Kukke Subrahmanya temple | ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ ಒಮ್ಮತದ ಒಪ್ಪಿಗೆ

ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ ಸಭೆಯಲ್ಲಿ ಒಮ್ಮತದ ಒಪ್ಪಿಗೆ ಸಿಕ್ಕಿದೆ. ಮುಜರಾಯಿ ಇಲಾಖೆ, ಧಾರ್ಮಿಕ ಪರಿಷತ್ ನೇತೃತ್ವದ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

Kukke Subrahmanya temple | ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ ಒಮ್ಮತದ ಒಪ್ಪಿಗೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ
Follow us
KUSHAL V
|

Updated on: Mar 01, 2021 | 7:03 PM

ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ ಸಭೆಯಲ್ಲಿ ಒಮ್ಮತದ ಒಪ್ಪಿಗೆ ಸಿಕ್ಕಿದೆ. ಮುಜರಾಯಿ ಇಲಾಖೆ, ಧಾರ್ಮಿಕ ಪರಿಷತ್ ನೇತೃತ್ವದ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಅಧ್ಯಕ್ಷ ಕಶೇಕೋಡಿ ಸೂರ್ಯನಾರಾಯಣ ಭಟ್ ಹಾಗೂ ಆಗಮ ಶಾಸ್ತ್ರ ಪಂಡಿತರು, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅರ್ಚಕರು ಭಾಗಿಯಾಗಿದ್ದ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷ ಸೂರ್ಯನಾರಾಯಣ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಹಿತರಕ್ಷಣಾ ಸಮಿತಿ ಪ್ರಮುಖರೂ ಭಾಗಿಯಾಗಿ ಶೈವ ಪದ್ಧತಿಯಂತೆ ಕುಕ್ಕೆಯಲ್ಲಿ ಶಿವರಾತ್ರಿ ಆಚರಣೆಗೆ ಅಗ್ರಹಿಸಿದರು.

ಹಿತರಕ್ಷಣಾ ಸಮಿತಿ ಆಗ್ರಹದಂತೆ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಹಾಗಾಗಿ, ಮಾ.11ರಂದು ಕುಕ್ಕೆಯಲ್ಲಿ ಶಿವರಾತ್ರಿ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಒಮ್ಮತದ ನಿರ್ಧಾರವನ್ನು ಸರ್ಕಾರಕ್ಕೆ ತಿಳಿಸಲು ಸಮ್ಮತಿ ನೀಡಲಾಗಿದೆ. ಇದೀಗ, ರುದ್ರಹೋಮ, ಕಲಶಾರಾಧನೆ, ಮಂಡಲಾರಧನೆ ಹಾಗೂ ಬಿಲ್ವಾರ್ಚನೆ ಮೂಲದ ವೈಭವದ ಶಿವರಾತ್ರಿ ಆಚರಣೆಗೆ ಕುಕ್ಕೆ ಸುಬ್ರಹ್ಮಣ್ಯ ಸಾಕ್ಷಿಯಾಗಲಿದೆ. ರಾತ್ರಿ 12ರವರೆಗೆ ಕುಕ್ಕೆಯಲ್ಲಿ ಜಾಗರಣೆ ಸಹ ನಡೆಯಲಿದೆ.

ಸಂಪ್ರದಾಯ ಬದಲಿಸಬೇಡಿ ಎಂದು ಉಡುಪಿಯ ಸನಾತನ ಸಂಪ್ರದಾಯ ಸಂರಕ್ಷಣಾ ಸಮಿತಿ ವಿರೋಧ ಮಾಡಿತ್ತು. ಶಿವರಾತ್ರಿ ಆಚರಣೆಗೆ ವಿರೋಧ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆಯಂತೆ ಸಭೆ ನಡೆದಿತ್ತು.

‘ಸೌಹಾರ್ದಯುತವಾಗಿ ಸಮಸ್ಯೆಗೆ ಪರಿಹಾರ ಸಿಕ್ಕಿದೆ’ ಕುಕ್ಕೆಯಲ್ಲಿ ವೈಭವದ ಶಿವರಾತ್ರಿ ಆಚರಣೆಗೆ ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ ಕುಕ್ಕೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷ ಕಶೇಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿದರು. ಸರ್ಕಾರದ ಪರವಾಗಿ ನಾವು ಇಲ್ಲಿ ಬಂದು ಸಭೆ ನಡೆಸಿದ್ದೇವೆ. ಸೌಹಾರ್ದಯುತವಾಗಿ ಸಮಸ್ಯೆಗೆ ಪರಿಹಾರ ಮಾಡಲಾಗಿದೆ. ಕ್ಷೇತ್ರದ ಸಂಪ್ರದಾಯಗಳಿಗೆ ಅಪಚಾರ ಆಗದಂತೆ ಉತ್ಸವ ನಡೆಸಲಾಗುವುದು ಎಂದು ಹೇಳಿದರು.

ಸಂಪ್ರದಾಯಕ್ಕೆ ಅಪಚಾರ ಆಗದಂತೆ ಶಿವರಾತ್ರಿ ಉತ್ಸವ ಜರುಗಲಿದೆ. ನಮ್ಮ ನಿರ್ಧಾರ ಸರ್ಕಾರಕ್ಕೆ ಕೊಟ್ಟು 2 ದಿನದಲ್ಲಿ ಆದೇಶ ನೀಡಲಾಗುವುದು. ಎರಡು ದಿನಗಳಲ್ಲಿ ಸರ್ಕಾರ ಆದೇಶವನ್ನು ಮಾಡಲಿದೆ ಎಂದು ಕಶೇಕೋಡಿ ಸೂರ್ಯನಾರಾಯಣ ಭಟ್ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಮತ್ತೆ ವಿವಾದದಲ್ಲಿ ಕುಕ್ಕೆ ಸುಬ್ರಮಣ್ಯ: ಶಿವರಾತ್ರಿ ಮಹೋತ್ಸವಕ್ಕೆ ಎರಡು ಸಂಪ್ರದಾಯಗಳ ನಡುವೆ ಕಿತ್ತಾಟ