AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡ್ತೇವೆ: ಸಚಿವ ವಿ ಸೋಮಣ್ಣ

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣನವರು ಮೆಜೆಸ್ಟಿಕ್ ರೈಲು ನಿಲ್ದಾಣವನ್ನು 1500 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯು ವಿಮಾನ ನಿಲ್ದಾಣದಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡ್ತೇವೆ: ಸಚಿವ ವಿ ಸೋಮಣ್ಣ
ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡ್ತೇವೆ: ಸಚಿವ ವಿ ಸೋಮಣ್ಣ
Anil Kalkere
| Edited By: |

Updated on:Nov 18, 2024 | 2:03 PM

Share

ಬೆಂಗಳೂರು, ನವೆಂಬರ್​ 18: ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ (Minister V Somanna) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಒಳ್ಳೆಯ ಕೆಲಸಗಳಿಗೆ ಪ್ರಧಾನಿ ಮೋದಿ ಬೇಡ ಎನ್ನುವುದಿಲ್ಲ

ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿ ಮುಂದೆ ಇಡುತ್ತೇವೆ. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ ಚರ್ಚಿಸಿ ಕೆಲಸ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಸೋಮಣ್ಣ ಮುಖಾಮುಖಿ: ಮುಡಾ ಬಗ್ಗೆ ನಡೀತು ಸ್ವಾರಸ್ಯಕರ ಚರ್ಚೆ! ವಿಡಿಯೋ ಇಲ್ಲಿದೆ

ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ಏರ್​ಪೋರ್ಟ್​ಗಿಂತ ವಿಭಿನ್ನವಾಗಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಏರ್​ಪೋರ್ಟ್​ನಲ್ಲಿ ಸಿಗುವ ಎಲ್ಲಾ ಸವಲತ್ತುಗಳು ಸಿಗಲಿದೆ. 160 ಎಕರೆ ಜಾಗ ಇದೆ. ನಿರೋದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಶಾಸಕ ರವಿ ಗಣಿಗ ಆರೋಪಕ್ಕೆ ವಿ.ಸೋಮಣ್ಣ ಕಿಡಿ

ಶಾಸಕ ರವಿ ಗಣಿಗ ಬಿಜೆಪಿಯಿಂದ ಕಾಂಗ್ರೆಸ್​ ಶಾಸಕರಿಗೆ 100 ಕೋಟಿ ರೂ. ಆಫರ್ ಆರೋಪ ವಿಚಾರವಾಗಿ ಮಾತನಾಡಿದ ಅವರು, ರವಿ ಗಣಿಗ ಶಾಸಕರಾಗಿ ಉತ್ತಮ ಕೆಲಸ ಮಾಡಲಿ. ಹೀಗೆ ಆರೋಪ ಮಾಡೋದು ಅವರ ಗೌರವಕ್ಕೆ ತಕ್ಕುದಾದುದಲ್ಲ ಎಂದಿದ್ದಾರೆ. 40% ಆರೋಪ ಮಾಡಿದ್ರಲ್ವಾ, ಅದೇ ರೀತಿಯ ಆರೋಪ ಇದು ಎಂದರು.

ಇದನ್ನೂ ಓದಿ: ಕೇವಲ ಕುಮಾರಸ್ವಾಮಿ ಹೇಳುವುದನ್ನೇ ಯಾಕೆ ಬರೆಯುತ್ತೀರಿ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಪಿಎಲ್ ಕಾರ್ಡ್ ರದ್ದು ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಈ‌ ತರದ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಮಾಡಬಾರದು ಎಂದು ಹೇಳಿದ್ದಾರೆ. ಕೋವಿಡ್ ಹಗರಣ ತನಿಖೆ ವಿಚಾರವಾಗಿ ಮಾತನಾಡಿ, ಉಪ್ಪು ತಿಂದವರು ನೀರು ಕುಡಿತ್ತಾರೆ. ತನಿಖೆ ಮಾಡಲಿ ಬಿಡಿ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:54 pm, Mon, 18 November 24