ಕೊರೊನಾ ಟೈಟ್ ರೂಲ್ಸ್​ನಿಂದ ವರ ಬೇಸರ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಲು ಪರದಾಡುತ್ತಿದೆ ದಿಬ್ಬಣ

ಕರ್ನಾಟಕ ಮಹಾರಾಷ್ಟ್ರ ಗಡಿ ಬಾಚಿ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ತೀವ್ರ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಇಂದು ಖಾನಾಪುರದ ಯುವತಿ ಜೊತೆ ಮಹಾರಾಷ್ಟ್ರದ ಹಳ್ಳಿಯೊಂದರ ಯುವಕನ ವಿವಾಹ ನಿಶ್ಚಯವಾಗಿತ್ತು. ಆದರೆ ಮದುವೆಗೆ ವರ, ವರನ ಸಂಬಂಧಿಕರು ತೆರಳುತ್ತಿದ್ದ ದಿಬ್ಬಣ ವಾಹನಕ್ಕೆ ಅಧಿಕಾರಿಗಳು ತಡೆ ಹಿಡಿದಿದ್ದಾರೆ.

ಕೊರೊನಾ ಟೈಟ್ ರೂಲ್ಸ್​ನಿಂದ ವರ ಬೇಸರ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಲು ಪರದಾಡುತ್ತಿದೆ ದಿಬ್ಬಣ
ಕೊರೊನಾ ಟೈಟ್ ರೂಲ್ಸ್​ನಿಂದ ವರ ಬೇಸರ
Updated By: ಆಯೇಷಾ ಬಾನು

Updated on: Jun 28, 2021 | 12:29 PM

ಬೆಳಗಾವಿ: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿಯಲ್ಲಿ ಹೈ ಅಲರ್ಟ್ ಕೈಗೊಳ್ಳಲಾಗಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ನೆಗೆಟಿವ್ ವರದಿ ಇದ್ದರೆ ಮಾತ್ರ ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗುತ್ತೆ. ಆದರೆ ಮದುವೆಯಾಗಲು ಕರ್ನಾಟಕಕ್ಕೆ ಬರುತ್ತಿದ್ದ ಮಹಾರಾಷ್ಟ್ರದ ವರನಿಗೆ ಟೈಟ್ ರೂಲ್ಸ್ ಎಫೆಕ್ಟ್ ತಟ್ಟಿದೆ.

ಕರ್ನಾಟಕ ಮಹಾರಾಷ್ಟ್ರ ಗಡಿ ಬಾಚಿ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ತೀವ್ರ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಇಂದು ಖಾನಾಪುರದ ಯುವತಿ ಜೊತೆ ಮಹಾರಾಷ್ಟ್ರದ ಹಳ್ಳಿಯೊಂದರ ಯುವಕನ ವಿವಾಹ ನಿಶ್ಚಯವಾಗಿತ್ತು. ಆದರೆ ಮದುವೆಗೆ ವರ, ವರನ ಸಂಬಂಧಿಕರು ತೆರಳುತ್ತಿದ್ದ ದಿಬ್ಬಣ ವಾಹನಕ್ಕೆ ಅಧಿಕಾರಿಗಳು ತಡೆ ಹಿಡಿದಿದ್ದಾರೆ. ಮದುವೆಗೆ ಅನುಮತಿ ಪಡೆದ ಪತ್ರ, ಕೊವಿಡ್ ನೆಗೆಟಿವ್ ವರದಿ ಇಲ್ಲದ ಹಿನ್ನೆಲೆಯಲ್ಲಿ ದಿಬ್ಬಣ ವಾಹನಕ್ಕೆ ಸಿಬ್ಬಂದಿ ಪ್ರವೇಶ ನೀಡಿಲ್ಲ. ಹೀಗಾಗಿ ಕೆಲ ಕಾಲ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನಗಳು ಪರಿದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ಚೆಕ್ ಪೋಸ್ಟ್ನಲ್ಲಿ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಜಿಲ್ಲಾಡಳಿತ ಕೇವಲ ನಾಲ್ಕು ಜನ ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ. ಇಲ್ಲಿಂದ ನಿತ್ಯ ರಾಜ್ಯಕ್ಕೆ ಮಹಾರಾಷ್ಟ್ರದಿಂದ ಸಾವಿರಾರು ವಾಹನಗಳು ಪ್ರವೇಶಿಸುತ್ತವೆ.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಸೂಚಿಸಿದ್ದರು. ಅಥವಾ ಕರ್ನಾಟಕದವರೇ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬಂದರೆ ಆ ಪ್ರಯಾಣಿಕರು ಗಡಿಯಲ್ಲಿರುವ ಚೆಕ್ಪೋಸ್ಟ್ಗಳಲ್ಲಿಯೇ ಅವರ ಮಾದರಿಯನ್ನು ಸಂಗ್ರಹಿಸಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಕಳುಹಿಸಬೇಕು. ವರದಿ ಬಂದ ತಕ್ಷಣವೇ ಆ ವ್ಯಕ್ತಿಗೆ ಮಾಹಿತಿಯನ್ನು ನೀಡಬೇಕು. ನಂತರ ಅವರ ವರದಿಯನ್ನು ಅವರ ವಿಳಾಸಕ್ಕೆ ಕಳಿಸಬೇಕು ಎಂದು ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರತ ಅರೋಗ್ಯ ಇಲಾಖೆಯ ತಂಡಗಳಿಗೆ ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ..