ಸಂಕ್ರಾಂತಿಯ ಶುಭಾಶಯಗಳು: ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್

Makar Sankranti 2024: ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ನಾಟಕದ ವಿವಿಧ ದೇಗುಲಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ.

ಸಂಕ್ರಾಂತಿಯ ಶುಭಾಶಯಗಳು: ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್
ಸಂಕ್ರಾಂತಿಯ ಶುಭಾಶಯಗಳು: ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್
Follow us
Ganapathi Sharma
|

Updated on:Jan 15, 2024 | 10:42 AM

ಬೆಂಗಳೂರು, ಜನವರಿ 15: ಮಕರ ಸಂಕ್ರಾಂತಿ (Makar Sankranti 2024) ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸಿರುವ ಮೋದಿ, ‘ಸಂಕ್ರಾಂತಿಯ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ’ ಎಂದು ಉಲ್ಲೇಖಿಸಿದ್ದಾರೆ.

ಸಾಧನೆ, ಧ್ಯಾನ ಮತ್ತು ದಾನದ ಪವಿತ್ರ ಸಂಪ್ರದಾಯದೊಂದಿಗೆ ಸಂಬಂಧ ಹೊಂದಿರುವ ಪವಿತ್ರ ಹಬ್ಬವಾದ ಮಕರ ಸಂಕ್ರಾಂತಿಯ ಶುಭಾಶಯಗಳು. ಈ ಪ್ರಕೃತಿಯ ಹಬ್ಬದಂದು, ಉತ್ತರಾಯಣ ಪರ್ವ ಕಾಲದಲ್ಲಿ ಸೂರ್ಯ ದೇವರು ನನ್ನ ದೇಶದ ಎಲ್ಲಾ ಕುಟುಂಬ ಸದಸ್ಯರಿಗೆ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಶುಭ ಹಾರೈಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ

ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿ ಶಾಂತಿ,‌ ಸೌಹಾರ್ದತೆ, ಸಮೃದ್ಧಿಯ ಕಡೆಗೆ ನಾಡನ್ನು ಮುನ್ನಡೆಸಲಿ. ನಾಡು ಸಮೃದ್ಧ ಮಳೆ, ಬೆಳೆ ಕಂಡು ಕೃಷಿಕ – ಶ್ರಮಿಕರ ಬದುಕಿನಲ್ಲಿ ಸುಖ-ಶಾಂತಿಯ ಫಸಲು ಹುಲುಸಾಗಿ ಬೆಳೆಯಲಿ, ಅವರ ಬಾಳು ಬಂಗಾರವಾಗಲಿ. ನಾಡ ಬಾಂಧವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ನಾಟಕದ ವಿವಿಧ ದೇಗುಲಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ಸಮಯದಲ್ಲಿ ಅರ್ಥಪೂರ್ಣ ವಸ್ತು ಪ್ರದರ್ಶನ ನಡೆಸಿಕೊಟ್ಟ ಶಿಡ್ಲಘಟ್ಟ ಸಿಟಿಜನ್ ಶಾಲೆಯ ಮಕ್ಕಳು, ವೀಡಿಯೊ ನೋಡಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ದೇಶದ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:42 am, Mon, 15 January 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ