AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುಗಿಲೆದ್ದ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಫಡ್ನವೀಸ್ ಪ್ರಚೋದನೆ ನೀಡುತ್ತಿದ್ದಾರೆ ಎಂದ ಕರ್ನಾಟಕ ಸಿಎಂ ಬೊಮ್ಮಾಯಿ

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದವು ಫಡ್ನವಿಸ್ ಮತ್ತು ಬೊಮ್ಮಾಯಿ ವಿಮುಖರಾಗುವಂತೆ ಮಾಡಿದೆ. ಈ ಮಧ್ಯೆ, ಉಪಮುಖ್ಯಮಂತ್ರಿ ಫಡ್ನವೀಸ್ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಜರಿದಿರುವ ಬೊಮ್ಮಾಯಿ ಮಹಾರಾಷ್ಟ್ರದ ಯಾವುದೇ ಗ್ರಾಮವು ಎಲ್ಲಿಯೂ ಹೋಗುವುದಿಲ್ಲ ಎಂದು ಫಡ್ನವೀಸ್ ಬುಧವಾರ ಭರವಸೆ ನೀಡಿರುವುದು ಉದ್ದಟತನದಿಂದ ಕೂಡಿದೆ ಎಂದಿದ್ದಾರೆ.

ಭುಗಿಲೆದ್ದ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಫಡ್ನವೀಸ್ ಪ್ರಚೋದನೆ ನೀಡುತ್ತಿದ್ದಾರೆ ಎಂದ ಕರ್ನಾಟಕ ಸಿಎಂ ಬೊಮ್ಮಾಯಿ
ಫಡ್ನವೀಸ್ ಪ್ರಚೋದನೆ ನೀಡುತ್ತಿದ್ದಾರೆ, ಯಾವ ಹಳ್ಳಿಯೂ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ ಎಂದ ಕರ್ನಾಟಕ ಸಿಎಂ ಬೊಮ್ಮಾಯಿ
TV9 Web
| Edited By: |

Updated on: Nov 24, 2022 | 12:12 PM

Share

ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ದಶಕಗಳ ಗಡಿ ವಿವಾದವು (Karnataka Maharashtra border issue) ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Maharashtra Deputy Chief Minister Devendra Fadnavis) ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Karnataka chief minister Basavaraj Bommai) ಪರಸ್ಪರ ವಾಗ್ದಾಳಿಯೊಂದಿಗೆ ಮತ್ತೆ ಭುಗಿಲೆದ್ದಿದೆ. ಮಹಾರಾಷ್ಟ್ರದ ಯಾವುದೇ ಗ್ರಾಮವು ಎಲ್ಲಿಯೂ ಹೋಗುವುದಿಲ್ಲ ಎಂದು ಫಡ್ನವೀಸ್ ಬುಧವಾರ ಭರವಸೆ ನೀಡಿದ್ದು, ಇದಕ್ಕೆ ಉತ್ತರಿಸಿದ ಬೊಮ್ಮಾಯಿ ಅವರು ಫಡ್ನವೀಸ್ ಹೇಳಿಕೆಯನ್ನು ಪ್ರಚೋದನಕಾರಿ ಎಂದು ಹೇಳಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದಿಗೂ ನನಸಾಗುವುದಿಲ್ಲ, ದೇಶದ ನೆಲ, ಜಲ, ಗಡಿ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಈ ತಿಂಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿರುವುದರಿಂದ ಮತ್ತೆ ಕೇಂದ್ರಬಿಂದುವಾಗಿದೆ. ವಿಚಾರಣೆಗೆ ಮುಂಚಿತವಾಗಿ, ಉಭಯ ಸರ್ಕಾರಗಳು ಪ್ರಕರಣದ ವಿರುದ್ಧ ಹೋರಾಡಲು ತಮ್ಮ ಕಾನೂನು ತಂಡಗಳನ್ನು ಸಿದ್ಧಪಡಿಸುತ್ತಿವೆ. ಇದೇ ವೇಳೆ ನೀರಿನ ಸಮಸ್ಯೆ ಎದುರಿಸುತ್ತಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕೆಲವು ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳಿಸುವ ನಿರ್ಣಯ ಅಂಗೀಕರಿಸಿರುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಅಂತಹ ಯಾವುದೇ ನಿರ್ಣಯವನ್ನು ಮಾಡಲಾಗಿಲ್ಲ ಮತ್ತು ಬೊಮ್ಮಾಯಿ ಅವರು ಉಲ್ಲೇಖಿಸಿದ ನಿರ್ಣಯವು 2012 ರಲ್ಲಿತ್ತು ಎಂದು ಫಡ್ನವೀಸ್ ಬುಧವಾರ ಸ್ಪಷ್ಟಪಡಿಸಿದ್ದಾರೆ. “ಮಹಾರಾಷ್ಟ್ರದ ಒಂದು ಹಳ್ಳಿಯೂ ಎಲ್ಲಿಯೂ ಹೋಗುವುದಿಲ್ಲ ಎಂದೂ ಫಡ್ನವೀಸ್ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್​ ವೆಬ್​ಸೈಟ್​ ವರದಿ ಮಾಡಿದೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದವೇನು?

ಗಡಿ ವಿವಾದವು ರಾಜ್ಯಗಳ ರಚನೆಯಾದ ಕಾಲದಿಂದಲೂ ಇದೆ. ಗಡಿಯಲ್ಲಿರುವ 865 ಹಳ್ಳಿಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕಿತ್ತು ಎಂದು ಮಹಾರಾಷ್ಟ್ರ ಹೇಳಿಕೊಂಡರೆ, ಕನ್ನಡ ಮಾತನಾಡುವ 260 ಹಳ್ಳಿಗಳು ಕರ್ನಾಟಕಕ್ಕೆ ಎಂದು ಕರ್ನಾಟಕ ಹೇಳುತ್ತಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?