AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ವರ್ಗಾವಣೆಯಲ್ಲಿ ಮಹತ್ತರ ಬದಲಾವಣೆ: ಮುಂಬಡ್ತಿ ಪಡೆದು ವರ್ಗಾವಣೆಯಾದ ಅಧಿಕಾರಿಗಳಿಗೆ ಹಲವು ನಿಯಮ

ಕರ್ನಾಟಕದಲ್ಲಿ ಪೊಲೀಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪರ್ವ ಶುರುವಾಗಿದೆ. 25 ಮಂದಿ ಐಪಿಎಸ್ ಅಧಿಕಾರಿಗಳನ್ನು ಮಂಗಳವಾರ ರಾತ್ರಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮುಂಬಡ್ತಿ ಪಡೆದು ವರ್ಗಾವಣೆಯಾಗುವ ಪೊಲೀಸ್ ಅಧಿಕಾರಿಗಳಿಗೆ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ ಇಲ್ಲಿದೆ ಮಾಹಿತಿ.

ಪೊಲೀಸ್ ವರ್ಗಾವಣೆಯಲ್ಲಿ ಮಹತ್ತರ ಬದಲಾವಣೆ: ಮುಂಬಡ್ತಿ ಪಡೆದು ವರ್ಗಾವಣೆಯಾದ ಅಧಿಕಾರಿಗಳಿಗೆ ಹಲವು ನಿಯಮ
ಪೊಲೀಸ್ ವರ್ಗಾವಣೆಯಲ್ಲಿ ಮಹತ್ತರ ಬದಲಾವಣೆ
ಜಗದೀಶ ಬಿ.
| Edited By: |

Updated on: Jul 04, 2024 | 10:48 AM

Share

ಬೆಂಗಳೂರು, ಜುಲೈ 4: ಕರ್ನಾಟಕ ಪೊಲೀಸ್ ವರ್ಗಾವಣೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದ್ದು, ಮುಂಬಡ್ತಿ ಪಡೆದು ವರ್ಗಾವಣೆಯಾದ ಅಧಿಕಾರಿಗಳಿಗೆ ಹಲವು ನಿಯಮಗಳನ್ನು ಅನುಸರಿಸುವಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಆದೇಶಿಸಿದ್ದಾರೆ. ಇದರಿಂದಾಗಿ ಇನ್ನು ಮುಂದೆ ಪ್ರಮೋಷನ್ ಪಡೆದ ಅಧಿಕಾರಿಗಳು ಪುನರ್ ಮನನ ತರಬೇತಿಗೆ ಹಾಜರಾಗುವುದು ಕಡ್ಡಾಯವಾಗಿದೆ.

ಒಂದು ತಿಂಗಳ ಕಾಲ ಈ ತರಬೇತಿ ಇರಲಿದೆ. ರಾಜ್ಯದ ಪೊಲೀಸ್ ತರಬೇತಿ ಘಟಕಗಳಲ್ಲಿ ತರಬೇತಿ ನೀಡಲಾಗುತ್ತದೆ. ಬಡ್ತಿ ಪಡೆದ ಎರಡು ವರ್ಷಗಳ ಅಂತರದಲ್ಲಿ ಈ ತರಬೇತಿ ಕಡ್ಡಾಯಗೊಳಿಸಲಾಗಿದೆ.

ಇನ್ನು ಮುಂದೆ ಕಮಿಷನರೇಟ್ ವ್ಯಾಪ್ತಿಯಲ್ಲಿ 10 ವರ್ಷಗಳಷ್ಟೇ ಕೆಲಸ ಮಾಡಲು ಅವಕಾಶವಿದೆ. ಡಿವೈಎಸ್​​ಪಿ ಹಾಗೂ ಇನ್ಸ್​​ಪೆಕ್ಟರ್ ಹಂತದ ಅಧಿಕಾರಿಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ. ಅಧಿಕಾರಿಗಳ ಮೇಲೆ ಇಲಾಖಾ ತನಿಖಾ ಪ್ರಕರಣಗಳಿದ್ದರೆ ಮುಂಬಡ್ತಿ ನೀಡಲಾಗುವುದಿಲ್ಲ. ಒಮ್ಮೆ ಐದು ವರ್ಷ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೆಲಸ ಮಾಡಿದರೆ ಉಳಿದ ಐದು ವರ್ಷ ಕೂಲಿಂಗ್ ಅವಧಿ (ಇತರೆ ಸೇವೆ) ಮಾಡಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಂಗಳವಾರ ರಾತ್ರಿಯಷ್ಟೇ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡಲಾಗಿದ್ದು, 25 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತೆಯಾಗಿದ್ದ ಐಪಿಎಸ್​ ಅಧಿಕಾರಿ ರೇಣುಕಾ ಸುಕುಮಾರ್​ ಸೇರಿದಂತೆ 25 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ: ಸರಣಿ ಕೊಲೆ, ಸಾರ್ವಜನಿಕರ ಒತ್ತಡ: ಹು-ಧಾ ಕಮಿಷನರ್​ ಸೇರಿದಂತೆ 25 ಐಪಿಎಸ್​ ಅಧಿಕಾರಿಗಳ ವರ್ಗ

ಹುಬ್ಬಳ್ಳಿ ಧಾರವಾಡ ಸೇರಿದಂತೆ ಕೆಲವು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ಮತ್ತು ಹೆಚ್ಚಿನ ಅಪರಾಧ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿತ್ತು. ಇದೀಗ, ಐಪಿಎಸ್​ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಹೊಸ ಆದೇಶ ಹೊರಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ