AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಲ್ ಸಂತೋಷ್ ಕುರಿತು ಅವಹೇಳನ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ್ದಾರೆ. ಪೊಲೀಸರ ನೋಟಿಸ್‌ಗೆ ಸೂಕ್ತ ಉತ್ತರ ನೀಡದ ಕಾರಣ ಅವರನ್ನು ವಶಕ್ಕೆ ಪಡೆದು ನಂತರ ಬಂಧಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ vs ಬಿಎಲ್ ಸಂತೋಷ್ ಪ್ರಕರಣದ ಮಾಹಿತಿ ಇಲ್ಲಿದೆ.

ಬಿಎಲ್ ಸಂತೋಷ್ ಕುರಿತು ಅವಹೇಳನ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಬಂಧನ
ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸರ ವಶಕ್ಕೆ
Ganapathi Sharma
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 21, 2025 | 1:34 PM

Share

ಬೆಂಗಳೂರು, ಆಗಸ್ಟ್ 21: ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Timarodi) ಗುರುವಾರ ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಹೇಶ್ ಶೆಟ್ಟಿಯನ್ನು ಉಜಿರೆಯ ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದು ಉಡುಪಿಯತ್ತ ಕರೆದೊಯ್ದಿದ್ದಾರೆ. ಜತೆಗೆ ತಿಮರೋಡಿ ಅವರ ವಕೀಲರು ಹಾಗೂ ಬೆಂಬಲಿಗರು ಕೂಡ ಉಡುಪಿಯತ್ತ ತೆರಳಿದ್ದಾರೆ. ನಂತರ ಉಡುಪಿಯಲ್ಲಿ ತಿಮರೋಡಿಯನ್ನು ಬಂಧಿಸಲಾಗಿದೆ.

ಇದಕ್ಕೂ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿರುವುದನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಖಚಿತಪಡಿಸಿದ್ದರು. ತಿಮರೋಡಿಗೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು. ಅದಕ್ಕೆ ಸರಿಯಾದ ಉತ್ತರ ನೀಡದೇ ಇರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹರಿರಾಮ್ ಶಂಕರ್ ತಿಳಿಸಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಮನೆ ಮುಂದೆ ಹೈಡ್ರಾಮಾ

ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯುವುದಕ್ಕಾಗಿ ಬ್ರಹ್ಮಾವರ ಪೊಲೀಸರು ಗುರುವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದರು. ಇದೇ ವೇಳೆ ತಿಮರೋಡಿ ವಕೀಲರು ಹಾಗೂ ಬೆಂಬಲಿಗರು ಅವರ ಮನೆ ಮುಂದೆ ಜಮಾಯಿಸಿದ್ದಾರೆ. ಈ ಸಂದರ್ಭದಲ್ಲಿ, ತಿಮರೋಡಿ ಬೆಂಬಲಿಗರು, ವಕೀಲರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.

ಇದನ್ನೂ ಓದಿ
Image
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
Image
ಧರ್ಮಸ್ಥಳ ಪ್ರಕರಣದ ಬಗ್ಗೆ ವಿರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
Image
ಧರ್ಮಸ್ಥಳ ಕೇಸ್​: ಅನಾಮಿಕ ಮಾಸ್ಕ್ ಮ್ಯಾನ್ ತಮಿಳುನಾಡಿನವ ಎಂದ ರೆಡ್ಡಿ
Image
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ

ನಂತರ ಪೊಲೀಸರು ವಶಕ್ಕೆ ಪಡೆದುಕೊಂಡು ತೆರಳುವಾಗ ರೋಷಾವೇಶದಿಂದ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ, ‘ನನ್ನ ಜೀವಕ್ಕೆ ಏನಾದರೂ ಆದರೆ ಸರ್ಕಾರವೇ ಕಾರಣ. ಏನಾದರೂ ಆದರೆ ಬಿಜೆಪಿ ಅವರೇ ಕಾರಣ’ ಎಂದರು.

ಏನಿದು ಮಹೇಶ್ ಶೆಟ್ಟಿ ತಿಮರೋಡಿ ಪ್ರಕರಣ?

ಧರ್ಮಸ್ಥಳ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅನೇಕ ಹೇಳಿಕೆಗಳನ್ನು ನೀಡಿದ್ದಾರೆ. ಹಲವಾರು ಮಂದಿಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಅವರ ಮೇಲಿದೆ. ಅದೇ ರೀತಿ, ಬಿಎಲ್ ಸಂತೋಷ್ ವಿರುದ್ಧವೂ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂಬ ಆರೋಪವಿದೆ. ಈ ಬಗ್ಗೆ ಉಡುಪಿಯ ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ವಿಚಾರಣೆಗೆ ಹಾಜರಾಗುವಂತೆ ತಿಮರೋಡಿಗೆ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು.

ವಿಡಿಯೋ ನೋಡಿ: ಮಹೇಶ್ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು, ಬೆಂಬಲಿಗರಿಂದ ಜೈಕಾರ ಮತ್ತು ಘೋಷಣೆಗಳು

ತಿಮರೋಡಿಗೆ 2 ಬಾರಿ ಪೊಲೀಸರು ನೋಟಿಸ್​ ಕೊಟ್ಟಿದ್ದರು. ಕೊನೆಯದಾದಗಿ ಬುಧವಾರ ನೋಟಿಸ್ ನೀಡಲಾಗಿತ್ತು. ಗುರುವಾರ ಬೆಳಗ್ಗೆ 9 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದರೆ, ಆ ನೋಟಿಸ್​​ಗೆ, ‘15 ದಿನಗೊಳಗೆ ಹಾಜರಾಗುತ್ತೇನೆ’ ಎಂದು ತಿಮರೋಡಿ ಉತ್ತರಿಸಿದ್ದರು. ಪೊಲೀಸರು ಕೊಟ್ಟ ನೋಟಿಸ್​​ನಲ್ಲೇ ಉತ್ತರಿಸಿ ಸಹಿ ಮಾಡಿದ್ದರು. ಈ ಬೆಳವಣಿಗೆ ನಂತರ ಪೊಲೀಸರು ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ.  ನಂತರ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಇದೀಗ ಬಂಧಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Thu, 21 August 25