ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮರಣ ಹೊಂದಿರುವ ದುರ್ಘಟನೆ ಮಲ್ಲಸಂದ್ರ ರೈಲ್ವೆ ನಿಲ್ದಾಣದ ಬಳಿ ಸಂಭವಿಸಿದೆ.
ಮೃತ ವ್ಯಕ್ತಿ ಸುಮಾರು 35 ವರ್ಷದವರು ಎಂದು ತಿಳಿದು ಬಂದಿದ್ದು, ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದೆ. ತುಮಕೂರು ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.