Karnataka Dam Water Level: ಜು.21ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ 21ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಮ್ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಜು.21ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಘಟಪ್ರಭಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Jul 21, 2023 | 7:24 AM

ಈ ವರ್ಷ ಕರ್ನಾಟಕದಲ್ಲಿ ಮಳೆ (Karnataka Rain) ಮತ್ತೆ ಚುರುಕಾಗಿದ್ದು, ಉತ್ತರ ಕರ್ನಾಟ ಭಾಗದಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಬೆಳಗಾವಿ, ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಳೆ ಹೆಚ್ಚಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದು, ಸಂಸತಸ ಮೂಡಿಸಿದೆ. ಹಾಗಿದ್ದರೇ  ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬುವುದನ್ನು ನೋಡೋಣ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 31.73 91.13 32146 561
ತುಂಗಭದ್ರಾ ಜಲಾಶಯ (Tungabhadra Dam) 497.71 105.79 12.77 99.94 9536 272
ಮಲಪ್ರಭಾ ಜಲಾಶಯ (Malaprabha Dam) 633.8 37.73 8.06 23.31 10437 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 29.27 88.52 32077 1106
ಕಬಿನಿ ಜಲಾಶಯ (Kabini Dam) 696.13 19.52 12.47 19.38 4574 800
ಭದ್ರಾ ಜಲಾಶಯ (Bhadra Dam) 657.73 71.54 28.34 67.35 4227 164
ಘಟಪ್ರಭಾ ಜಲಾಶಯ (Ghataprabha Dam) 662.91 51 11.07 32.96 20813 98
ಹೇಮಾವತಿ ಜಲಾಶಯ (Hemavathi Dam) 890.58 37.10 17.04 35.27 6752 200
ವರಾಹಿ ಜಲಾಶಯ (Varahi Dam) 594.36 31.10 5.77 13.61 4868 302
ಹಾರಂಗಿ ಜಲಾಶಯ (Harangi Dam)​​ 871.38 8.50 5.83 7.19 5748 50
ಸೂಫಾ (Supa Dam) 564.33 145.33 41.40 64.24 10983 572

ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಪ್ರವಾಹ ಭೀತಿ ಎದುರಾದ ಹಿನ್ನೆಲೆ ಮುಲ್ಲಾಬಾರಿ ಡ್ಯಾಂನಿಂದ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ನಾಗರಾಳ ಬಳಿಯಿರೋ ಜಲಾಶಯ ಮುಲ್ಲಾಬಾರಿ ಡ್ಯಾಂನ ಕೆಳ ಬಾಗದಲ್ಲಿರುವ ಗರಗಪಳ್ಳಿ ಗ್ರಾಮಕ್ಕೆ ಚಿಂಚೋಳಿಯಿಂದ ರಸ್ತೆ ಸಂಚಾರ ಕಡಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:20 am, Fri, 21 July 23