ಮಲೆ ಮಹದೇಶ್ವರ ಬೆಟ್ಟದಲ್ಲಿ ಗ್ರೀನ್ ಟುಮಾರೋ ಎಂಎಂ ಹಿಲ್ಸ್​ಗೆ ಚಾಲನೆ: ಏನಿದು ಹೊಸ ಯೋಜನೆ?

ಮಲೆ ಮಹದೇಶ್ವರ ಬೆಟ್ಟದಲ್ಲಿ ಹೆಚ್ಚುತ್ತಿರುವ ತ್ಯಾಜ್ಯ ಸಮಸ್ಯೆಯನ್ನು ನಿಭಾಯಿಸಲು "ಗ್ರೀನ್ ಟುಮಾರೋ ಎಂಎಂ ಹಿಲ್ಸ್" ಯೋಜನೆ ಆರಂಭಿಸಲಾಗಿದೆ. ಈ ಯೋಜನೆಯು ಕಸ ವಿಲೇವಾರಿ, ಪ್ಲಾಸ್ಟಿಕ್ ಮತ್ತು ಕಾಗದದ ಪುನರ್ಬಳಕೆ ಹಾಗೂ ಪರಿಸರ ಸಂರಕ್ಷಣೆಗೆ ಒತ್ತು ನೀಡುತ್ತದೆ. ತ್ಯಾಜ್ಯ ಮುಕ್ತ ಮತ್ತು ಹಸಿರು ಬೆಟ್ಟವನ್ನು ನಿರ್ಮಿಸುವ ಗುರಿ ಹೊಂದಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಗ್ರೀನ್ ಟುಮಾರೋ ಎಂಎಂ ಹಿಲ್ಸ್​ಗೆ ಚಾಲನೆ: ಏನಿದು ಹೊಸ ಯೋಜನೆ?
ಮಲೆ ಮಹದೇಶ್ವರ ಬೆಟ್ಟದಲ್ಲಿ ಗ್ರೀನ್ ಟುಮಾರೋ ಎಂಎಂ ಹಿಲ್ಸ್​ಗೆ ಚಾಲನೆ: ಏನಿದು ಹೊಸ ಯೋಜನೆ?
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Nov 15, 2024 | 8:52 PM

ಚಾಮರಾಜನಗರ, ನವೆಂಬರ್​ 15: ರಾಜ್ಯ ಪ್ರವಾಸಿತಾಣಗಳ ಪೈಕಿ ಮಲೆ ಮಹದೇಶ್ವರ ಬೆಟ್ಟ (Male Mahadeshwara Betta) ಕೂಡ ಒಂದು. ಮಾದಪ್ಪನ ಸನ್ನಿಧಾನಕ್ಕೆ ಆಗಮಿಸುವ ಭಕ್ತವೃಂದದಿಂದ ಎದುರಾಗುತ್ತಿರುವ ತ್ಯಾಜ್ಯವನ್ನ ಸಮರ್ಪಕವಾಗಿ ನಿರ್ವಹಿಸಲು ಪ್ರಾಧಿಕಾರ ಮುಂದಾಗಿದ್ದು ಗ್ರೀನ್ ಟುಮಾರೋ ಎಂಎಂ ಹಿಲ್ಸ್​​ಗೆ ಚಾಲನೆ ನೀಡಲಾಗಿದೆ.

ಗ್ರೀನ್ ಟುಮಾರೋ ಎಂಎಂ ಹಿಲ್ಸ್ ಹೊಸ ಯೋಜನೆ

ಮಲೆ ಮಹದೇಶ್ವರ ಬೆಟ್ಟ ರಾಜ್ಯದ ಪ್ರಮುಖ ಪೂಜ್ಯ ಪ್ರೇಕ್ಷಣೀಯ ಸ್ಥಳಗಳ ಪೈಕಿಯೊಂದು. ವಿಶೇಷ ಜಾತ್ರಾ ಮಹೋತ್ಸವ ಸೇರಿದಂತೆ ಅಮವಾಸ್ಯೆ ದಿನಗಳಂದು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ಬರುವಂತ ಭಕ್ತರು ಪ್ಲಾಸ್ಟಿಕ್ ವಸ್ತುಗಳು ಸೇರಿದಂತೆ ಅನೇಕ ತ್ಯಾಜ್ಯಗಳನ್ನ ಅಲ್ಲಲ್ಲಿ ಎಸೆಯುತ್ತಾರೆ.

ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಗಿಫ್ಟ್; ಚಾಮರಾಜನಗರದ ನಾಗಮಲೆಗೆ ಉಚಿತ ಪ್ರವೇಶಕ್ಕೆ ಅನುಮತಿ

ಈ ಕಸವನ್ನ ಸಮರ್ಪಕವಾಗಿ ನಿರ್ವಹಣೆ ಮಾಡಲು ಈಗ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ಮುಂದಾಗಿದ್ದು ಗ್ರೀನ್ ಟುಮಾರೋ ಎಂಎಂ ಹಿಲ್ಸ್ ಎಂಬ ಶೀರ್ಷಿಕೆಯಲ್ಲಿ ಹೊಸ ಯೋಜನೆಗೆ ಮುಂದಾಗಿದ್ದು ಈಗ ಪ್ರಾಧಿಕಾರದ ಜತೆ ಈಗ ಮೈಸೂರಿನ ಮೈ ಕಾಪ್ಸ್ ಸಂಸ್ಥೆಯ ಸಹಭಾಗಿತ್ವದೊಂದಿಗೆ ಕಾರ್ಯ ನಿರ್ವಹಿಸಲಿದೆ.

ಇನ್ನು ಈ ಗ್ರೀನ್ ಟುಮಾರೊ ಎಂಎಂ ಹಿಲ್ಸ್​​ನ ಕಾರ್ಯ ವೈಖರಿ ಏನೆಂದರೆ ತ್ಯಾಜ್ಯ ಮುಕ್ತ ಮಹದೇಶ್ವರ ಬೆಟ್ಟ ಎಂಬ ಶೀರ್ಷಿಕೆಯಡಿ ಮಲೆ ಮಹದೇಶ್ವರ ಬೆಟ್ಟವನ್ನ ಕಸ ಮುಕ್ತ ಬೆಟ್ಟವನ್ನಾಗಿಸೋದು. ಕಸ ಹಾಗೂ ತ್ಯಾಜ್ಯ ವಿಲೇವಾರಿಯನ್ನ ಸಮರ್ಪಕವಾಗಿ ಮಾಡೋದು. ಮಲೆ ಮಹದೇಶ್ವರ ಬೆಟ್ಟ ಸುತ್ತಾ ಕಾಡಿದ್ದು ಈ ತ್ಯಾಜ್ಯದಿಂದ ಪ್ರಕೃತಿಯ ಸೌಂದರ್ಯ ಹಾಳು ಮಾಡದೆ ಹಸಿರನ್ನಾಗಿ ಇರಿಸುವುದರ ಜತೆಗೆ ಕಾಡು ಪ್ರಾಣಿಗಳಿಗೆ ತ್ಯಾಜ್ಯದಿಂದ ಹಾನಿಯಾಗದಂತೆ ನೋಡಿಕೊಳ್ಳುವುದಾಗಿದೆ.

ಇದನ್ನೂ ಓದಿ: ಹೀಗೂ ಒಂದು ಹಬ್ಬವಿದೆ ನೋಡಿ: ಇಲ್ಲಿ ಸೆಗಣಿಯಲ್ಲಿ ಹೊರಳಾಡಿ, ಅದರಿಂದಲೇ ಹೊಡೆದಾಡಿಕೊಳ್ಳುತ್ತಾರೆ ಜನ!

ಶೇಖರಣೆಯಾದ ತಾಯಾಜ್ಯವನ್ನ ಹೊಸ ತಂತ್ರಜ್ಞಾನದ ಮೂಲಕ ತಾಯಾಜ್ಯವನ್ನ ಬೇರೆಡೆ ಸಮರ್ಪಕವಾಗಿ ನಿರ್ವಹಣೆ ಮಾಡುವುದರ ಜೊತೆಗೆ ಪ್ಲಾಸ್ಟಿಕ್ ಬಾಟಲ್ ಹಾಗೂ ವೇಸ್ಟ್ ಪೇಪರ್​ಗಳನ್ನ ಸಂಗ್ರಹಿಸಿ ರಿ ಸೈಕಲ್ ಮಾಡುವುದು ಸಹ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ಕಾರ್ಯದರ್ಶಿ  ರಘು ಹೇಳಿದ್ದಾರೆ. ಪ್ರಕೃತಿಗೆ ಧಕ್ಕೆ ತರದೆ ಕಸ ಹಾಗೂ ತ್ಯಾಜ್ಯದಿಂದ ಮುಕ್ತಿ ನೀಡಲು ಪ್ರಾಧಿಕಾರ ಮುಂದಾಗಿದ್ದು ಈ ಯೋಜನೆ ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ