ಇಳಕಲ್​ನಲ್ಲಿ ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್

| Updated By: Digi Tech Desk

Updated on: Feb 08, 2021 | 9:01 AM

ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಶಾಪಿಂಗ್ ಸೆಂಟರ್ ಹೊತ್ತಿ ಉರಿದ ಪ್ರಕರಣ ವರದಿಯಾಗಿದೆ. ನಗರದ ಬಸವೇಶ್ವರ ವೃತ್ತದ ಬಳಿ ಇರುವ ಸಜ್ಜನ್ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಇಳಕಲ್​ನಲ್ಲಿ ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್
ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್
Follow us on

ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಶಾಪಿಂಗ್ ಸೆಂಟರ್ ಹೊತ್ತಿ ಉರಿದ ಪ್ರಕರಣ ವರದಿಯಾಗಿದೆ. ನಗರದ ಬಸವೇಶ್ವರ ವೃತ್ತದ ಬಳಿ ಇರುವ ಸಜ್ಜನ್ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮೋರ್ ಸೂಪರ್​ ಮಾರ್ಕೆಟ್, ಹಾರ್ಡ್‌ವೇರ್ ಅಂಗಡಿ, ಕೇಕ್ ಬೇಕರಿ, ಸರೋದ್​ ಇಳಕಲ್ ಸೀರೆ ಅಂಗಡಿ , ಪೀಟರ್ ಇಂಗ್ಲೆಂಡ್ ಬಟ್ಟೆ ಮಳಿಗೆ ಸೇರಿದಂತೆ ಅನೇಕ ಅಂಗಡಿಗಳು ಶಾಪಿಂಗ್​ ಮಾಲ್​ನಲ್ಲಿ ಇದೆ. ಹಾರ್ಡವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.

ಇನ್ನು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿಕೊಟ್ಟು ಬೆಂಕಿ‌ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇತ್ತ, ನಿಯಂತ್ರಣಕ್ಕೆ ಸಿಗದೆ ಉರಿಯುತ್ತಿರುವ ಬೆಂಕಿಯ ಪರಿ ನೋಡಿ ಸಾರ್ವಜನಿಕರು ಹೈರಾಣಾಗಿದ್ದಾರೆ.

ಮರಕ್ಕೆ ಕಾರು ಡಿಕ್ಕಿ: ತಾಯಿ, ಮಗಳು ಸ್ಥಳದಲ್ಲೇ ಸಾವು, ಯಾವೂರಲ್ಲಿ?

Published On - 11:45 pm, Sun, 7 February 21