AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರಾಬಾಯಿ ಕೊಪ್ಪಿಕರ್ ಹಾಗೂ ಸಿದ್ದಗಂಗಾ ಶಿಕ್ಷಣ ಸಂಸ್ಥೆಗೆ ಎರಡು ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ ಪುರಸ್ಕೃತರಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ.

ಮೀರಾಬಾಯಿ ಕೊಪ್ಪಿಕರ್ ಹಾಗೂ ಸಿದ್ದಗಂಗಾ ಶಿಕ್ಷಣ ಸಂಸ್ಥೆಗೆ ಎರಡು ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ
ಮಹಾತ್ಮ ಗಾಂಧಿ
TV9 Web
| Updated By: ganapathi bhat|

Updated on:Sep 29, 2021 | 4:54 PM

Share

ಬೆಂಗಳೂರು: ಮೀರಾಬಾಯಿ ಕೊಪ್ಪಿಕರ್‌ ಹಾಗೂ ಸಿದ್ದಗಂಗಾ ಶಿಕ್ಷಣ ಸಂಸ್ಥೆ, ಮಠಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಘೋಷಣೆಯಾಗಿದೆ. 2020 ನೇ ಸಾಲಿಗೆ ಮೀರಾಬಾಯಿ ಕೊಪ್ಪಿಕರ್‌ಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರಾದ ಮೀರಾಬಾಯಿ ಕೊಪ್ಪಿಕರ್​ಗೆ 2020ನೇ ಸಾಲಿನ ಪ್ರಶಸ್ತಿ ಲಭಿಸಲಿದೆ. ಹಾಗೂ 2021ನೇ ಸಾಲಿಗೆ ಸಿದ್ದಗಂಗಾ ಶಿಕ್ಷಣ ಸಂಸ್ಥೆ, ಮಠಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಘೋಷಣೆ ಆಗಿದೆ. ಕೊರೊನಾ ಹಿನ್ನೆಲೆ ಕಳೆದ ವರ್ಷ ಪ್ರಶಸ್ತಿಯನ್ನು ನೀಡಿರಲಿಲ್ಲ. ಹೀಗಾಗಿ ಈ ಬಾರಿ ಎರಡು ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ ಪುರಸ್ಕೃತರಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ.

ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅಶೋಕ್ ಬಂಗಾರಪ್ಪ ಹಿಂಚಿಗೇರಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಆಯ್ಕೆ ಸಮಿತಿಯು 2020ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಮೀರಾಬಾಯಿ ಕೊಪ್ಪಿಕರ್ ಹಾಗೂ 2021 ನೇ ಸಾಲಿಗೆ ಶ್ರೀ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಸಿದ್ದಗಂಗಾ ಮಠ ನಡೆದಾಡುವ ದೇವರು ಎಂದೇ ಜನರಿಂದ ಕರೆಸಿಕೊಂಡಿದ್ದ ಡಾ. ಶಿವಕುಮಾರ ಸ್ವಾಮೀಜಿ ಆಶಯದಂತೆ ಸುಮಾರು 80 ವರ್ಷಗಳಿಂದ ಅನ್ನ, ವಸತಿ, ಅಕ್ಷರ ದಾಸೋಹವನ್ನು ಜಾತಿ ಬೇಧವಿಲ್ಲದೇ ನಡೆಸುತ್ತಿರುವ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಹಾಗೂ ಸಿದ್ದಗಂಗಾ ಮಠಕ್ಕೆ ಈ ಪ್ರಶಸ್ತಿ ಘೋಷಣೆ ಆಗಿದೆ.

ಮೀರಾಬಾಯಿ ಕೊಪ್ಪಿಕರ್ ಗಾಂಧಿವಾದಿ, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ, 96 ವರ್ಷದ ಮೀರಾಬಾಯಿ ಕೊಪ್ಪಿಕರ್ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ಅವರು ಸದ್ಯ ಮುಧೋಳದಲ್ಲಿನ ವಾತ್ಸಲ್ಯ ಧಾಮದಲ್ಲಿ ವಾಸವಾಗಿದ್ದಾರೆ. ಮೀರಾಬಾಯಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಸಬರಮತಿ ಆಶ್ರಮದಲ್ಲಿ ಕೂಡ ಇದ್ದರು. ವಿನೋಬಾ ಭಾವೆ ಜೊತೆಗೂಡಿ ಭೂದಾನ ಚಳುವಳಿಯಲ್ಲಿಯೂ ಪಾಲ್ಗೊಂಡಿದ್ದರು. ಕರ್ನಾಟಕದಿಂದ ಒಟ್ಟು 40 ಸಾವಿರ ಎಕರೆ ಭೂಮಿ ದಾನ ಮಾಡುವಲ್ಲಿ ಯಶಸ್ವಿಯಾಗಿದ್ದರು. 2008 ರಲ್ಲಿ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಇದನ್ನೂ ಓದಿ: Mahatma Gandhi: ಮಹಾತ್ಮ ಗಾಂಧಿಗೆ ಅಮೆರಿಕದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲು ನಿರ್ಣಯ ಮಂಡನೆ

ಇದನ್ನೂ ಓದಿ: ಉಡುಪಿ: ಕುಗ್ರಾಮದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿಯ ಗರಿ

Published On - 4:44 pm, Wed, 29 September 21