Karnataka Dam Water Level: ಮಲಪ್ರಭಾ ಡ್ಯಾಂ ಭರ್ತಿಗೆ ಕೆಲವೇ ಅಡಿ ಬಾಕಿ, 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

|

Updated on: Aug 02, 2024 | 7:29 AM

ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಾಕ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಪ್ರಮುಖ ನದಿ ಮಲಪ್ರಭಾ ಮೈದುಂಬಿ ಹರಿಯುತ್ತಿದೆ. ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಬಾಗಲಕೊಟೆ ಮತ್ತು ಬೆಳಗಾವಿ ಜಿಲ್ಲೆಯ ಕೆಲ ಗ್ರಾಮಗಳು ಮುಳುಗಡೆಯಾಗಿವೆ. ಮಲಪ್ರಭಾ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜಲಾಶಯಕ್ಕೆ ಇಂದು ಒಳಹರಿವು ಮತ್ತು ಹೊರಹರಿವು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಮಲಪ್ರಭಾ ಡ್ಯಾಂ ಭರ್ತಿಗೆ ಕೆಲವೇ ಅಡಿ ಬಾಕಿ, 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಮಲಪ್ರಭಾ ನದಿ
Follow us on

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಹತ್ತಿರ ನವಿಲುತೀರ್ಥದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ ಜಲಾಶಯ ಕಟ್ಟಲಾಗಿದೆ. ಮಲಪ್ರಭಾ ಜಲಾಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಮಲಪ್ರಭಾ ಜಲಾಶಯಕ್ಕೆ (Karnataka Dam Water Level) ಇಂದು (ಆಗಸ್ಟ್​.02) ಒಳಹರಿವು, ಹೊರಹರಿವು ಮತ್ತು ಡ್ಯಾಂ ನೀರಿನ ಮಟ್ಟ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 66.70 108.35 3,41,384 3,52,384
ತುಂಗಭದ್ರಾ ಜಲಾಶಯ (Tungabhadra Dam) 497.71 105.79 97.14 79.17 1,25,373 1,55,000
ಮಲಪ್ರಭಾ ಜಲಾಶಯ (Malaprabha Dam) 633.80 37.73 32.67 19.89 14,968 8,221
ಕೆ.ಆರ್.ಎಸ್ (KRS Dam) 38.04 49.45 46.06 35.15 1,35,723 1,50,015
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 135.35 68.99 53,061 3,358
ಕಬಿನಿ ಜಲಾಶಯ (Kabini Dam) 696.13 19.52 17.99 19.13 49,206 50,000
ಭದ್ರಾ ಜಲಾಶಯ (Bhadra Dam) 657.73 71.54 68.83 45.44 56,152 65,724
ಘಟಪ್ರಭಾ ಜಲಾಶಯ (Ghataprabha Dam) 662.91 51.00 47.78 36.14 33,515 38,644
ಹೇಮಾವತಿ ಜಲಾಶಯ (Hemavathi Dam) 890.58 37.10 34.75 29.63 43,106 45,210
ವರಾಹಿ ಜಲಾಶಯ (Varahi Dam) 594.36 31.10 18.39 10.60 5,984 0
ಹಾರಂಗಿ ಜಲಾಶಯ (Harangi Dam)​​ 871.38 8.50 6.95 8.00 8,446 8,500
ಸೂಫಾ (Supa Dam) 564.00 145.33 107.76 75.80 42,569 72
ನಾರಾಯಣಪುರ ಜಲಾಶಯ (Narayanpura Dam) 492.25 33.31 23.86 31.01 3,36,450 3,33,064
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 1851 24.72 693 135

ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2075.85 ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಈಗ 24400 ಸಾವಿರ ಕ್ಯೂಸೆಕ್ಸ್​ ನೀರು ಹರಿದು ಬರುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ