ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಮಳೆ (Karnataka Rain) ತಡವಾಗಿ ಆಗಮಿಸಿದೆ. ಅದರಲ್ಲೂ ಹಲವೆಡೆ ವಾಡಿಕೆಯಷ್ಟು ಮಳೆಯಾಗಿಲ್ಲ. ಕೆಆರ್ಎಸ್ ಡ್ಯಾಂ ಖಾಲಿ ಖಾಲಿಯಾಗಿದ್ದು ಶ್ರೀರಂಗಪಟ್ಟಣದಲ್ಲಿ ಧಾರ್ಮಿಕ ಕಾರ್ಯಾಚರಣೆಗಳನ್ನು ನೆರವೇರಿಸಿ ನದಿಯಲ್ಲಿ ಮುಳುಗಲಾಗದೆ ಚಂಬಿನಿಂದ ತಲೆ ಮೇಲೆ ನೀರು ಹಾಕಿಕೊಂಡು ಜನ ತೆರಳುವಂತಹ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಕೆಲ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದು ಮತ್ತೆ ಕೆಲವು ಖಾಲಿಯಾಗಿವೆ. ಇದರೊಂದಿಗೆ ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬುವುದನ್ನು ನೋಡೋಣ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 28.76 | 87.23 | 21672 | 561 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 11.77 | 98.26 | 9849 | 285 |
ಮಲಪ್ರಭಾ ಜಲಾಶಯ (Malaprabha Dam) | 633.8 | 37.73 | 7.17 | 22.81 | 3851 | 194 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 26.59 | 87.57 | 20792 | 1734 |
ಕಬಿನಿ ಜಲಾಶಯ (Kabini Dam) | 696.13 | 19.52 | 12.16 | 18.51 | 3293 | 800 |
ಭದ್ರಾ ಜಲಾಶಯ (Bhadra Dam) | 657.73 | 71.54 | 27.99 | 66.74 | 1518 | 164 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51 | 9.28 | 31.97 | 13753 | 96 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 16.47 | 35.33 | 2189 | 200 |
ವರಾಹಿ ಜಲಾಶಯ (Varahi Dam) | 594.36 | 31.10 | 5.35 | 13.44 | 4144 | 220 |
ಹಾರಂಗಿ ಜಲಾಶಯ (Harangi Dam) | 871.38 | 8.50 | 5.34 | 7.05 | 4383 | 50 |
ಸೂಫಾ (Supa Dam) | 564.33 | 145.33 | 38.05 | 63.47 | 28318 | 572 |
ಇನ್ನು ಮಹಾರಾಷ್ಟ್ರದ ಪಶ್ಚಿಮ ಘಟ್ಟಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಕೊಲ್ಹಾಪುರದ ಪಂಚಗಂಗಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಕೃಷ್ಣಾ ನದಿಯ ಉಪನದಿ ಪಂಚಗಂಗಾದಲ್ಲಿ ಒಳಹರಿವು ದಿಢೀರ್ ಏರಿಕೆಯಾಗಿದೆ. ಕಳೆದ 2-3 ದಿನಗಳಿಂದ ಕೊಲ್ಹಾಪುರ ಜಿಲ್ಲೆಯಲ್ಲಿ ಭಾರಿ ಮಳೆಗೆ ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆಗಳು ಮುಳುಗಡೆಯಾಗಿವೆ. ಸುಮಾರು 25ಕ್ಕೂ ಹೆಚ್ಚು ಕೆಳಹಂತದ ಸೇತುವೆಗಳು ಜಲಾವೃತಗೊಂಡಿದ್ದು ಮಳೆ ಮುಂದುವರಿದರೆ ಕೊಲ್ಹಾಪುರ ನಗರಕ್ಕೆ ನದಿ ನೀರು ನುಗ್ಗುವ ಭೀತಿ ಎದುರಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ