ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿಗೆ ಮೇಜರ್‌ ಸರ್ಜರಿ: ನೂತನ ಐವರು ಕಾರ್ಯಾಧ್ಯಕ್ಷರ ನೇಮಕ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 23, 2024 | 6:22 PM

ಲೋಕಸಭಾ ಚುನಾವಣೆ ಹೊತ್ತಲ್ಲಿ ಕೆಪಿಸಿಸಿಗೆ ಮೇಜರ್‌ ಸರ್ಜರಿ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಹೊಸದಾಗಿ ಐವರನ್ನು ಎಐಸಿಸಿ ನೇಮಿಸಿದೆ. ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್​​ ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ನೇಮಕ ಮಾಡಲಾಗಿದೆ. 

ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿಗೆ ಮೇಜರ್‌ ಸರ್ಜರಿ: ನೂತನ ಐವರು ಕಾರ್ಯಾಧ್ಯಕ್ಷರ ನೇಮಕ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಮಾರ್ಚ್​ 23: ಲೋಕಸಭೆ ಚುನಾವಣೆಗೆ ಕೌಂಟ್​​ಡೌನ್​ ಶುರುವಾಗಿದೆ. ಈಗಾಗಲೇ ಮತದಾನದ ದಿನಾಂಕವನ್ನು ಸಹ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ರಾಜ್ಯದಲ್ಲಿ ಚುನಾವಣಾ ಕಾವು ಜಾಸ್ತಿ ಆಗುತ್ತಿದ್ದು, ಇದರ ಮಧ್ಯೆ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ (KPCC) ಯಲ್ಲಿ ಮೇಜರ್‌ ಸರ್ಜರಿ ಮಾಡಲಾಗಿದೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಐವರು ನೂತನ ಕಾರ್ಯಾಧ್ಯಕ್ಷರನ್ನು ಆಲ್​ ಇಂಡಿಯಾ ಕಾಂಗ್ರೆಸ್​ ಕಮಿಟಿ (ಎಐಸಿಸಿ) ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಯಾರೆಲ್ಲ ನೇಮಕ

  • ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್​, ವಿನಯ್ ಕುಲಕರ್ಣಿ, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ನೇಮಕ.
  • ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ನೇಮಕ.
  • ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್‌.ಹನುಮಂತಯ್ಯ ನೇಮಕ.
  • ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ನೇಮಕ

ಸಿದ್ದರಾಮಯ್ಯ, ಶಿವಕುಮಾರ್ ನೇತೃತ್ವದಲ್ಲಿ ಸಭೆ​​: 14 ಕ್ಷೇತ್ರಗಳ ಬಗ್ಗೆ ತಂತ್ರಗಾರಿಕೆ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮೀಟಿಂಗ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು, ಸಚಿವರಾದ ಕೆ.ಜೆ.ಜಾರ್ಜ್‌, ಕೆ.ಹೆಚ್‌.ಮುನಿಯಪ್ಪ, ದಿನೇಶ್ ಗುಂಡೂರಾವ್​, ಕೃಷ್ಣ ಭೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌, ಚಂದ್ರಪ್ಪ, ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್‌, ವಿಧಾನಪರಿಷತ್‌ ಸದಸ್ಯರು.

ಇದನ್ನೂ ಓದಿ: ಸೋನಿಯಾ ಗಾಂಧಿಯ ತೇಜೋವಧೆ ಆರೋಪ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳ ವ್ಯಾಪ್ತಿಯ ಶಾಸಕರು, ಮಾಜಿ ಶಾಸಕರು, 14 ಕ್ಷೇತ್ರಗಳ ವ್ಯಾಪ್ತಿಯ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಭಾಗಿಯಾಗಿದ್ದು, ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳ ಬಗ್ಗೆ ತಂತ್ರಗಾರಿಕೆ ರೂಪಿಸಲಾಗಿದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:56 pm, Sat, 23 March 24