ದಾವಣಗೆರೆ: ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಜಾತ್ರಾ ವಿಶೇಷದ ಅಂಗವಾಗಿ ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಈ ಕುರಿತಂತೆ, ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ವಾಲ್ಮೀಕಿ ಗುರುಪೀಠದಲ್ಲಿ ಇಂದಿನಿಂದ ಜಾತ್ರಾ ವಿಶೇಷ ಭರ್ಜರಿಯಾಗಿ ನಡೆಯಲಿದೆ. 2 ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಲಕ್ಷಕ್ಕೂ ಹೆಚ್ಚುವ ಜನರು ಆಗಮಿಸುತ್ತಾರೆ. ವಿವಿಧ ಭಾಗಗಳಿಂದ ಜನರ ದಂಡೇ ಜಾತ್ರೆಯಲ್ಲಿ ಮರೆದಿರುತ್ತದೆ.
ವಾಲ್ಮೀಕಿ ಸರ್ಕಾರಿ ನೌಕರರ ಸಮಾವೇಶ: ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಉದ್ಘಾಟನೆ
ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿಗಳಿಂದ ಜಾತ್ರಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಾಹಿತಿ ಡಾ. ಮಲ್ಲಿಕಾ ಘಂಟಿ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶ ಹಾಗೂ ವಾಲ್ಮೀಕಿ ಸರ್ಕಾರಿ ನೌಕರರ ಸಮಾವೇಶವನ್ನು ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಉದ್ಘಾಟನೆ ನಡೆಸಿಕೊಡಲಿದ್ದಾರೆ. ಜೊತೆಗೆ, ಸಂಜೆಯ ವೇಳೆ ಹತ್ತು ರಾಜ್ಯದ ವಿವಿಧ ಕಲಾವಿದರಿಂದ ಕಲಾ ಪ್ರದರ್ಶನ ನಡೆಯಲಿದೆ.
ನಿಷೇಧದ ಮಧ್ಯೆಯೂ ಬನಶಂಕರಿ ದೇವಿ ಅದ್ದೂರಿ ಜಾತ್ರಾ ರಥೋತ್ಸವ; ತೇರು ಎಳೆದ ಭಕ್ತರು
Published On - 11:54 am, Mon, 8 February 21