ಮಕರ ಸಂಕ್ರಾಂತಿ: ಬೆಂಗಳೂರು, ಚೆನ್ನೈ, ಮೈಸೂರು ಮಧ್ಯೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳು, ಇಲ್ಲಿದೆ ವಿವರ

ಮಕರ ಸಂಕ್ರಾಂತಿ / ಪೊಂಗಲ್ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆ ಬೆಂಗಳೂರು ಹಾಗೂ ಚೆನ್ನೈ, ಬೆಂಗಳೂರು, ಮೈಸೂರು ಚೆನ್ನೈ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಘೋಷಿಸಿದೆ. ರೈಲುಗಳು ಹೊರಡುವ ಹಾಗೂ ತಲುಪುವ ಸಮಯ, ಎಲ್ಲೆಲ್ಲಿ ನಿಲುಗಡೆ ಹೊಂದಿವೆ ಎಂಬುದೂ ಸೇರಿದಂತೆ ವಿವರವಾದ ಮಾಹಿತಿ ಇಲ್ಲಿದೆ.

ಮಕರ ಸಂಕ್ರಾಂತಿ: ಬೆಂಗಳೂರು, ಚೆನ್ನೈ, ಮೈಸೂರು ಮಧ್ಯೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳು, ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Jan 08, 2025 | 8:07 AM

ಬೆಂಗಳೂರು, ಜನವರಿ 8: ಮಕರ ಸಂಕ್ರಾಂತಿ ಅಥವಾ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ನೈಋತ್ಯ ರೈಲ್ವೆ ಘೋಷಿಸಿದೆ. ಜತೆಗೆ ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಿದೆ.

ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಸಂದೇಶ ಪ್ರಕಟಿಸಿ ಮಾಹಿತಿ ಹಂಚಿಕೊಂಡಿರುವ ನೈಋತ್ಯ ರೈಲ್ವೆ, ವಿಶೇಷ ರೈಲುಗಳ ವೇಳಾಪಟ್ಟಿ, ನಿಲುಗಡೆ ಮತ್ತಿತರ ವಿವರಗಳನ್ನು ಹಂಚಿಕೊಂಡಿದೆ.

ರೈಲು ಸಂಖ್ಯೆ 07319 / 07320 ವಿಶೇಷ ರೈಲು ಕೆಎಸ್‌ಆರ್ ಬೆಂಗಳೂರಿನಿಂದ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್​ಗೆ ಹಾಗೂ ಅಲ್ಲಿಂದ ಕೆಎಸ್‌ಆರ್ ಬೆಂಗಳೂರಿಗೆ ಸಂಚರಿಸಲಿದೆ.

ವಿಶೇಷ ಎಕ್ಸ್​ಪ್ರೆಸ್ ರೈಲಿನ ವೇಳಾಪಟ್ಟಿ

ರೈಲು ಸಂಖ್ಯೆ 07319 ಕೆಎಸ್‌ಆರ್ ಬೆಂಗಳೂರು -ಡಾ.ಎಂಜಿಆರ್ ಚೆನ್ಸೆ ಸೆಂಟ್ರಲ್ ವಿಶೇಷ ಎಕ್ಸ್​​​ಪ್ರೆಸ್ ರೈಲು ಜನವರಿ 10 ರಂದು ಬೆಳಿಗ್ಗೆ 08:05 ಕ್ಕೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 02:40 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.

ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್​ನಿಂದ ರೈಲು (07320) ಜನವರಿ 10 ರಂದು ಮಧ್ಯಾಹ್ನ 03:40 ಕ್ಕೆ ಹೊರಟು, ಅದೇ ದಿನ ರಾತ್ರಿ 10:50 ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ವಿಶೇಷ ಎಕ್ಸ್​ಪ್ರೆಸ್ ರೈಲಿಗೆ ಎಲ್ಲೆಲ್ಲಿ ನಿಲುಗಡೆ?

ಈ ರೈಲು ಎರಡೂ ಮಾರ್ಗಗಳಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ವೆಟ್ಟಿ, ಅಂಬೂರು, ಗುಡಿಯಾಟ್ಟಂ, ಕಟಪಾಡಿ, ಶೋಲಿಂಗೂರ್, ಅರಕ್ಕೋಣಂ, ತಿರುವಳೂರು ಮತ್ತು ಪೆರಂಬೂರಿನಲ್ಲಿ ನಿಲುಗಡೆ ಹೊಂದಿದೆ.

ಈ ರೈಲು 1 ಎಸಿ- ತ್ರಿಟೈರ್, 11 ಸ್ವೀಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್‌ಆರ್​ಡಿ ಸೇರಿದಂತೆ 17 ಬೋಗಿಗಳನ್ನು ಒಳಗೊಂಡಿರುತ್ತದೆ.

ಬೆಂಗಳೂರು ತೂತುಕುಡಿ ಮೈಸೂರು ವಿಶೇಷ ಎಕ್ಸ್​​ಪ್ರೆಸ್ ರೈಲಿನ ವಿವರ

ರೈಲು ಸಂಖ್ಯೆ 06569 ಎಸ್‌ಎಂವಿಟಿ ಬೆಂಗಳೂರು-ತೂತುಕುಡಿ ವಿಶೇಷ ಎಕ್ಸ್​​ಪ್ರೆಸ್ ರೈಲು ಜನವರಿ 10 ರಂದು ರಾತ್ರಿ 10:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು, ಜನವರಿ 11 ರಂದು ಬೆಳಿಗ್ಗೆ 11:00 ಗಂಟೆಗೆ ತೂತುಕುಡಿ ತಲುಪಲಿದೆ. ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರ್, ದಿಂಡಿಗಲ್, ಮಧುರೈ, ವಿರುಡುನಗರ, ಸಾತೂರ್ ಮತ್ತು ಕೋವಿಲ್ಪಟ್ಟಿಯಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 06570 ಜನವರಿ 11 ರಂದು ಮಧಾಹ್ನ 01:00 ಕ್ಕೆ ತೂತುಕುಡಿಯಿಂದ ಹೊರಟು ಜನವರಿ 12 ರಂದು ಬೆಳಿಗ್ಗೆ 06:30 ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಕೋವಿಲಟ್ರಿ, ಸಾತೂರ್, ವಿರುಡುನಗರ, ಮದುರೆ, ದಿಂಡಿಗಲ್, ಕರೂ‌ರ್, ನಾಮಕ್ಕಲ್, ಸೇಲಂ, ಬಂಗಾರಪೇಟೆ, ಕೃಷ್ಣರಾಜಪುರಂ, ಕೆಎಸ್‌ಆರ್ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲು 13 ಎಸಿ ತ್ರಿಟೈರ್, 3 ಸ್ವೀಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಲಗೇಜ್ / ಜನರೇಟರ್ / ಬ್ರೇಕ್ ವ್ಯಾನ್​​ಗಳು ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ: ಮಕರ ಸಂಕ್ರಾಂತಿಯಂದು ಸ್ನಾನ ಮತ್ತು ದಾನಕ್ಕೆ ಶುಭ ಸಮಯ ಯಾವಾಗ?

ಈ ರೈಲುಗಳು ಪ್ರತಿ ನಿಲ್ದಾಣಕ್ಕೆ ಆಗಮಿಸುವ ಸಮಯ, ನಿರ್ಗಮನ ಸಮಯ ತಿಳಿಯುವುದಕ್ಕಾಗಿ ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಬಹುದು ಅಥವಾ ಸಹಾಯವಾಣಿ 139 ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:58 am, Wed, 8 January 25

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM