ವಾಲ್ಮೀಕಿ ಹಗರಣ ಕೇಸ್​ನಲ್ಲಿ ಮಹತ್ವದ ಬೆಳವಣಿಗೆ: ಪ್ರಮುಖ ಆರೋಪಿಯನ್ನು ಇಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶ

ವಾಲ್ಮೀಕಿ ನಿಗಮದ ಹಗರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ವಿಚಾರ. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾನನ್ನು ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್​ಗೆ ಆದೇಶ‌ ಹೊರಡಿಸಿದೆ. ಇತ್ತೀಚೆಗೆ ಕಸ್ಟಡಿಗೆ ಕೋರಿ ಜಾರಿ ನಿರ್ದೇಶನಾಲಯ ರಿಟ್ ಅರ್ಜಿ ಸಲ್ಲಿಸಿತ್ತು.

ವಾಲ್ಮೀಕಿ ಹಗರಣ ಕೇಸ್​ನಲ್ಲಿ ಮಹತ್ವದ ಬೆಳವಣಿಗೆ: ಪ್ರಮುಖ ಆರೋಪಿಯನ್ನು ಇಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶ
ವಾಲ್ಮೀಕಿ ಹಗರಣ ಕೇಸ್​ನಲ್ಲಿ ಮಹತ್ವದ ಬೆಳವಣಿಗೆ: ಪ್ರಮುಖ ಆರೋಪಿಯನ್ನು ಇಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Aug 09, 2024 | 7:18 PM

ಬೆಂಗಳೂರು, ಆಗಸ್ಟ್ 09: ವಾಲ್ಮೀಕಿ ನಿಗಮದ ಹಗರಣದಲ್ಲಿ (valmiki corporation Scam) ಹೈದರಾಬಾದ್​ ಮೂಲದ ಆರೋಪಿ ಸತ್ಯನಾರಾಯಣ ವರ್ಮಾ (Satyanarayana varma) ನನ್ನು ಕಸ್ಟಡಿಗೆ ಕೋರಿ ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ ಆದೇಶ‌ ಹೊರಡಿಸಲಾಗಿದೆ. ಇ.ಡಿ ಕಸ್ಟಡಿಗೆ ನೀಡುವಂತೆ ಸೆಷನ್ಸ್ ಕೋರ್ಟ್ ಆದೇಶವಿದ್ದರೂ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಹೀಗಾಗಿ ಪೊಲೀಸರ ಕ್ರಮಕ್ಕೆ ಇ.ಡಿ ಪರ ಎಸ್‌ಪಿಪಿ ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

ಇ.ಡಿ ತನಿಖೆ ತಪ್ಪಿಸಲು ಪೊಲೀಸರು ತಂತ್ರ ಹೂಡಿದಂತಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ. ಆಗಸ್ಟ್ 12ಕ್ಕೆ ಪೊಲೀಸ್ ಕಸ್ಟಡಿ ಮುಕ್ತಾಯಗೊಳ್ಳಲಿದ್ದು, ಆಗಸ್ಟ್ 13 ರಂದು ಜಾರಿ ನಿರ್ದೇಶನಾಲಯ ಕಸ್ಟಡಿಗೆ ನೀಡುವಂತೆ ಆದೇಶಿಸಲಾಗಿದೆ.

ಇದನ್ನೂ ಓದಿ: ಸಿಎಂ ವಿರುದ್ಧದ ಮುಡಾ ಪ್ರಕರಣದ ಆದೇಶ ಕಾಯ್ದಿರಿಸಿದ ಕೋರ್ಟ್: ವಾದ-ಪ್ರತಿವಾದ ಹೇಗಿತ್ತು? ಇಲ್ಲಿದೆ ನೋಡಿ

ಹೈದರಾಬಾದ್​ ಮೂಲದ ಸತ್ಯನಾರಾಯಣ ನನ್ನು ಎಸ್​ಐಟಿ ಅಧಿಕಾರಿಗಳು ಸದ್ಯ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಈ ಹಗರಣದ ಆರೋಪಿಯಾಗಿರುವ ಸತ್ಯನಾರಾಯಣ ನಿಗಮದಲ್ಲಿ ದೋಚಿದ್ದ ಹಣದಲ್ಲೇ ಕೋಟಿ ಕೋಟಿ ರೂ. ಬೆಲೆ ಬಾಳುವ ಸೆಕೆಂಡ್​ ಹ್ಯಾಂಡ್​ ಲ್ಯಾಂಬೋರ್ಗಿನಿ ಮತ್ತು ಬೆಂಜ್ ಕಾರು ಖರೀದಿಸಿದ ಬಗ್ಗೆ ಎಸ್​​ಐಟಿ ಅಧಿಕಾರಿಗಳು ಪತ್ತೆಹಚ್ಚಿದ್ದರು. ಬಳಿಕ ಆ ಕಾರುಗಳನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಿ ಕೋಟ್ಯಾಂತರ ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು.

ಇದನ್ನೂ ಓದಿ: ಯತ್ನಾಳ್ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಿಲ್ಲ: ಬಹಿರಂಗವಾಗಿಯೇ ಅಸಹಾಯಕತೆ ಹೊರಹಾಕಿದ ಅಶೋಕ್

ಹಗರಣದಲ್ಲಿ ಸತ್ಯನಾರಾಯಣ್ ವರ್ಮಾ 13ನೇ ಆರೋಪಿಯಾಗಿದ್ದಾರೆ. ಇತ್ತೀಚೆಗೆ​ ಸಿಐಡಿ ವಿರುದ್ಧ ಹಲವಾರು ಆರೋಪ ಮಾಡಿದ್ದರು. ಸಿಐಡಿ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ ಮತ್ತು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಬಂಧನದ ನಂತರ ನಾಲ್ಕು ದಿನಗಳವರೆಗೆ ಅಧಿಕಾರಿಗಳು ನನ್ನ ಕುಟುಂಬಕ್ಕೆ ಮಾಹಿತಿ ನೀಡಲಿಲ್ಲ ಎಂದು ಸತ್ಯನಾರಾಯಣ್ ವರ್ಮಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:57 pm, Fri, 9 August 24