಕು ಅಂತಾ ಕನ್ನಡಪರ ಹೋರಾಟಗಾರರು ಆಗ್ರಹಿಸಿದ್ದಾರೆ.